Minister Eshwar Khandre: ಜನರಿಗೆ ಗುಡ್‌ನ್ಯೂಸ್‌: ಇ-ಸ್ವತ್ತು, ಕಾಮಗಾರಿ ದೂರು ದಾಖಲಿಸಲು ಆನ್‌ಲೈನ್‌ ವ್ಯವಸ್ಥೆ

Minister Eshwar Khandre: ಗ್ರಾಮ ಪಂಚಾಯತಿ ಸೇವೆಗಳಿಗೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ದಾಖಲಿಸಲು ಗ್ರಾಮೀಣರಿಗೆ ಅನುವಾಗುವಂತೆ ಡ್ಯಾಷ್ ಬೋರ್ಡ್ ಆಧಾರಿತ 'ದೂರು ದಾಖಲು- ಇತ್ಯರ್ಥಕ್ಕೆ ಆನ್ ಲೈನ್ ವ್ಯವಸ್ಥೆ' ರೂಪಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಇಲಾಖೆಯ ಕಾರ್ಯದರ್ಶಿಯವರಿಗೆ ಲಿಖಿತ ಸೂಚನೆ ನೀಡಿರುವ ಅವರು, ಇ-ಸ್ವತ್ತು, ತೆರಿಗೆ ನಿರ್ಧರಣೆ, ಸಾಮಾಜಿಕ ಅರಣ್ಯೀಕರಣ, ಗ್ರಾ.ಪಂ.ವ್ಯಾಪ್ತಿಯ ಕೆರೆ ನಿರ್ವಹಣೆ, ಕೆರೆ ಒತ್ತುವರಿ, ಜೆಜೆಎಂ, ಕುಡಿಯುವ ನೀರಿನ ಸಮಸ್ಯೆ, ನೈರ್ಮಲ್ಯ, ಗ್ರಾಮೀಣ ರಸ್ತೆ, ವಿಬಿಜಿ ರಾಮ್ ಜಿ, ಗ್ರಾಮೀಣ ಆಸ್ತಿಗಳ ಸೃಜನೆ ಸೇರಿದಂತೆ ಯಾವುದೇ ಅಹವಾಲನ್ನು ಗ್ರಾಮೀಣರು ದಾಖಲಿಸಲು ಮತ್ತು ಅದಕ್ಕೆ ತಕ್ಷಣ ಸ್ಪಂದಿಸಲು ಈ ವ್ಯವಸ್ಥೆ ರೂಪಿಸಲು ನಿರ್ದೇಶನ ನೀಡಿದ್ದಾರೆ.

Minister Eshwar Khandre Online System to File Complaints on E-Swathu Public Services and Works

Minister Eshwar Khandre: ಕುಂದುಕೊರತೆಗೆ ಸ್ಪಂದಿಸುವುದು ನಮ್ಮ ಜವಾಬ್ದಾರಿ

ರಾಜ್ಯದ ಸುಮಾರು ಅರ್ಧದಷ್ಟು ಜನಸಂಖ್ಯೆಯೊಂದಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನೇರ ಸಂಪರ್ಕ ಹೊಂದಿದ್ದು, ಗ್ರಾಮೀಣರ ಕುಂದುಕೊರತೆಗೆ ಸ್ಪಂದಿಸುವುದು ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಇಲಾಖೆಯಲ್ಲಿ ಪಾರದರ್ಶಕತೆ ತರಲು, ಕೇಂದ್ರ ಹಾಗೂ ರಾಜ್ಯ ಪ್ರಾಯೋಜಿತ ಯೋಜನೆ ಕಾಮಗಾರಿಗಳಲ್ಲಿನ ಲೋಪದೋಷ, ಮೂಲಸೌಕರ್ಯ ಗುಣಮಟ್ಟ ಕೊರತೆ, ಗ್ರಾ.ಪಂ. ಒದಗಿಸುವ ವಿವಿಧ ಸೇವೆಗಳಲ್ಲಿನ ವಿಳಂಬ, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಚಿವಾಲಯಕ್ಕೆ ದೂರುಗಳು ಬರುತ್ತಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು, ಗ್ರಾಮೀಣರು ಈ ಸಂಬಂಧ ವಿಡಿಯೋ ಮತ್ತು ಫೋಟೋ ಸಹಿತ ದೂರು ದಾಖಲಿಸಲು ಮತ್ತು ಈ ದೂರಿಗೆ ಸಂಬಂಧಿಸಿದಂತೆ ಕ್ರಮ ವಹಿಸುವ ಅಧಿಕಾರಿಯ ದೂರವಾಣಿ, ಹೆಸರು ಇತ್ಯಾದಿ ಮಾಹಿತಿ ಪಡೆಯಲು ಮತ್ತು ದೂರಿನ ಸ್ಥಿತಿಗತಿ ಅರಿಯಲು ಮಿಗಿಲಾಗಿ ನಿಗದಿತ ಕಾಲಮಿತಿಯಲ್ಲಿ ದೂರುಗಳನ್ನು ಇತ್ಯರ್ಥಪಡಿಸಲು ಅನುವಾಗುವಂತೆ ಸರಳ ಪ್ರಕ್ರಿಯೆಯ ಆಪ್ ಮತ್ತು ಡ್ಯಾಷ್ ಬೋರ್ಡ್ ಸಹಿತ ವೆಬ್ ಪೋರ್ಟಲ್ ಅಭಿವೃದ್ಧಿ ಪಡಿಸಲು ಕ್ರಮ ವಹಿಸುವಂತೆ ಈಶ್ವರ ಖಂಡ್ರೆ ಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ.

ಜಿಬಿಎ, ಬಿಡಬ್ಲ್ಯುಎಸ್ಎಸ್.ಬಿ, ಬಿಡಿಎ, ಬಿಎಂ.ಆರ್.ಸಿ.ಎಲ್, ಬೆಸ್ಕಾಂ ಮೊದಲಾದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ದೂರು ದಾಖಲಿಸಿ ಪರಿಹಾರ ಪಡೆಯಲು https://nammabengaluru.org.in/ ಮತ್ತು Sahaaya ಆಪ್ ನಿರ್ಮಿಸಿರುವ ಮಾದರಿಯಲ್ಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ವಿಭಾಗಗಳ ಬಗ್ಗೆ ದೂರು ದಾಖಲಿಸಲು ಏಕ ಗವಾಕ್ಷಿ ಯೋಜನೆ ಜಾರಿಗೆ ತರುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

Minister Eshwar Khandre: ಗ್ರಂಥಪಾಲಕರಿಗೆ 19200ರೂ. ಗೌರವಧನ

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಅರಿವು ಕೇಂದ್ರ (ಗ್ರಂಥಾಲಯ)ಗಳ ಮೇಲ್ವಿಚಾರಕರಿಗೆ 19200ರೂ. ಕನಿಷ್ಠ ವೇತನ ಖಾತ್ರಿ ಪಡಿಸಲು ಕ್ರಮ ವಹಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಸುಮಾರು 5420ಕ್ಕೂ ಅಧಿಕ ಗ್ರಂಥಾಲಯ ಮೇಲ್ವಿಚಾರಕರಿದ್ದು, ಇವರಿಗೆ ಈ ಹಿಂದೆ 12 ಸಾವಿರ ರೂ. ಗೌರವ ಧನ ನೀಡಲಾಗುತ್ತಿತ್ತು, ಕಾರ್ಮಿಕ ಇಲಾಖೆ ಕನಿಷ್ಠ ವೇತನ ಪರಿಷ್ಕರಿಸಿ ಅಧಿಸೂಚನೆ ಹೊರಡಿಸಿದ ತರುವಾಯ ಇವರ ಗೌರವಧನ 19,201ರೂ. ಆಗಿದೆ ಎಂದು ತಿಳಿಸಿದ್ದಾರೆ.

ಗ್ರಂಥಾಲಯ ಮೇಲ್ವಿಚಾರಕರಿಗೆ ನೀಡುವ ಮಾಸಿಕ 19201 ರೂ.ಗಳ ಪೈಕಿ 12,000ರೂ.ಗಳನ್ನು ಸರ್ಕಾರದಿಂದ ಪಾವತಿಸಲಾಗುತ್ತಿದ್ದು, ಉಳಿಕೆ ಮೊತ್ತ 7201ರೂ.ಗಳನ್ನು ಇನ್ನು ಮುಂದೆ ರಾಜ್ಯಮಟ್ಟದಲ್ಲಿ ಸಂಗ್ರಹಿಸಲಾಗುವ ಗ್ರಂಥಾಲಯ ಉಪಕರ (ಲೈಬ್ರೆರಿ ಸೆಸ್)ದಿಂದ ಪಾವತಿಸಲು ತಾವು ಅನುಮೋದನೆ ನೀಡಿರುವುದಾಗಿ ತಿಳಿಸಿದ್ದಾರೆ. ಈ ನಿರ್ಧಾರದಿಂದಾಗಿ ಇನ್ನು ಮುಂದೆ ಅರಿವು ಕೇಂದ್ರದ ಪ್ರತಿ ಗ್ರಂಥಾಲಯ ಮೇಲ್ವಿಚಾರಕರಿಗೆ ಮಾಸಿಕ 19201ರೂ. ಕನಿಷ್ಠ ಗೌರವಧನ ಪಾವತಿಯನ್ನು ಖಚಿತಪಡಿಸುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಅರಿವು ಕೇಂದ್ರಗಳಿಗೆ ಕಿಯೋನಿಕ್ಸ್ ಹೊಸದಾಗಿ ಹೊರತಂದಿರುವ ಎ.ಐ. ಆಧಾರಿತ ಕಂಪ್ಯೂಟರ್ ಗಳನ್ನು ನೀಡುವುದಾಗಿ ತಿಳಿಸಿದೆ. ಇದರಿಂದ ವಿದ್ಯಾರ್ಥಿಗಳ, ಗ್ರಾಮೀಣ ಯುವಜನರ ಕಲಿಕೆಗೆ ಅನುಕೂಲವಾಗಲಿದೆ ಎಂದರು. ಗ್ರಾಮೀಣ ಜನರಲ್ಲಿ ಓದುವ ಹವ್ಯಾಸ ಹೆಚ್ಚಿಸಲು ಗ್ರಂಥಾಲಯಗಳಿಗೆ ಮೇಜು, ಕುರ್ಚಿ ಮೊದಲಾದ ಮೂಲಸೌಕರ್ಯ ಒದಗಿಸುವುದರ ಜೊತೆಗೆ ಉತ್ತಮ ಪುಸ್ತಕ ಸರಬರಾಜು ಮಾಡಲಾಗುತ್ತಿದೆ. ಜೊತೆಗೆ ಡಿಜಿಟಲ್ ಗ್ರಂಥಾಲಯಗಳ ಅಭಿವೃದ್ಧಿಗೂ ಕ್ರಮ ವಹಿಸಲಾಗಿದೆ ಎಂದರು.

ಅರಿವು ಕೇಂದ್ರಗಳಲ್ಲಿ ಸ್ಥಳೀಯ ಉತ್ಸಾಹಿ ಯುವಜನರಿಗೆ ವಿವಿಧ ವಿದೇಶೀ ಭಾಷೆಗಳನ್ನು ಮಾತನಾಡುವ ತರಬೇತಿ ಶಿಬಿರಗಳನ್ನೂ ಆಯೋಜಿಸುವ ಮೂಲಕ ಅವರ ಉದ್ಯೋಗಾರ್ಹತೆ ಹೆಚ್ಚಿಸಲು ಸೂಚಿಸಲಾಗಿದೆ ಎಂದೂ ಈಶ್ವರ ಖಂಡ್ರೆ ತಿಳಿಸಿದರು.

ವಾರಾಂತ್ಯದಲ್ಲಿ ಕಾರ್ಯನಿರ್ವಹಿಸುವ ಗ್ರಂಥಾಲಯ

ಯಾವ ಗ್ರಾಮಗಳಲ್ಲಿ ಗ್ರಂಥಾಲಯ ಇಲ್ಲವೋ ಅಲ್ಲಿ ಶಾಖಾ ಗ್ರಂಥಾಲಯ (ಬ್ರಾಂಚ್ ಲೈಬ್ರರಿ) ತೆರೆಯಲು ಕ್ರಮ ವಹಿಸಲಾಗಿದೆ. ವಾರದಲ್ಲಿ ಎರಡು ದಿನ ಅಂದರೆ ಶನಿವಾರ ಮತ್ತು ಭಾನುವಾರ ಈ ಗ್ರಂಥಾಲಯಗಳು ಕಾರ್ಯನಿರ್ವಹಿಸಲಿದ್ದು, ಇಲ್ಲಿನ ಗ್ರಂಥಪಾಲಕರಿಗೆ ಮಾಸಿಕ 2000ದಿಂದ 2500 ಗೌರವಧನ ನೀಡಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+