ರಾಕಿಂಗ್ ಸ್ಟಾರ್ ಯಶ್ ಟಾಕ್ಸಿಕ್ ಸಿನಿಮಾಗೆ ಶಾಕ್ ಕೊಟ್ಟ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು, ಅಕ್ಟೋಬರ್‌ 29: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾಗೆ ತಂಡಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಬಿಗ್ ಶಾಕ್ ನೀಡಿದ್ದಾರೆ. ಟಾಕ್ಸಿಕ್ ಚಿತ್ರತಂಡದ ವಿರುದ್ಧ ಕೇಸ್ ದಾಖಲಿಸುವಂತೆ ಅರಣ್ಯಾಧಿಕಾರಿಗಳಿಗೆ ಸ್ವತಃ ಸಚಿವರೇ ಸೂಚನೆ ನೀಡಿದ್ದಾರೆ.

ಹೆಚ್ಎಂಟಿ ವತಿಯಿಂದ ಕೆನರಾ ಬ್ಯಾಂಕ್‌ಗೆ ಮಾರಾಟ ಮಾಡಲಾಗಿದೆ ಎನ್ನಲಾದ ಅರಣ್ಯ ಭೂಮಿಯಲ್ಲಿ ಟಾಕ್ಸಿಕ್ ಸಿನಿಮಾದ ಸೆಟ್ ಹಾಕುವುದಕ್ಕೆ ಅನುಮತಿ ನೀಡಲಾಗಿತ್ತು. ಆದರೆ, ಈ ಅರಣ್ಯ ಭೂಮಿಯಲ್ಲಿದ್ದ ಮರಗಳ ನಾಶವನ್ನು ಟಾಕ್ಸಿಕ್ ಸಿನಿಮಾ ತಂಡವು ಸೆಟ್ ಹಾಕುವುದಕ್ಕಾಗಿ ಕಡಿದು ಹಾಕಿತ್ತು. ಈ ಹಿನ್ನೆಲೆಯಲ್ಲಿ ಪೀಣ್ಯದ ಎಚ್‌ಎಂಟಿ ಪ್ಲಾಂಟೇಷನ್‌ನಲ್ಲಿ ಮರ ಕಡಿದ ಅರೋಪಕ್ಕೆ ಟಾಕ್ಸಿಕ್ ಚಿತ್ರತಂಡ ಗುರಿಯಾಗಿದೆ.

Minister Eshwar Khandre Shocked To Rocking Star Yash Toxic Movie Team

ಹಲವು ದಿನಗಳಿಂದ ಪೀಣ್ಯದ ಬಳಿಯ ಹೆಚ್‌ಎಂಟಿ ಪ್ಲಾಂಟೇಷನ್‌ನಲ್ಲಿ ಸೆಟ್ ಹಾಕಿಕೊಂಡು ಚಿತ್ರೀಕರಣ ಆರಂಭಿಸಿದ್ದ ಟಾಕ್ಸಿಕ್ ಸಿನಿಮಾ ತಂಡವು, ನಿಯಮಾನುಸಾರ ಅನುಮತಿಯನ್ನು ಪಡೆದುಕೊಳ್ಳದೇ ಬೇಕಾಬಿಟ್ಟಿಯಾಗಿ ಮರಗಳನ್ನು ಕಡಿದು ಹಾಕಿದೆ. ಇದು ಅರಣ್ಯ ಇಲಾಖೆಯ ನಿಯಮಾನುಸಾರ ಅಪರಾಧವಾಗಿದೆ. ಅದರಲ್ಲೂ ಅರಣ್ಯ ಭೂಮಿಯಲ್ಲಿ ಮರ ಕಡಿಯುವುದು ದಂಡನೀಯ ಅಪರಾಧವಾಗಿದೆ. ಈ ಕುರಿತು ಸಚಿವ ಈಶ್ವರ್‌ ಖಂಡ್ರೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ

ಈ ಕುರಿತು ಸಚಿವ ಈಶ್ವರ್‌ ಖಂಡ್ರೆ ಅವರು ಮಾತನಾಡಿ, ರಾಕಿಂಗ್ ಸ್ಟಾರ್' ಯಶ್ ಅವರು 'ಟಾಕ್ಸಿಕ್' ಸಿನಿಮಾದ ಶೂಟಿಂಗ್ ಮಾಡುತ್ತಿದ್ದಾರೆ. ಈ ಚಿತ್ರದ ಸೆಟ್​ ನಿರ್ಮಾಣ ಮಾಡಲು ಮರಗಳಿಗೆ ಕೊಡಲಿ ಏಟು ಹಾಕಲಾಗಿದೆ. ಹೆಚ್​ಎಂಟಿ ತನ್ನ ವಶದಲ್ಲಿದ್ದ ಜಮೀನನ್ನು ಮಾರಾಟ ಮಾಡಿದೆ. ಮರ, ಗಿಡ ಎಲ್ಲಾ ಕಡಿದು ಸಿನಿಮಾ ಚಿತ್ರೀಕರಣಕ್ಕೆ ಬಾಡಿಗೆ ಕೊಟ್ಟಿದ್ದಾರೆ, ದುಡ್ಡು ಮಾಡ್ತಿದ್ದಾರೆ. ಎಲ್ಲಾ ರೀತಿಯ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಅವರಿಗೆ ಯಾವುದೇ ಅಧಿಕಾರ ಇಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು ಪೀಣ್ಯ ಪ್ಲಾಂಟೇಷನ್ 1 ಮತ್ತು 2ರಲ್ಲಿ ಒಟ್ಟು 599 ಎಕರೆ ಮೀಸಲು ಅರಣ್ಯ ಎಂದು ಗೆಜೆಟ್ ಅಧಿಸೂಚನೆ ಆಗಿದ್ದು, ಇದನ್ನು 1960ರ ದಶಕದಲ್ಲಿ ಡಿನೋಟಿಫಿಕೇಷನ್ ಮಾಡದೆ ಕಾನೂನು ಬಾಹಿರವಾಗಿ ಎಚ್.ಎಂ.ಟಿ. ಸಂಸ್ಥೆಗೆ ದಾನ, ಮಂಜೂರು ಹೆಸರಲ್ಲಿ ಹಸ್ತಾಂತರಿಸಲಾಗಿರುತ್ತದೆ. ಸುಪ್ರೀಂಕೋರ್ಟ್ 'Once a forest is always a forest unless de-notified' ಎಂದು ಹೇಳಿದ್ದು, ಡಿ ನೋಟಿಫಿಕೇಷನ್ ಆಗದ ಎಚ್.ಎಂ.ಟಿ. ವಶದಲ್ಲಿರುವ ಭೂಮಿ ಅರಣ್ಯವೇ ಆಗಿರುತ್ತದೆ. ಜೊತೆಗೆ ತನ್ನ ಸ್ವಾಧೀನದಲ್ಲಿರುವ ಅರಣ್ಯ ಭೂಮಿಯನ್ನು ಎಚ್.ಎಂ.ಟಿ. ವಿವಿಧ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳಿಗೆ ಅಕ್ರಮವಾಗಿ ಮಾರಾಟ ಮಾಡಿದ್ದು, ಇಲ್ಲಿ ಅರಣೇತರ ಚಟುವಟಿಕೆ ನಡೆಯುತ್ತಿರುತ್ತದೆ. ಈ ಅರಣ್ಯ ಪ್ರದೇಶದಲ್ಲಿ ಮರ ಗಿಡಗಳನ್ನು ಕಡಿದಿರುವುದು ಉಪಗ್ರಹ ಚಿತ್ರದಿಂದ ಗೋಚರಿಸುತ್ತಿದೆ.

ಎಚ್.ಎಂ.ಟಿ. ತನ್ನ ವಶದಲ್ಲಿರುವ ಅರಣ್ಯ ಭೂಮಿನ್ನು ಸಿನಿಮಾ ಚಿತ್ರೀಕರಣಕ್ಕೆ ಮತ್ತು ಖಾಲಿ ಜಾಗವನ್ನು ದಿನದ ಆಧಾರದ ಮೇಲೆ ಬಾಡಿಗೆಗೆ ನೀಡುತ್ತಿರುವುದನ್ನೂ ಗಮನಿಸಲಾಗಿದೆ. ಇನ್ನು ಕೆನರಾ ಬ್ಯಾಂಕ್ ಗೆ ಎಚ್.ಎಂ.ಟಿ. ಮಾರಾಟ ಮಾಡಿದೆ ಎನ್ನಲಾದ ಅರಣ್ಯ ಭೂಮಿಯಲ್ಲಿ ಟಾಕ್ಸಿಕ್' ಎಂಬ ಹೆಸರಿನ ಚಲನಚಿತ್ರಕ್ಕಾಗಿ ಹಲವು ತಿಂಗಳಿನಿಂದ ಚಿತ್ರೀಕರಣ ನಡೆಯುತ್ತಿದ್ದು, ಬೃಹತ್ ಸೆಟ್ ಹಾಕಿರುತ್ತದೆ. ಇದಕ್ಕಾಗಿ ಇಲ್ಲಿದ್ದ ನೂರಾರು ಮರ -ಗಿಡ ಕಡಿಯಲಾಗಿದೆ.

ನಿಯಮಾನುಸಾರ ಅನುಮತಿ ಇಲ್ಲದೆ ಇಲ್ಲದೆ ಮರ ಕಡಿಯುವುದು ಅದರಲ್ಲೂ ಅರಣ್ಯ ಭೂಮಿಯಲ್ಲಿ ಮರ ಗಿಡಗಳ ಅಕ್ರಮ ಕಡಿತಲೆ ದಂಡನೀಯ ಅಪರಾಧ ಆಗಿರುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದಿಂದ ಹಿಂದಿನ ಮತ್ತು ಇಂದಿನ ಉಪಗ್ರಹ ಚಿತ್ರಗಳನ್ನು ಪಡೆದು, ಎಷ್ಟು ಮರ ಕಡಿಯಲಾಗಿದೆ? ಇದಕ್ಕೆ ನಿಯಮಾನುಸಾರ ಅನುಮತಿ ಪಡೆಯಲಾಗಿದೆಯೇ.. ಅನುಮತಿ ಕೊಟ್ಟಿದ್ದರೆ ಅರಣ್ಯ ಭೂಮಿಯಲ್ಲಿ ಮರ ಕಡಿತಲೆಗೆ ಅನುಮತಿ ನೀಡಿದ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮ ಜರುಗಿಸಲು, ಅನುಮತಿ ಇಲ್ಲದೆ ಮರ ಕಡಿತಲೆ ಮಾಡಿದ್ದಲ್ಲಿ ಅದಕ್ಕೆ ಕಾರಣರಾದ ಎಲ್ಲರ ವಿರುದ್ಧ ಅರಣ್ಯ ಅಪರಾಧ ಪ್ರಕರಣ ದಾಖಲಿಸಲು ಈ ಮೂಲಕ ಸೂಚಿಸಲಾಗಿದೆ ಎಂದು ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+