Get Updates
Get notified of breaking news, exclusive insights, and must-see stories!

Plastic Rice: ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ: ಸಚಿವ ಮುನಿಯಪ್ಪ ಸ್ಪಷ್ಟನೆ

ಸರ್ಕಾರ ವಿತರಣೆ ಮಾಡುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಇದೆ ಎನ್ನುವ ಆರೋಪ ಹಲವು ವರ್ಷಗಳಿಂದ ಕೂಡ ಕೇಳಿ ಬರುತ್ತಿದೆ. ಪ್ಲಾಸ್ಟಿಕ್ ಅಕ್ಕಿ ಇದೆ ಎಂದು ಹಲವರು ಪಡಿತರ ಅಕ್ಕಿಯನ್ನು ತಿನ್ನುವುದಕ್ಕೂ ಭಯ ಪಟ್ಟಿರುವ ಘಟನೆಗಳು ನಡೆದಿವೆ.

ಈ ಬಗ್ಗೆ ಅಧಿಕಾರಿಗಳು ಈಗಾಗಲೇ ಹಲವು ಬಾರಿ ಸ್ಪಷ್ಟನೆ ನೀಡಿದ್ದಾರೆ. ಆದರೂ ಜನರಲ್ಲಿನ ಆತಂಕ ದೂರವಾಗಿಲ್ಲ. ಈ ತಿಂಗಳು ವಿತರಣೆ ಮಾಡಿದ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಇದೆ ಎಂದು ಹಲವರು ದೂರಿದ್ದಾರೆ.

Minister K H Muniyappa Clarifies Allegations of Plastic Rice in PDS Rice

ಇದಕ್ಕೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಕೂಡ ಸ್ಪಷ್ಟನೆ ನೀಡಿದ್ದಾರೆ. ಮಾಧ್ಯಮಗಳಲ್ಲಿ ಬಂದಿರುವಂತೆ ಪ್ಲಾಸ್ಟಿಕ್ ಅಕ್ಕಿ ಕಲಬೆರಕೆಯಾಗಿದೆ ಎನ್ನುವುದು ಸುಳ್ಳು ಎಂದು ಹೇಳಿದರು.

ಸಾರವರ್ಧಿತ ಅಕ್ಕಿ

ಮಹಿಳೆಯರು ಮತ್ತು ಮಕ್ಕಳಲ್ಲಿ ಹೆಚ್ಚಿನ ಮಟ್ಟದ ಅಪೌಷ್ಟಿಕತೆ, ರಕ್ತಹೀನತೆ ಮತ್ತು ಸೂಕ್ಷ್ಮ ಪೋಷಕಾಂಶಗಳ ಕೊರತೆಯನ್ನು ನಿವಾರಿಸಲು ರಾಜ್ಯವು ಸಮಗ್ರ ಶಿಶು ಅಭಿವೃದ್ಧಿ ಸೇವೆಗಳು ಮತ್ತು ಮಧ್ಯಾಹ್ನದ ಊಟ ಯೋಜನೆ ಮತ್ತು ಪಡಿತರ ಅಂಗಡಿಗಳ ಮೂಲಕ ಸಾರವರ್ಧಿತ ಅಕ್ಕಿಯನ್ನು ಪೂರೈಸುತ್ತಿದೆ ಎಂದು ಹೇಳಿದರು. ಇದನ್ನೇ ಪ್ಲಾಸ್ಟಿಕ್ ಅಕ್ಕಿ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಹೇಳಿದರು.

ಅಕ್ಕಿಯ ಬಲವರ್ಧನೆಯು ಆಹಾರದಲ್ಲಿ ವಿಟಮಿನ್ ಮತ್ತು ಖನಿಜಾಂಶವನ್ನು ಹೆಚ್ಚಿಸಲು ವೆಚ್ಚ-ಪರಿಣಾಮಕಾರಿ ಮತ್ತು ಪೂರಕ ತಂತ್ರವಾಗಿದೆ ಮತ್ತು ಪೌಷ್ಟಿಕಾಂಶದ ಭದ್ರತೆಯತ್ತ ಒಂದು ಹೆಜ್ಜೆಯಾಗಿದೆ ಎಂದು ಸಚಿವ ಮುನಿಯಪ್ಪ ಹೇಳಿದರು.

ಇಲಾಕೆ ಕೂಡ ನೀಡಿದೆ ಸ್ಪಷ್ಟನೆ

ಒಂದು ಕ್ವಿಂಟಾಲ್ ಸಾಮಾನ್ಯ ಅಕ್ಕಿಗೆ ಶೇಕಡಾ 1 ರಷ್ಟು (1 ಕೆಜಿಯಷ್ಟು) ಸಾರವರ್ಧಿತ ಅಕ್ಕಿಯನ್ನು ಮಿಶ್ರಣ ಮಾಡಿ ವಿತರಣೆ ಮಾಡಲಾಗುತ್ತಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಕೂಡ ಸ್ಪಷ್ಟನೆ ನೀಡಿದೆ.

ಸಾರವರ್ಧಿತ ಅಕ್ಕಿಯಲ್ಲಿ ಜೀವಸತ್ವಗಳು, ಪೋಷಕಾಂಶಗಳಾದ ಕಬ್ಬಿಣಾಂಶ, ಫೋಲಿಕ್‌ ಆಮ್ಲ ಹಾಗೂ ವಿಟಮಿನ್‌ ಬಿ-12 ಇರುತ್ತದೆ ಇದು ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿದೆ. ಪ್ಲಾಸ್ಟಿಕ್ ಅಕ್ಕಿಯಲ್ಲ, ಇದರಿಂದ ಯಾವ ತೊಂದರೆಯೂ ಆಗದು ಎಂದು ಇಲಾಖೆ ಹೇಳಿದೆ.

ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಸಾರವರ್ಧಿತ ಅಕ್ಕಿಯನ್ನು ಮಿಶ್ರಣ ಮಾಡಿ ವಿತರಣೆ ಮಾಡಲಾಗುತ್ತಿದೆ. ಇದರ ಸೇವನೆಯಿಂದ ಪೌಷ್ಟಿಕಾಂಶದ ಕೊರತೆ ನಿವಾರಣೆಯಾಗಲಿದೆ, ರಕ್ತಹೀನತೆ ಸಮಸ್ಯೆಗೂ ಇದು ಉತ್ತಮ ಆಹಾರ ಎಂದು ಹೇಳಲಾಗಿದೆ.

ಸಾರವರ್ಧಿತ ಅಕ್ಕಿಯನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗ ಒಳಪಡಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಬಳಕೆಗೆ ಯೋಗ್ಯವಾದ ಪೌಷ್ಟಿಕಾಂಶಭರಿತ ಅಕ್ಕಿ ಎಂದು ಪ್ರಮಾಣೀಕರಿಸಲಾಗಿದೆ. ಇದನ್ನು ಭಯವಿಲ್ಲದೆ ತಿನ್ನಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+