BPL Card: ಬಿಪಿಎಲ್‌ ಕಾರ್ಡ್‌ ಬಗ್ಗೆ ಮತ್ತೊಂದು ಅಪ್ಡೇಟ್‌ ಕೊಟ್ಟ ಸಚಿವ ಕೆಎಚ್‌ ಮುನಿಯಪ್ಪ

BPL Ration Card: ನಕಲಿ ದಾಖಲೆ ನೀಡಿ ಪಡೆದಂತಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ ಅಂತಹವರನ್ನು ಎಪಿಎಲ್‌ಗೆ ವರ್ಗಾಹಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಇದೀಗ ಬಿಪಿಎಲ್‌ ಕಾರ್ಡ್‌ಗೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಪ್ಡೇಡ್‌ ಮಾಹಿತಿಯನ್ನು ಕೊಟ್ಟಿದ್ದಾರೆ. ವಿವರ ಇಲ್ಲಿದೆ ಗಮನಿಸಿ.

ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹರು ಸ್ವಯಂ ಪ್ರೇರಿತವಾಗಿ ಪಡಿತರ ಚೀಟಿಯನ್ನು ಹಿಂದಿರುಗಿಸಿದರೆ ಮತ್ತಷ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಪಡಿತರ ಚೀಟಿ ವಿತರಣೆ ಮಾಡಲು ಅನುಕೂಲ ಆಗುತ್ತದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ತಿಳಿಸಿದರು.

Minister K H Muniyappa gave Another Update on BPL Card

ತುಮಕೂರಿನ ಕುಣಿಗಲ್ ರಸ್ತೆಯ ಅಮರಜ್ಯೋತಿ ಶಿರಡಿ ಸಾಯಿಬಾಬ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಉಳ್ಳವರು, ಶ್ರೀಮಂತರು ಬಿಪಿಎಲ್ ಕಾರ್ಡ್‌ಗಳನ್ನು ಪಡೆದಿದ್ದಾರೆ. ಅಂತಹವರು ಸ್ವಯಂಪ್ರೇರಿತವಾಗಿ ಹಿಂತಿರುಗಿಸಿದರೆ ಬಡವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲು ಸಹಾಯ ಆಗಲಿದೆ ಎಂದು ಹೇಳಿದರು.

ದೇಶದಲ್ಲೇ ಅತೀ ಹೆಚ್ಚು ಪಡಿತರ ಚೀಟಿಗಳನ್ನು ವಿತರಣೆ ಮಾಡುವ ರಾಜ್ಯ ಅಂದರೆ ಕರ್ನಾಟಕ ಮಾತ್ರ. ನಮ್ಮ ರಾಜ್ಯದಲ್ಲಿರುವ 7 ಕೋಟಿ ಜನರ ಪೈಕಿ ಶೇಕಡ 70ರಷ್ಟು ಫಲಾನುಭವಿಗಳಿಗೆ ಪಡಿತರ ಚೀಟಿ ಹಂಚಿಕೆ ಮಾಡಲಾಗಿದೆ. ರಾಜ್ಯದಲ್ಲಿ ಸುಮಾರು 4.50 ಕೋಟಿ ಪಡಿತರ ಚೀಟಿಗಳನ್ನು ವಿತರಣೆ ಮಾಡಲಾಗಿದೆ. ಇದರ ಸದುಪಯೋಗ ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಬೇಕೆಂದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.

ಪಡಿತರ ಚೀಟಿ ತಿದ್ದುಪಡಿ ವಿಧಾನಗಳು

* ಅಧಿಕೃತ ವೆಬ್‌ಸೈಟ್ https://ahara.kar.nic.in/home ಗೆ ಭೇಟಿ ನೀಡಿ * ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
* ತಿದ್ದುಪಡಿ ಅಥವಾ ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
* ಬಳಿಕ ಅಲ್ಲಿ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ.
* ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮಿಟ್‌ ಮಾಡಿ.
* ಅರ್ಜಿ ಸಲ್ಲಿಕೆಯ ವೇಳೆ ನೀವು ನೀಡಿರುವಂತಹ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ ಮಾತ್ರ ನಿಮಗೆ ಅಪ್ಡೇಟ್‌ ಆಗಿರುವ ಹೊಸ ರೇಷನ್‌ ಕಾರ್ಡ್‌ ನೀಡಲಾಗುತ್ತದೆ.

ಯಾರೆಲ್ಲಾ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು?: ಕರ್ನಾಟಕದ ಎಲ್ಲಾ ಖಾಯಂ ನಿವಾಸಿಗಳು ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು. ಮಾನದಂಡಗಳಿಗೆ ಅನುಸಾರವಾಗಿ ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಮಾಡಹುದಾಗಿದೆ. ಕರ್ನಾಟಕದ ನಿವಾಸಿಗಳು ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಆಹಾರ ಇಲಾಖೆಯ ಕಚೇರಿಗೇ ಹೋಗಬೇಕೆಂದಿಲ್ಲ.

ಬದಲಾಗಿ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. Ahara.kar.nic.in ವೆಬ್‌ಸೈಟ್‌ನಲ್ಲಿ ಅರ್ಹ ಫಲಾನುಭವಿಗಳು ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಇ-ಪಡಿತರ ಚೀಟಿ ಪಡೆದುಕೊಳ್ಳಬಹುದು ಮತ್ತು ನಿಮ್ಮ ಪಡಿತರ ಚೀಟಿಯ ಸ್ಥಿತಿ-ಗತಿಯನ್ನು ಪರಿಶೀಲನೆ ಮಾಡಬಹುದಾಗಿದೆ.

ಬೇಕಾಗುವ ದಾಖಲೆಗಳು

* ಆಧಾರ್ ಕಾರ್ಡ್

* ಇ-ಮೇಲ್ ಐಡಿ

* ಮೊಬೈಲ್ ಸಂಖ್ಯೆ

* ವಿದ್ಯುತ್ ಬಿಲ್

* ಪ್ಯಾನ್ ಕಾರ್ಡ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+