Ration Card: ಇಂತಹ ಬಿಪಿಎಲ್ ಪಡಿತರಚೀಟಿದಾರರಿಗೆ ಕಾದೈತೆ ಮಾರಿಹಬ್ಬ
Ration Card: ರಾಜ್ಯದಲ್ಲಿ ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಇವುಗಳಲ್ಲಿ ಹಲವು ವಿಧಗಳಿದ್ದು, ಈ ಪೈಕಿ ಬಿಪಿಎಲ್ ರೇಷನ್ ಕಾರ್ಡ್‌ಗೆ ಬರೀ ಪಡಿತರ ಅಷ್ಟೇ ಅಲ್ಲದೆ ಸರ್ಕಾರಿ ಸೌಲಭ್ಯಗಳು ಸಗ ದೊರೆಯಲಿವೆ. ಆದ್ದರಿಂದ ಈ ಕಾರ್ಡ್‌ಗಳನ್ನು ಅನ್ನು ಅನರ್ಹರು ಕೂಡ ಹೊಂದಿದ್ದಾರೆ ಎನ್ನುವ ಮಾಹಿತಿ ಬೆಳಕಿಗೆ ಬಂದಿದ್ದು, ಇದಕ್ಕೆ ಕಡಿವಾಣ ಹಾಕುವ ಮಾರ್ಗಗಳ ಬಗ್ಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ವಿವರಿಸಿದ್ದಾರೆ.
ಹೌದು.. ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ತುಂಬಾ ಜನ ಅರ್ಹರಲ್ಲದವರು ಕೂಡ ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ ಎನ್ನುವ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಿವೆ. ಸರ್ಕಾರ ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಈಗಾಗಲೇ ಪ್ರಾರಂಭಿಸಿತ್ತು. ಆದರೆ, ಆ ವೇಳೆ ಬಡವರ ಬಳಿಯಿರುವ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಿದ್ದಾರೆ ಎಂದು ಹಲವು ಜಿಲ್ಲೆಗಳಲ್ಲಿ ಜನರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಬಳಿಕ ಎಚ್ಚೆತ್ತ ಸರ್ಕಾರ ಯಾರೆಲ್ಲಾ ಬಡವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗಿದೆಯೋ ಅಂತಹವರಿಗೆ ಮತ್ತೆ ಬಿಪಿಎಲ್ ಕಾರ್ಡ್ ಅನ್ನು ಹಿಂತಿರುಗಿಸಲಾಗುವುದು. ಅಲ್ಲದೆ, ಅವರಿಗೆ ಸಿಗಬೇಕಾದ ಪಡಿತರವನ್ನು ಕೂಡ ತಲುಪಿಸುವುದಾಗಿಯೂ ಸರ್ಕಾರ ತಿಳಿಸಿತ್ತು. ಬಳಿಕ, ಅನರ್ಹರನ್ನು ಬಿಪಿಎಲ್‌ನಿಂದ ಎಪಿಲ್‌ಗೆ ವರ್ಗಾಹಿಸುವ ಕೆಲಸ ಮುಂದುವರೆಸಿತ್ತು.
ನಂತರ ಸಂಪೂರ್ಣವಾಗಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಯನ್ನು ಸಹ ನಿಲ್ಲಿಸಲಾಗಿತ್ತು. ಯಾಕಂದ್ರೆ, ಗ್ಯಾರಂಟಿ ಯೋಜನೆಗಳಿಗೆ ಹಲವರು ದುರುಪಯೋಗಪಡಿಸಿಕೊಳ್ಳುತ್ತಾರೆ ಎನ್ನುವ ಕಾರಣಕ್ಕೆ. ಮತ್ತೆ ಇದೀಗ ರಾಜ್ಯದಲ್ಲಿ ತುಂಬಾ ಮಂದು ಅನರ್ಹರು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿದ್ದಾರೆ ಎನ್ನುವ ಕೂಗುಗಳು ಜೋರಾಗಿ ಕೇಳಿಬರುತ್ತಿವೆ. ಇದನ್ನು ಇದೀಗ ನಿಯಂತ್ರಣಕ್ಕೆ ತರುವ ಬಗ್ಗೆ ಸಚಿವ ಕೆ.ಎಚ್.ಮುನಿಯಪ್ಪ ಅವರು ವಿಧಾನಮಂಡಲ ಅಧಿವೇಶನದ ವೇಳೆ ಮಾತನಾಡಿದ್ದಾರೆ.
ವಿಧಾನಮಂಡಲ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆ ಆರಂಭ ಮಾಡಿಸುವುದಾಗಿ ಆಹಾರ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಹೇಳಿದ್ದಾರೆ. ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಸಚಿವರು ಬಿಜೆಪಿಯ ಪ್ರತಾಪಸಿಂಹ ನಾಯಕ್, ಕಾಂಗ್ರೆಸ್‌ನ ಯತೀಂದ್ರ ಸಿದ್ದರಾಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದರು.
ಹೊಸ ಪಡಿತರ ಚೀಟಿ ವಿತರಣೆ ಯಾವಾಗ?: ಅಧಿವೇಶನ ಮುಗಿದ ಬಳಿಕ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಪತ್ತೆ ಮಾಡಿ ಅಂತಹವರನ್ನು ಎಪಿಎಲ್ ರೇಷನ್ ಕಾರ್ಡ್‌ಗೆ ವರ್ಗಾವಣೆ ಮಾಡುವ ಕ್ರಮ ಕೈಗೊಳ್ಳಲಾಗುವುದು. ಅನರ್ಹ ಪಡಿತರ ಚೀಟಿ ರದ್ದತಿ ನಂತರ ಹೊಸ ಪಡಿತರ ಚೀಟಿ ನೀಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದರು.
ಈ ಹಿಂದೆ 15 ಲಕ್ಷ ಅನರ್ಹ ಪಡಿತರ ಚೀಟಿ ರದ್ದು ಮಾಡಲು ಮುಂದಾದಾಗ ಗೊಂದಲ ಉಂಟಾಗಿದ್ದದ್ದು, ಇದರಿಂದ ಪಡಿತರ ಚೀಟಿ ರದ್ದು ಪ್ರಕ್ರಿಯೆ ನಿಲ್ಲಿಸಬೇಕಾಯಿತು. ಆದರೆ, ಎಲ್ಲಾ ಜನಪ್ರತಿನಿಧಿಗಳ ಸಹಕಾರದಿಂದ ಅನರ್ಹ ಪಡಿತರ ಚೀಟಿ ರದ್ದುಪಡಿಸಲಾಗುವುದು ಎಂದು ಹೇಳಿದರು.
ಈಗಾಗಲೇ ಎಪಿಎಲ್ ಕಾರ್ಡ್ ವಿತರಣೆ ಮಾಡುವುದನ್ನು ಕೂಡ ನಿಲ್ಲಿಸಲಾಗಿದೆ. ಸುಮಾರು ಒಂದು ಲಕ್ಷ ಎಪಿಎಲ್ ಪಡಿತರ ಚೀಟಿದಾರರು ರೇಷನ್ ಪಡೆಯದ ಹಿನ್ನೆಲೆ ರದ್ದುಗೊಳಿಸಲಾಗಿದೆ. 1.28 ಕೋಟಿ ಕಾರ್ಡ್‌ಗಳಿಗೆ ಅಕ್ಕಿ ನೀಡಲಾಗುತ್ತಿದೆ. 3.27 ಲಕ್ಷ ಬಿಪಿಎಲ್ ಕಾರ್ಡ್ ಕೊಡುವುದು ಬಾಕಿಯಿದೆ. ಎಪಿಎಲ್‌ಗೆ ಅರ್ಹತೆ ಇರುವವರು ಸಹ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ. ಈ ಕುರಿತು ಅಧಿವೇಶನದ ಬಳಿಕ ಪರಿಷ್ಕರಣೆ ಆರಂಭ ಮಾಡಲಾಗುವುದು ಎಂದು ಹೇಳಿದರು.
ಅನರ್ಹ ಬಿಪಿಎಲ್ ಕಾರ್ಡುಗಳನ್ನು ಪರಿಷ್ಕರಿಸಿ ಅಂತಹ ಕಾಡುಗಳನ್ನು ರದ್ದುಪಡಿಸಲಾಗುವುದು. ಅರ್ಜಿ ಹಾಕಿರುವ ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ವಿಧಾನಮಂಡಲ ಅಧಿವೇಶನ ತಿಳಿಸಿದರು.












Click it and Unblock the Notifications