ಅನ್ನಭಾಗ್ಯ ಯೋಜನೆಯ ಡಿಬಿಟಿ ಹಣ ಬಿಡುಗಡೆ: ಗುಡ್​ನ್ಯೂಸ್ ಕೊಟ್ಟ ಮುನಿಯಪ್ಪ

ಕೋಲಾರ, ಅಕ್ಟೋಬರ್​ 11:ರಾಜ್ಯ ಕಾಂಗ್ರೆಸ್​ ಸರ್ಕಾರದ ಪಂಚ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ ಮಹತ್ವದ ಯೋಜನೆಯಾಗಿದೆ. ಈ ಅನ್ನ ಭಾಗ್ಯ ಯೋಜನೆಯ ಡಿಬಿಟಿ ಹಣವನ್ನ ಸರ್ಕಾರ ಎರಡು ತಿಂಗಳಿನಿಂದ ಕೊಟ್ಟಿರಲಿಲ್ಲ. ಹೀಗಾಗಿ ಬಿಪಿಎಲ್ ಫಲಾನುಭವಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಹಣ ಬಿಡುಗಡೆ ಕುರಿತು ಮಹತ್ವದ ಮಾಹಿತಿಯನ್ನ ಸಚಿವ ಕೆ ಎಚ್‌ ಮುನಿಯಪ್ಪ ಅವರು ನೀಡಿದ್ದಾರೆ.

ಈ ಕುರಿತು ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಸಚಿವ ಕೆ ಎಚ್‌ ಮುನಿಯಪ್ಪ ಅವರು, ಪ್ರತಿ ತಿಂಗಳು 10ರಂದು ಹಣ ಬಿಡುಗಡೆಯಾಗುತ್ತಿತ್ತು. ಆದರೆ ಸರ್ವರ್ ಸಮಸ್ಯೆಯಿಂದ ಹಣ ಬಿಡುಗಡೆ ವಿಳಂಬವಾಗಿದೆ. ಬಾಕಿ ಹಣ ಮುಂದಿನ ವಾರ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ. ಅಲ್ಲದೇ ಬಿಪಿಎಲ್​ ಅರ್ಹತೆ ಪರಿಶೀಲಿಸಿ ಅನರ್ಹರನ್ನ ಎಪಿಎಲ್​ಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

Minister K H Muniyappa s important statement on the release of DBT funds of Anna Bhagya Yojana

ಬಿಪಿಎಲ್‌ ಕಾರ್ಡ್‌ದಾರ ಕುಟುಂಬಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲಾಗಿ ಸರ್ಕಾರ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡುತ್ತಿತ್ತು. ಪ್ರತಿ ಕೆಜಿ ಅಕ್ಕಿಗೆ ತಲಾ 34ರೂ.ನಂತೆ ಒಟ್ಟು 5 ಕೆಜಿ ಅಕ್ಕಿಗೆ 170ರೂ ನೀಡಲಾಗುತ್ತಿತ್ತು. ಅದರಂತೆ ಫಲಾನುಭವಿಗಳ ಖಾತೆಗೆ ಹಣ ಕೂಡ ಜಮಾವಣೆಯಾಗುತ್ತಿತ್ತು. ಆದರೆ, ಕಳೆದ ಎರಡು ತಿಂಗಳಿಂದ ಯಾವುದೇ ಹಣ ಪಾವತಿ ಆಗಿಲ್ಲ. ಹೀಗಾಗಿ ಫಲಾನುಭವಿಗಳು ಪ್ರತಿದಿನ ಬೆಂಗಳೂರು‌ ಒನ್ ಹಾಗೂ ಬ್ಯಾಂಕ್​ಗಳನ್ನ ಸುತ್ತುವಂತ್ತಾಗಿದ್ದು, ಅಲ್ಲೇ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಸಚಿವರು ಹಣ ಬಿಡುಗಡೆ ಕುರಿತು ಮಾಹಿತಿ ನೀಡಿದ್ದಾರೆ.

ಇನ್ನೂ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಸಚಿವ ಕೆ ಎಚ್‌ ಮುನಿಯಪ್ಪ ಅವರು ಮಾತನಾಡಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಪರಿಸ್ಥಿತಿ ಬಂದಿಲ್ಲ. ಅಂತಹ ಪರಿಸ್ಥಿತಿ ಬಂದರೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತೆ. ನಾನು ಸಿಎಂ ಆಕಾಂಕ್ಷಿ ಅಲ್ಲ. ದಲಿತ ಮುಖ್ಯಮಂತ್ರಿ ವಿಚಾರವನ್ನು ಹೈಕಮಾಂಡ್ ಗೆ ಬಿಟ್ಟುಬಿಡೋಣ. ಈಗ ಇರುವ ಸಿಎಂಗೆ ಸಂಪೂರ್ಣ ಸಹಕಾರ ಕೊಡೋಣ. ಶಾಸಕರು, ಪಕ್ಷ ಎಲ್ಲರೂ ಸೇರಿ ಒಗ್ಗಟ್ಟಾಗಿ ನಿಂತು ಸಿಎಂ ಕೈ ಬಲಪಡಿಸೋಣ. ಬಿಜೆಪಿಯವರು ಮಾಡುವ ಹುನ್ನಾರಗಳಿಗೆ ಪಾಠ ಹೇಳುವುದಕ್ಕೆ ಶಕ್ತಿ ತುಂಬೋಣ. ರಾಜ್ಯದಲ್ಲಿ ದಲಿತ ಸಿಎಂ ವಿಚಾರ ಮಲ್ಲಿಕಾರ್ಜುನ ಖರ್ಗೆ ಕಾಲದಿಂದ ಈ ಮಾತು ಕೇಳಿ ಬರುತ್ತಿದೆ. ಆದರೆ ದಲಿತ ಸಿಎಂ ಮಾಡಿದವರು ಯಾರು ಇಲ್ಲ. ರಾಜ್ಯದಲ್ಲಿ ಮಲ್ಲಿಕಾರ್ಜುನ ಖರ್ಗೆಗಿಂತ‌ ಸೀನಿಯರ್ ಲೀಡರ್ ಯಾರು‌ ಇಲ್ಲ ಎಂದರು.

ಮುಂದಿನ ಚುನಾವಣೆಗಳಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷ ಬಹಳ ದೊಡ್ಡದು. ಇಂತಹ ಘಟನೆಗಳು ಮತ್ತೆ ನಡೆಯಬಾರದು. ಇತ್ತೀಚೆಗೆ ನಡೆದ ಗಲಾಟೆಯನ್ನು ಕುಳಿತು ಬಹೆಗರಿಸಿಕೊಳ್ಳಬೇಕು ಎಂದು ಹೇಳಿದ್ದೇನೆ. ಇನ್ನೊಂದು ವಾರದಲ್ಲಿ ಕೆಪಿಸಿಸಿ ಕಡೆಯಿಂದ ಕರೆಸಿ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಗುಂಪುಗಾರಿಕೆ, ಸ್ವಪ್ರತಿಷ್ಠೆಯಿಂದ ಪಕ್ಷಕ್ಕೆ ಒಳ್ಳೆಯದಲ್ಲ. ಎಲ್ಲರೂ ಒಟ್ಟೆಗೆ ಹೋದರೆ ಕಾಂಗ್ರೆಸ್ ಪಕ್ಷ ಉಳಿಯುತ್ತದೆ ಸಚಿವ ಕೆ ಎಚ್‌ ಮುನಿಯಪ್ಪ ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+