• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದಿಢೀರ್ ಕೋರ್ಟ್ ಮೆಟ್ಟಿಲೇರಿದ್ದಕ್ಕೆ ಕಾರಣ ನೀಡಿದ ಸಚಿವ ಕೆ. ಸುಧಾಕರ್

|

ಬೆಂಗಳೂರು, ಮಾರ್ಚ್ 6: ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ಯಾವುದೇ ಅವಹೇಳನಾಕಾರಿ ವರದಿಗಳನ್ನು ಪ್ರಸಾರ ಮಾಡದಂತೆ ಕೋರಿ ಆರು ಸಚಿವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣ ಭಾರಿ ಕೋಲಾಹಲ ಸೃಷ್ಟಿಸಿದ ಬೆನ್ನಲ್ಲೇ ಅವರ ಮಿತ್ರಕೂಟದ ಆರು ಸಚಿವರು ಕೋರ್ಟ್ ಮೊರೆ ಹೋಗಿರುವುದು ಚರ್ಚೆಗೆ ಕಾರಣವಾಗಿದೆ.

ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಆರು ಸಚಿವರು ಅರ್ಜಿ ಸಲ್ಲಿಸಿದ್ದು, ತಮ್ಮ ಕುರಿತಾಗಿ ಯಾವುದೇ ಅವಹೇಳನಾಕಾರಿ ವಿಚಾರ, ಸಿ.ಡಿ ಅಥವಾ ದಾಖಲೆಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಆದೇಶ ನೀಡುವಂತೆ ಕೋರಿದ್ದಾರೆ.

ಜಾರಕಿಹೊಳಿ ಸಿಡಿ ಸ್ಪೋಟವಾಗುತ್ತಿದ್ದಂತೆ ಕೋರ್ಟ್‌ ಮೊರೆ ಹೋದ ಆರು ಸಚಿವರು!

ಈ ಆರೂ ಸಚಿವರು ಕಾಂಗ್ರೆಸ್ ತೊರೆಯುವ ಮೂಲಕ ಜೆಡಿಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎನ್ನುವುದು ಗಮನಿಸಬೇಕಾದ ಸಂಗತಿ. ರಮೇಶ್ ಜಾರಕಿಹೊಳಿ ಪ್ರಕರಣದ ಬೆನ್ನಲ್ಲೇ ಬೇರೆ ಯಾವುದೇ ಸಂಗತಿ ಹೊರಬೀಳುವ ಭಯದಿಂದ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಗುಮಾನಿ ಎದ್ದಿದೆ. ಆದರೆ ತಮ್ಮ ನಿರ್ಧಾರಕ್ಕೆ ಕಾರಣ ಏನು ಎಂಬುದನ್ನು ಸಚಿವ ಕೆ. ಸುಧಾಕರ್ ವಿವರಿಸಿದ್ದಾರೆ.

ಷಡ್ಯಂತ್ರ ಯಶಸ್ವಿಯಾಗೊಲ್ಲ

ಷಡ್ಯಂತ್ರ ಯಶಸ್ವಿಯಾಗೊಲ್ಲ

ಸಾರ್ವಜನಿಕ ಜೀವನದಲ್ಲಿರುವವರಿಗೆ ಈ ರೀತಿಯ ಸವಾಲುಗಳು ಸಾಮಾನ್ಯ. ಆದರೆ ನಮ್ಮ ವಿರುದ್ಧ ಷಡ್ಯಂತ್ರಗಳು ನಡೆದಾಗ ಇಂತಹ ದುಷ್ಟ ಶಕ್ತಿಗಳನ್ನು ಎದುರಿಸುವುದೂ ಅನಿವಾರ್ಯ. ನಮ್ಮ ಆತ್ಮಸಾಕ್ಷಿ ಸರಿ ಇರುವವರೆಗೂ, ಜನರ ಆಶೀರ್ವಾದ ಇರುವವರೆಗೂ ಯಾವ ಷಡ್ಯಂತ್ರವೂ ಯಶಸ್ವಿಯಾಗುವುದಿಲ್ಲ. ನಮ್ಮ ನ್ಯಾಯವ್ಯವಸ್ಥೆ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಮುನ್ನೆಚ್ಚರಿಕೆಯ ಕ್ರಮ

ಮುನ್ನೆಚ್ಚರಿಕೆಯ ಕ್ರಮ

ಸತ್ಯ ಹೊಸಲು ದಾಟುವುದರೊಳಗೆ, ಸುಳ್ಳು ಊರೆಲ್ಲಾ ಸುತ್ತಾಡಿಕೊಂಡು ಬಂದಿರುತ್ತದೆ ಎಂಬಂತೆ, ಜೀವಮಾನವಿಡೀ ಗಳಿಸಿರುವ ಒಳ್ಳೆಯ ಹೆಸರು, ಯಾರದೋ ಷಡ್ಯಂತ್ರದಿಂದ ಕ್ಷಣಮಾತ್ರದಲ್ಲಿ ನಶಿಸಿ ಹೋಗುವ ಸಾಧ್ಯತೆ ಇರುವುದರಿಂದ, ಮುನ್ನೆಚ್ಚರಿಕೆಯಿಂದ ಪ್ರಮಾಣೀಕರಿಸದ ಸುದ್ದಿಗಳನ್ನು ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದಿದ್ದಾರೆ.

ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು

ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು

ರಾಜ್ಯದಲ್ಲಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ ಗಳಿಸುತ್ತಿರುವ ಸಚಿವರ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ತೇಜೋವಧೆ ಮಾಡುವ ರಾಜಕೀಯ ಷಡ್ಯಂತ್ರ ನಡೆಯುತ್ತಿರುವ ಗುಮಾನಿ ಇದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು ಎಂಬ ಪರಿಸ್ಥಿತಿ ಇರುವುದು ಸುಳ್ಳಲ್ಲ ಎಂದು ಹೇಳಿದ್ದಾರೆ.

  ಅಬ್ಬಾ ! ಬೆಲೆ ಎಷ್ಟು ಕಡಿಮೆ ಆಗಿದೆ ಗೊತ್ತಾ !! | Oneindia Kannada
  ಯಾವ ಯಾವ ಸಚಿವರು?

  ಯಾವ ಯಾವ ಸಚಿವರು?

  ಸಚಿವರಾದ ಶಿವರಾಮ್ ಹೆಬ್ಬಾರ್, ಬಿ.ಸಿ. ಪಾಟೀಲ್, ಎಸ್‌.ಟಿ. ಸೋಮಶೇಖರ್, ಡಾ. ಕೆ. ಸುಧಾಕರ್, ಡಾ. ಕೆ.ಸಿ. ನಾರಾಯಣಗೌಡ ಹಾಗೂ ಭೈರತಿ ಬಸವರಾಜ್ ಅವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡದಂತೆ ಆದೇಶ ನೀಡುವಂತೆ ಕೋರಿದ್ದಾರೆ.

  English summary
  Minister Dr K Sudhakar explained why he and other minister moved to court seeking injunction against media coverage on them.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X