ಸಿಎಂ ಬದಲಾವಣೆ ಕುರಿತು ಕೆಎಚ್ ಮುನಿಯಪ್ಪ ಮಾಹಿತಿ
ಬೆಳಗಾವಿ, ಫೆಬ್ರವರಿ 05: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ಜೋರಾಗಿದೆ. ಈ ನಡುವೆ ಆಹಾರ ಸಚಿವ ಕೆ ಎಚ್ ಮುನಿಯಪ್ಪ ಅವರು ಮುಖ್ಯಮಂತ್ರಿ ಸ್ಥಾನದ ಕುರಿತು ಮಹತ್ವದ ಮಾಹಿತಿಯನ್ನ ನೀಡಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಬುಧವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಕೆ ಎಸ್ ಮುನಿಯಪ್ಪ ಅವರು, ಮುಖ್ಯಮಂತ್ರಿ ಬದಲಾವಣೆ ಆಗಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇರುತ್ತಾರೆ. ಮುಖ್ಯಮಂತ್ರಿ ಅವರು ಚೆನ್ನಾಗಿ ಸರ್ಕಾರ ನಡೆಸುತ್ತಿದ್ದಾರೆ. ಅವರ ಬದಲಾವಣೆ ಪ್ರಶ್ನೆನೆ ಇಲ್ಲ ಎಂದು ಮುಖ್ಯಮಂತ್ರಿ ಬದಲಾವಣೆ ಕುರಿತು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮವಾಗಿ ಕೆಲಸವನ್ನ ನಿರ್ವಹಿಸುತ್ತಿದ್ದಾರೆ. ನಾವು ಸುಮ್ಮನೆ ವಿನಾಕಾರಣ ಬದಲಾವಣೆ ಅಂತಾ ಹೇಳ್ತಾ ಇದ್ದೇವೆ. ಗ್ಯಾರಂಟಿ ಸೇರಿದಂತೆ ನಾವು ಒಳ್ಳೆ ಕಾರ್ಯಕ್ರಮ ಕೊಟ್ಟಿದ್ದೇವೆ. ಮುಂದೆ ಬಜೆಟ್ ಇದೆ. ಒಳ್ಳೆಯ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡುತ್ತೇವೆ. ಸಾರ್ವಜನಿಕರ ಹಿತದೃಷ್ಟಿಯಿಂದ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆ ಇಲ್ಲ ಎಂದು ಕೆ ಎಚ್ ಪಾಟೀಲ್ ಅವರು ತಿಳಿಸಿದರು.
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಪರ ಕಾರ್ಯಕರ್ತರು ಮುಂದಿನ ಸಿಎಂ ಸಿದ್ದರಾಮಯ್ಯ ಡಿ ಕೆ ಶಿವಕುಮಾರ್ ಘೋಷಣೆ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುನಿಯಪ್ಪ ಅವರು, ಅವರು ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡ್ತಾ ಇದ್ದಾರೆ ಆ ಪ್ರಶ್ನೆ ನಮ್ಮ ಮುಂದೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್ ತೆಗೆದುಕ್ಕೊಳ್ಳುವ ತಿರ್ಮಾನ. ನಾವು ಯಾರು ಕೂಡಾ ಅದರ ಬಗ್ಗೆ ಪ್ರಸ್ತಾಪ ಮಾಡಲ್ಲ ಎಂದು ತಿಳಿಸಿದರು.
ವಿಪಕ್ಷ ನಾಯಕ ಆರ್ ಅಶೋಕ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ ಹೇಳಿಕೆ ವಿಚಾರವಾಗಿ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಅವರು ಮಾತನಾಡಿ, ಅದು ಹೇಳೋರಿಗೆ ಗೊತ್ತು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.
ಮೋದಿಯವರ ಬದಲಾವಣೆ ಬಗ್ಗೆ ಚರ್ಚೆ: ಸಂತೋಷ ಲಾಡ್
ಬಿಜೆಪಿ ಒಳೋಳಗೆ ಮೋದಿ ಬದಲಾವಣೆ ಬಗ್ಗೆ ಚರ್ಚೆ ಆಗ್ತಿದೆ. ಮೋದಿ ವಿರುದ್ಧ ಮಾತನಾಡೋಕೆ ಯಾರಿಗೂ ಧೈರ್ಯ ಇಲ್ಲಾ. ರಾಮುಲು ಬಂದ್ರೆ ನಾನು ವ್ಯಯಕ್ತಿಕವಾಗಿ ಸ್ವಾಗತ ಮಾಡ್ತೇನೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ಗ್ಯಾರಂಟಿಯಿಂದ ಶಾಸಕರಿಗೆ ಅನುದಾನ ಇಲ್ಲಾ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಲವು ಶಾಸಕರು ಈ ರೀತಿ ಹೇಳಿದ್ದಾರೆ. ಆದರೆ ಸಾಮಾನ್ಯವಾಗಿ ಬರುವ ಅನುದಾನ ಬರ್ತಿದೆ. ಹೆಚ್ಚಿನ ಅನುದಾನ ಕೊಟ್ಟಿಲ್ಲ ಅಷ್ಟೇ. ಬಿ.ಆರ್.ಪಾಟೀಲ್ ಯಾಕೆ ರಾಜೀನಾಮೆ ಕೊಟ್ಟಿದ್ದಾರೆ ಅವರನ್ನೇ ಕೇಳಿ. ಸೂರ್ಯ ಚಂದ್ರ ಇರುವವರಿಗೆ ಅನುದಾನ ಕೊರತೆ ಇರುತ್ತದೆ. ಬೆಡ್ತಿ ನಾಲೆ, ಹುಲಿ ಕೋಟಿ ಸೇರಿ ಹಲವು ಕಾಮಗಾರಿಗೆ ಅನುದಾನ ಕೊಟ್ಟಿದ್ದೇವೆ ಎಂದರು.
ರಾಜ್ಯ ಬಜೆಟ್ ವಿಚಾರಕ್ಕೆ ಲಾಡ್ ಪ್ರತಿಕ್ರಿಯೆ ನೀಡಿದ್ದು, ಸಿಎಂ ಬಜೆಟ್ ಮಾಡ್ತಾ ಇದ್ದಾರೆ, ಎಲ್ಲಾ ಇಲಾಖೆ ಅವರನ್ನ ಕರೀತಾ ಇದ್ದಾರೆ. ಎಲ್ಲಾ ಸಚಿವರಿಗೂ ಅವಕಾಶ ಕೊಡ್ತಾ ಇದ್ದಾರೆ ಎಂದ ಅವರು ಹೇಳಿದರು.












Click it and Unblock the Notifications