ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಚಿವ ಶ್ರೀನಿವಾಸ ಪೂಜಾರಿ, ಶಾಸಕ ಭೀಮನಾಯ್ಕ್‌ಗೆ ಕೊರೊನಾ ಪಾಸಿಟಿವ್

|
Google Oneindia Kannada News

ಉಡುಪಿ, ಏಪ್ರಿಲ್ 10: ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಗೆ ಕೊರೊನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಷಯ ತಿಳಿಸಿರುವ ಸಚಿವ ಪೂಜಾರಿ, ಕೊರೊನಾ ಪಾಸಿಟಿವ್ ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್-೧೯ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಭೀಮಾನಾಯ್ಕಗೆ ಕೊರೊನಾ

ಇನ್ನು, ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ. ಕಳೆದ ಐದಾರು ದಿನಗಳಿಂದ ಮಸ್ಕಿ, ಬಸವಕಲ್ಯಾಣ, ಬೆಳಗಾವಿ ಉಪ ಚುನಾವಣಾ ಪ್ರಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ‌ ಶಿವಕುಮಾರ ಅವರ ಜೊತೆ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದರು.

Minister Kota Srinivas Poojary And MLA Bhimanaik Tests Positive For Covid-19

ಈ ವೇಳೆ ಶಾಸಕರು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ನನಗೆ ಈ ದಿನ ಕೊರೊನಾ ಸೋಂಕಿಗೆ ಒಳಪಟ್ಟಿದ್ದೇನೆ, ಕಳೆದ ಐದು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ಕೊರೊನಾ ಪರೀಕ್ಷೆ ಮಾಡಿಕೊಳ್ಳಿ ಎಂದು ಕಾಂಗ್ರೆಸ್ ಶಾಸಕ ಮನವಿ ಮಾಡಿಕೊಂಡಿದ್ದಾರೆ.

Minister Kota Srinivas Poojary And MLA Bhimanaik Tests Positive For Covid-19

ಮಸ್ಕಿ, ಬಸವಕಲ್ಯಾಣ, ಬೆಳಗಾವಿ ಲೋಕಸಭೆ ಉಪ ಚುನಾವಣೆಯ ಪ್ರಚಾರದಲ್ಲಿ ಕೈ ಶಾಸಕ ಭೀಮನಾಯ್ಕ್ ಭಾಗಿಯಾಗಿದ್ದರು. ಸದ್ಯ ಹೋಮ್ ಐಸೋಲೇಷನ್ ಆಗಿದ್ದಾರೆ.

Recommended Video

ಪಂದ್ಯ ಸೋತು ಸೊಕ್ಕಿನ ಮಾತಾಡಿದ ರೋಹಿತ್ ಶರ್ಮಾ | Oneindia Kannada

English summary
Coronavirus positive has been confirmed for Muzarai and Backward Classes Welfare Minister Kota Srinivasa Poojary and Hagaribommanahalli MLA Bhimanaik.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X