ಬಿಜೆಪಿಯವರ ತಮ್ಮ ಮನೆಯ ಹುಳುಕನ್ನ ಮುಚ್ಚಿಕೊಳ್ಳಲು ರಾಜಕೀಯ ಮಾಡುತ್ತಿದ್ದಾರೆ: ಕೃಷ್ಣ ಬೈರೇಗೌಡ
ಕಲಬುರಗಿ, ಜುಲೈ 31: ಬಿಜೆಪಿಯವರ ತಮ್ಮ ಮನೆಯ ಹುಳುಕನ್ನ ಮುಚ್ಚಿಕೊಳ್ಳಲು ರಾಜಕೀಯ ಬೇರೆಸ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ರಾಜ್ಯ ಬಿಜೆಪಿ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.
ಈ ಕುರಿತು ಸೋಮವಾರ ಕಲಬುರಗಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿಯವರು ಹತಾಶರಾಗಿದ್ದಾರೆ, ನಮ್ಮ ಸರ್ಕಾರ ಜನರ ನಾಡಿ ನೀಡಿತ ಅರಿತು ಕೆಲಸ ಮಾಡುತ್ತಿದೆ. ಬಿಜೆಪಿಯವರ ತಮ್ಮ ಮನೆಯ ಹುಳುಕನ್ನ ಮುಚ್ಚಿಕೊಳ್ಳಲು ರಾಜಕೀಯ ಬೇರೆಸ್ತಿದ್ದಾರೆ ಕಿಡಿಕಾರಿದರು.

ಇನ್ನೂ ರಾಜ್ಯ ಸರ್ಕಾರ ನೆರೆ ವಿಚಾರದಲ್ಲಿ ವಿಫಲವಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯವರು ಹತಾಶರಾಗಿದ್ದಾದೆ , ನಮ್ಮ ಸರ್ಕಾರ ಜನರ ನಾಡಿ ನೀಡಿತ ಅರಿತು ಕೆಲಸ ಮಾಡುತ್ತೇವೆ. ಬಿಜೆಪಿಯವರ ತಮ್ಮ ಮನೆಯ ಹುಳುಕನ್ನ ಮುಚ್ಚಿಕೊಳ್ಳಲು ರಾಜಕೀಯ ಬೇರೆಸ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿ ಎರಡೂವರೆ ತಿಂಗಳಾದ್ರು ವಿಧಾನಸಭೆ , ಪರಿಷತ್ ನಲ್ಲಿ ವಿರೋಧ ಪಕ್ಷ ನಾಯಕನ ಆಯ್ಕೆ ಮಾಡಿಕೊಳ್ಳಲು ಬಿಜೆಪಿಗೆ ಆಗಿಲ್ಲ. ಅವರ ಮನೆಯ ಹುಳುಕನ್ನ ಮುಚ್ಚಿಕೊಳ್ಳಲು ಪ್ರಚಾರಕ್ಕೆ ಮುಂದಾಗಿದ್ದಾರೆ. ವಿರೋಧ ಪಕ್ಷದ ನಾಯಕ ಯಾರು ಅಂತಾ ಜನ ಕೇಳುವುದಕ್ಕೆ ಮುಂದಾಗಿದ್ದಾರೆ. ಬಜೆಟ್ ಪಾಸ್ ಆದರೂ ಕೂಡ ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಿಲ್ಲ ಎಂದು ರಾಜ್ಯ ಬಿಜೆಪಿ ವಿರುದ್ದ ವ್ಯಂಗ್ಯವಾಡಿದರು.
ಇತ್ತ ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಸೋಮವಾರ ಕಲಬುರಗಿ ಡಿ.ಸಿ. ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಯ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಈ ವೇಳೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಸರ್ಕಾರದ ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ ಮಹೇಶ್, ಕಂದಾಯ ಇಲಾಖೆಯ ಆಯುಕ್ತ ಪಿ. ಸುನೀಲಕುಮಾರ, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಆಯುಕ್ತ ಜೆ.ಮಂಜುನಾಥ, ನೋಂದಣಿ ಮಹಾ ಪರಿವೀಕ್ಷಕರು ಹಾಗೂ ಮುದ್ರಾಂಕಗಳ ಆಯುಕ್ತೆ ಡಾ.ಬಿ.ಆರ್.ಮಮತಾ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ.
ಕಲಬುರಗಿ ಡಿ.ಸಿ ಬಿ.ಫೌಜಿಯಾ ತರನ್ನುಮ್, ಯಾದಗಿರಿ ಡಿ.ಸಿ. ಡಾ.ಬಿ.ಸುಶೀಲಾ, ಬೀದರ ಡಿ.ಸಿ. ಗೋವಿಂದರೆಡ್ಡಿ, ರಾಯಚೂರು ಡಿ.ಸಿ. ಎಲ್.ಚಂದ್ರಶೇಖರ ನಾಯಕ್, ಬಳ್ಳಾರಿ ಡಿ.ಸಿ. ಪ್ರಶಾಂತ ಕುಮಾರ ಮಿಶ್ರಾ, ವಿಜಯ ನಗರ ಡಿ.ಸಿ ಎಂ.ಎಸ್.ದಿವಾಕರ, ಕೊಪ್ಪಳ ಡಿ.ಸಿ ಸುಂದರೇಶ ಬಾಬು ಎಂ. ಸೇರಿದಂತೆ ವಿಭಾಗದ ಅಪರ ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು, ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಜಿಲ್ಲಾ ನೋಂದಣಾಧಿಕಾರಿಗಳು, ತಹಶೀಲ್ದಾರರು, ಭೂದಾಖಲೆಗಳ ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರು ಭಾಗವಹಿಸಿದ್ದರು.












Click it and Unblock the Notifications