Gruha Lakshmi Scheme: ಗೃಹಲಕ್ಷ್ಮಿಯ 19,20 ನೇ ಕಂತಿನ ಹಣ ಬಿಡುಗಡೆ: ಗುಡ್‌ ನ್ಯೂಸ್‌ ಇಲ್ಲಿದೆ

ಬೆಂಗಳೂರು, ಏಪ್ರಿಲ್‌ 21: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯು ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿ ಸಹಾಯಧನವನ್ನು ಒದಗಿಸುತ್ತಿದೆ. ಕಾಂಗ್ರೆಸ್ ಸರ್ಕಾರದ ಈ ಗೃಹ ಲಕ್ಷ್ಮಿ ಯೋಜನೆಯು ಮಹಿಳೆಯರಿಗೆ ಸ್ವಾವಲಂಬನೆಯ ಹಾದಿಯನ್ನು ತೋರಿಸುತ್ತಿದೆ. ಈಗಾಗಲೇ ರಾಜ್ಯ ಸರ್ಕಾರ ಹಂತ ಹಂತವಾಗಿ ಗೃಹಲಕ್ಷ್ಮಿ ಯೋಜನೆಯ ಹಣವನ್ನ ಮಹಿಳೆಯ ಖಾತೆಗೆ ಜಮಾ ಮಾಡಿದ್ದು, ಬಾಕಿ ಉಳಿದಿರುವ ಎರಡು ತಿಂಗಳ ಹಣ ಬಿಡುಗಡೆ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರ ಘೋಷಿಸಿದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಜನವರಿ ತಿಂಗಳ ಹಣವನ್ನ ಮಹಿಳಾ ಫಲಾನುಭವಿಗಳ ಖಾತೆಗೆ ರಾಜ್ಯ ಸರ್ಕಾರ ಈಗಾಗಲೇ ಜಮಾ ಮಾಡಿದ್ದು, ಬಾಕಿ ಉಳಿದಿರುವ ಫೆಬ್ರವರಿ, ಮಾರ್ಚ್(19‌,20 ನೇ) ಕಂತಿನ ಹಣ ಬಿಡುಗಡೆ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದಿ ಇಲಾಖೆಯ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಾಹಿತಿ ನೀಡಿದ್ದು, ಬಾಕಿ ಉಳಿದ ತಿಂಗಳ ಹಣ ಶೀಘ್ರವೇ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Minister Lakshmi Hebbalkar Gives Update On Release Of Funds Under Gruha Lakshmi Scheme

ಜಾತಿ ಗಣತಿ ವರದಿ ಅವೈಜ್ಞಾನಿಕ ಎಂದಿರುವ ಬಿಜೆಪಿ ವಿರುದ್ಧ ಕಿಡಿಕಾರಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬಿಜೆಪಿ ನಾಯಕರು ರಾಜ್ಯದ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಿಸಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲೇ. ಜಾತಿ ಗಣತಿ ಅಧ್ಯಯನ ಮಾಡಿದ್ದು ಬಿಜೆಪಿ ಸರ್ಕಾರದ ಅವಧಿಯಲ್ಲೇ. ಆಗಲೇ ಬಿಜೆಪಿಯವರೇ ಜಾತಿಗಣತಿಯನ್ನು ತಿರಸ್ಕರಿಸಬಹುದಿತ್ತು. ಆದರೀಗ ಬಿಜೆಪಿ ನಾಯಕರು ಜಾತಿಗಣತಿಯನ್ನು ಅವೈಜ್ಞಾನಿಕ ಎಂದು ಹೇಳುತ್ತಿರುವುದು ಹಾಸ್ಯಾಸ್ಪದ ಎಂದು ಕಿಡಿಕಾರಿದರು.

ಜಾತಿ ಗಣತಿ ವರದಿ ಇನ್ನೂ ಚರ್ಚೆಯ ಹಂತದಲ್ಲಿದೆ. ಮೊನ್ನೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆಯಷ್ಟೇ ಆಗಿದೆ. ಇದರ ಬಗ್ಗೆ ಇನ್ನಷ್ಟು ಚರ್ಚೆ ಆಗಬೇಕಿದೆ. ಸಂಪೂರ್ಣವಾಗಿ ಕ್ಯಾಬಿನೆಟ್ ನಲ್ಲಿ ಚರ್ಚೆ ಆದ ಬಳಿಕವಷ್ಟೇ ಪ್ರತಿಕ್ರಿಯಿಸುವುದಾಗಿ ಹೇಳಿದರು. ಜಾತಿಗಣತಿ ವರದಿ ಬಗ್ಗೆ ಇರುವ ಉಹಾಪೋಹಗಳಿಗೆ ಎಡೆಮಾಡಿಕೊಡುವುದು ಬೇಡ. ಯಾವುದೇ ಸಮುದಾಯಕ್ಕೆ ಅನ್ಯಾಯವಾಗದಂತೆ ಎಲ್ಲರಿಗೂ ನ್ಯಾಯ ಸಿಗಬೇಕು ಎಂಬುದೇ ನಮ್ಮ ಉದ್ದೇಶ. ಜಾತಿಗಣತಿಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯ ವೇಳೆ ಸಚಿವರ ನಡುವೆ ಗಲಾಟೆ, ವಾಗ್ವಾದ ನಡೆದಿಲ್ಲ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಸ್ಪಷ್ಟಪಡಿಸಿದರು.

Minister Lakshmi Hebbalkar Gives Update On Release Of Funds Under Gruha Lakshmi Scheme

ಕಳೆದ ಜನವರಿ 14 ರಂದು ಕಾರು ಅಪಘಾತಕ್ಕೆ ಕಾರಣವಾಗಿದ್ದ ಟ್ರಕ್ ಚಾಲಕನನ್ನು ಪೊಲೀಸರು ಬಂಧಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಹೆಬ್ಬಾಳ್ಕರ್‌ ಅವರು, ಅಪಘಾತದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ನಡೆದ ಬಳಿಕವಷ್ಟೇ ಸತ್ಯಾಸತ್ಯತೆ ತಿಳಿಯಲಿದೆ ಎಂದರು. ನಾನು ಕೂಡ ನಿದ್ದೆಗಣ್ಣಿನಲ್ಲಿದ್ದೆ, ನನಗೆ ಯಾವ ರೀತಿಯ ಅನುಮಾನವಿಲ್ಲ. ಚಾಲಕನನ್ನು ಹಿಡಿಯಲು ಪೊಲೀಸರು ಸಾಕಷ್ಟು ಶ್ರಮ ಹಾಕಿದ್ದಾರೆ. ಚಾಲಕ ಮಹಾರಾಷ್ಟ್ರದ ಪುಣೆ ಮೂಲದವರು ಎಂದು ತಿಳಿದು ಬಂದಿದೆ. ಬೆಳಗಾವಿ ಪೊಲೀಸರು ಬಹಳ ಚುರುಕಾಗಿ ತನಿಖೆ ನಡೆಸಿ ಚಾಲಕನನ್ನು ಹಿಡಿದಿದ್ದಾರೆ. ಅವರಿಗೆ ಎಷ್ಟು ಧನ್ಯವಾದ ಹೇಳಿದರೂ ಸಾಲದು ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಕೈಗೊಳ್ಳುವ ಮೂಲಕ ರೈತರ, ಮಹಿಳೆಯರ, ಬಡಜನರ ಸಬಲೀಕರಣಕ್ಕೆ ನಾಂದಿ ಹಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ರೈತರ ಕಷ್ಟಗಳಿಗೆ ಸದಾ ಸ್ಪಂದಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ರೈತರಿಗೆ ಕೃಷಿ ಇಲಾಖೆಯ ಇತಿಹಾಸದಲ್ಲೆ ಮೊದಲ ಬಾರಿಗೆ ಬಹಳ ದೊಡ್ಡ ನ ಮೊತ್ತದ ಸಬ್ಸಿಡಿ ನೀಡಲಾಗಿದೆ. ಇದು ರೈತರ ಮೇಲೆ ಅವರಿಗಿರುವ ಕಾಳಜಿ ಎಂದು ಹೇಳಿದರು. ರೈತರ ಏಳಿಗೆಗಾಗಿ ರಾಜ್ಯ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕೇವಲ ರೈತರಿಗಷ್ಟೇ ಅಲ್ಲದೆ, ಮಕ್ಕಳು, ಮಹಿಳೆಯರು, ಹಿರಿಯ ನಾಗರಿಕರ ಸಬಲೀಕರಣಕ್ಕೂ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+