ನಿವೃತ್ತ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು, ಮಾರ್ಚ್ 20: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹಿತಕಾಯಲು ಸದಾ ಬದ್ಧವಾಗಿದೆ. 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ನೀಡುವ ಸಂಬಂಧ ಶೀಘ್ರವೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲಿ 2011ರ ನಂತರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು, ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಪಾವತಿ ಮಾಡುವ ಕುರಿತು, ಅಂಗನವಾಡಿಯ ವಿವಿಧ ಸಂಘಟನೆಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಚರ್ಚೆ ನಡೆಸಿದರು.

ಗೌರವಧನ ಹೆಚ್ಚಳ, ನಿವೃತ್ತಿಯಾದ ಎಲ್ಲರಿಗೂ ಗ್ರ್ಯಾಚುಟಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಂಘಟನೆಗಳು ಒತ್ತಾಯಿಸುತ್ತಾ ಬಂದಿವೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಕ್ರಮವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಈಗಾಗಲೇ ಸರ್ಕಾರ 2023-24ನೇ ಸಾಲಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ನಿವೃತ್ತಿ ಬಳಿಕ ಗ್ರ್ಯಾಚ್ಯುಟಿಗೆ ಆಡಳಿತಾತ್ಮಕ ಅನುಮತಿ ನೀಡಲಾಗಿದೆ. ಈಗಾಗಲೇ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಸಂಘಟನೆಗಳ ಬೇಡಿಕೆಯಂತೆ 2011ರಿಂದ ಗ್ರ್ಯಾಚ್ಯುಟಿ ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.
ಹಂತ ಹಂತವಾಗಿ ಅಂಗನವಾಡಿ ಬೇಡಿಕೆ ಈಡೇರಿಕೆ
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ದವಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಗೌರವಧನ ಹೆಚ್ಚಳ ಹಾಗೂ ನಿವೃತ್ತಿಯಾದ ಎಲ್ಲರಿಗೂ ಗ್ರಾಚ್ಯುಟಿ ಸೌಲಭ್ಯ ಜಾರಿಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳು ನಡೆಸಿದ ಪ್ರತಿಭಟನಾ ಸ್ಥಳಕ್ಕೆ ಭೇಟಿ ಬುಧವಾರ ನೀಡಿ ಮನವಿ ಸ್ವೀಕರಿಸಿ ಸಚಿವರು ಮಾತನಾಡಿ, ಮಹಿಳೆಯರ ಸಬಲೀಕರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ನಡುವೆಯೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಈ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸಲಾಗಿದೆ ಎಂದರು.
ಇನ್ನೂ ಇಂದು ಅಂಗನವಾಡಿ ಕಾರ್ಯಕರ್ತೆ ಸಂಘಟನೆಯೊಂದಿಗೆ ಸಭೆಯಲ್ಲಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಶಾಮ್ಲಾ ಇಕ್ಬಾಲ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಇಲಾಖೆಯ ನಿರ್ದೇಶಕರಾದ ರಾಘವೇಂದ್ರ, ಎಐಟಿಯುಸಿ ಅಂಗನವಾಡಿ ಸಂಘಟನೆಯ ಅಧ್ಯಕ್ಷರಾದ ಬಿ.ಅಮ್ಜದ್, ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ವರಲಕ್ಷ್ಮೀ, ಟಿಯುಸಿಸಿ ನೇತೃತ್ವದ ಅಂಗನವಾಡಿ ಸಂಘಟನೆಯ ಅಧ್ಯಕ್ಷ ಶಿವಶಂಕರ್, ಪ್ರಧಾನ ಕಾರ್ಯದರ್ಶಿ ನಾಗರತ್ನ ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications