ಸಚಿವ ಸ್ಥಾನ ಇನ್ನೆಷ್ಟು ದಿನ ಇರುತ್ತೋ ಗೊತ್ತಿಲ್ಲ ಎಂದ ರಾಜ್ಯದ ಪ್ರಭಾವಿ ಸಚಿವ: ರಿಪೋರ್ಟ್ ಕಾರ್ಡ್ ಸಂಕಷ್ಟ!
ಕರ್ನಾಟಕದ ಪ್ರಭಾವಿ ಸಚಿವರೊಬ್ಬರು ಸಚಿವ ಸ್ಥಾನ ಕಳೆದುಕೊಳ್ಳುವ ಮಾತನಾಡಿದ್ದಾರೆ. ಸದ್ಯಕ್ಕೆ ರಾಜ್ಯದಲ್ಲಿ ಸಚಿವ ಸಂಪುಟ ಬದಲಾವಣೆ ಅಥವಾ ಪುನರ್‌ರಚನೆಯ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಈಗಾಗಲೇ ರಾಜ್ಯ ಸರ್ಕಾರ ಹಾಗೂ ಕಾಂಗ್ರೆಸ್ ಹೈಕಮಾಂಡ್ ಸಹ ಹೇಳಿದೆ. ಆದರೆ, ಇದರ ನಡುವೆ ರಾಜ್ಯದ ಪ್ರಭಾವಿ ಸಚಿವರು ಸಚಿವ ಸ್ಥಾನದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ಇನ್ನೆಷ್ಟು ದಿನ ಸಚಿವ ಸ್ಥಾನ ಇರಲಿದೆ ಎನ್ನುವ ಬಗ್ಗೆ ಮಾತನಾಡಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಸದ್ಯದ ಮಟ್ಟಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ತುಸು ನಿರಾಳವಾದಂತೆ ಇದ್ದರೂ ಸರ್ಕಾರದ ಮಟ್ಟದಲ್ಲಿ ಹಲವು ಬದಲಾವಣೆಗಳು ನಡೆಯುತ್ತಿರುವಂತಿದೆ. ಇದೀಗ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ.

ಕರ್ನಾಟಕ ಸರ್ಕಾರದಲ್ಲಿ ಕಳೆದ ತಿಂಗಳು ಇದ್ದಂತಹ ಪರಿಸ್ಥಿತಿ ಈಗ ಇಲ್ಲ. ಕಳೆದ ಮೂರ್ನಾಲ್ಕು ತಿಂಗಳಿನಿಂದ ರಾಜ್ಯದಲ್ಲಿ ಹಲವು ಪ್ರಮುಖ ವಿಷಯಗಳು ಚರ್ಚೆಯಾಗುತ್ತಿದ್ದವು. ಮುಡಾ ಹಾಗೂ ವಕ್ಫ್ ಆಸ್ತಿ ಸೇರಿದಂತೆ ಹಲವು ಗಂಭೀರ ವಿಚಾರಗಳಲ್ಲಿ ರಾಜ್ಯ ಸರ್ಕಾರವು ಸಂಕಷ್ಟಕ್ಕೆ ಸಿಲುಕಿತ್ತು.
ಆದರೆ, ಉಪ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್ ಹೊಸ ಹುಮ್ಮಸಿನಲ್ಲಿದೆ. ಆದರೆ, ಸಚಿವರು ಇನ್ನೆಷ್ಟು ದಿನ ಸಚಿವ ಸ್ಥಾನ ಇರಲಿದೆ ಎನ್ನುವುದು ಚರ್ಚೆಗೆ ಗ್ರಾಸವಾಗಿದೆ. ಉನ್ನತ ಶಿಕ್ಷಣ ಡಾ.ಎಂ.ಸಿ.ಸುಧಾಕರ್ ಅವರು ಸಚಿವ ಸ್ಥಾನದ ಬಗ್ಗೆ ಮಾತನಾಡಿದ್ದು, ನನಗೆ ಸಚಿವ ಸ್ಥಾನ ಎಷ್ಟು ದಿನಗಳ ಕಾಲ ಇರಲಿದೆಯೋ ಗೊತ್ತಿಲ್ಲ ಎಂದಿದ್ದಾರೆ.
ಮುಂದುವರಿದು ಕಾಂಗ್ರೆಸ್ ಪಕ್ಷದ (ಹೈಕಮಾಂಡ್) ಅವರು ನನ್ನ ಮೇಲೆ ನಂಬಿಕೆ ಇರಿಸಿ ಸಚಿವ ಸ್ಥಾನ ಕೊಟ್ಟಿದ್ದಾರೆ. ಹೈಕಮಾಂಡ್ ಕೊಟ್ಟಿರುವ ಜವಾಬ್ದಾರಿಯನ್ನು ನಾನು ಚಾಚೂ ತಪ್ಪದೆ ಪಾಲಿಸಿದ್ದೇನೆ ಹಾಗೂ ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ ಎನ್ನುವ ಮೂಲಕ ಉನ್ನತ ಶಿಕ್ಷಣ ಡಾ.ಎಂ.ಸಿ.ಸುಧಾಕರ್ ಅವರು ಶಾಕಿಂಗ್ ಹೇಳಿಕೆಯನ್ನು ಕೊಟ್ಟಿದ್ದಾರೆ.
ನಾನು ನನ್ನ ಕೊಟ್ಟಿರುವ ಜವಾಬ್ದಾರಿ ಸಮರ್ಪಕವಾಗಿ ನಿಭಾಯಿಸಿದ್ದೇನೆ ಎಂದಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸೇರಿ ಪಕ್ಷದ ಹಿರಿಯ ನಾಯಕರು ನನ್ನಗೆ ಪಕ್ಷದಲ್ಲಿ ಜವಾಬ್ದಾರಿ ಕೊಟ್ಟಿದ್ದಾರೆ. ಆದರೆ, ಈ ಸಚಿವ ಸ್ಥಾನ ಇನ್ನೆಷ್ಟು ದಿನ ಇರಲಿದೆಯೋ ಗೊತ್ತಿಲ್ಲ. ಆದರೆ, 2028 ರವರೆಗೂ ನಾನು ಶಾಸಕನಾಗಿಯಂತೂ ಇರುತ್ತೇನೆ ಎಂದಿದ್ದಾರೆ. ಈ ಹೇಳಿಕೆ ಇದೀಗ ಹಲವು ಅನುಮಾನಗಳಿಗೆ ಕಾರಣವಾಗಿದೆ.
ರಿಪೋರ್ಟ್ ಕಾರ್ಡ್ ತರಿಸಿಕೊಂಡಿದ್ದ ಹೈಕಮಾಂಡ್
ಈಚೆಗೆ ರಾಜ್ಯದ ಸಚಿವರೆಲ್ಲರ ರಿಪೋರ್ಟ್ ಕಾರ್ಡ್ ಅನ್ನು ಕಾಂಗ್ರೆಸ್ ಹೈಕಮಾಂಡ್ ತರಿಸಿಕೊಂಡಿತ್ತು. ಕರ್ನಾಟಕದಲ್ಲಿ ಯಾವ ಸಚಿವರ ಕಾರ್ಯ ವೈಖರಿ ಯಾವ ರೀತಿ ಇದೆ ಎನ್ನುವ ಮಾಹಿತಿಯನ್ನು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮೂಲಕ ತರಿಸಿಕೊಳ್ಳಲಾಗಿತ್ತು. ಈ ರಿಪೋರ್ಟ್ ಕಾರ್ಡ್‌ನ ಆಧಾರ ಮೇಲೆ ಏನಾದರೂ ಬದಲಾವಣೆ ಆಗಲಿದೆಯೇ ಎನ್ನುವ ಪ್ರಶ್ನೆ ಇದೀಗ ಎದುರಾಗಿದೆ.












Click it and Unblock the Notifications