Government Employees: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಅಪ್‌ಡೇಟ್‌

ರಾಜ್ಯ ಸರ್ಕಾರಿ ನೌಕರರು ಹಳೇ ಪಿಂಚಣಿ ಜಾರಿ ಕುರಿತು ಇತ್ತೀಚಿಗೆ ಸರ್ಕಾರದ ವಿರುದ್ಧ ಹಲವು ಪ್ರತಿಭಟನೆ ನಡೆಸಿದ್ದಾರೆ. OPS ಜಾರಿ ಕುರಿತು ಸಮಾವೇಶವನ್ನ ನಡೆಸುವ ಮೂಲಕ ಸರ್ಕಾರಿ ನೌಕರರು ಸರ್ಕಾರದ ಮುಂದೆ ತಮ್ಮ ಬೇಡಿಕೆಯನ್ನ ಇಟ್ಟಿದ್ದು, ಬಜೆಟ್‌ ನಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಯಾಗಲಿದೆ ಎಂದು ಸರ್ಕಾರಿ ನೌಕರರು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಸರ್ಕಾರ ತಡವಾದರೂ ಹಳೆ ಪಿಂಚಣಿ ಯೋಜನೆಯನ್ನ ಜಾರಿಗೊಳಿಸುವುದಾಗಿ ಹೇಳಿತ್ತು. ಇದೀಗ ಹಳೆ ಪಿಂಚಣಿ ಯೋಜನೆ ಜಾರಿ ಕುರಿತು ಅಪ್‌ಡೇಟ್‌ ಸಿಕ್ಕಿದೆ.

ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿ, ಚುನಾವಣೆ ಪೂರ್ವದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೀಡಿದ್ದ ಓಪಿಎಸ್ ಜಾರಿಗೊಳಿಸುವ ಭರವಸೆ ಈಡೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ನಮ್ಮ ಸರ್ಕಾರ ಕೊಟ್ಟ ಭರವಸೆಯಂತೆ ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಓಪಿಎಸ್‌ನ್ನು ಮುಂದಿನ ಕೆಲವೇ ದಿನಗಳಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ.

Minister Madhu Bangarappa Gives Update On Implementation Of Old Pension Scheme

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಅಧಿಕ ಅನುದಾನ ನೀಡಿದ್ದು, ರಾಜ್ಯದಲ್ಲಿ ಕೆ.ಪಿ.ಎಸ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರಸ್ತುತ 300 ಕೆ.ಪಿ.ಎಸ್. ಶಾಲೆಗಳಿದ್ದು, ಈ ವರ್ಷ ಮತ್ತೆ 500ಕ್ಕೂ ಹೆಚ್ಚು ಶಾಲೆಗಳನ್ನು ತೆರೆಯಲಾಗುವುದು. ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 16 ಸಾವಿರ ಶಿಕ್ಷಕರ ನೇಮಕಾತಿಗೆ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರು, ಕಲ್ಯಾಣ ಕರ್ನಾಟಕ ಭಾಗಕ್ಕೆ 5 ಸಾವಿರ ಶಿಕ್ಷಕರು, ಇನ್ನುಳಿದ ಭಾಗಕ್ಕೆ 5 ಸಾವಿರ ಶಿಕ್ಷಕರನ್ನು ತೆಗೆದುಕೊಳ್ಳಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಸದ್ಯದಲ್ಲಿಯೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ರಾಜ್ಯದಲ್ಲಿ ಕೆ.ಪಿ.ಎಸ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಪ್ರಸ್ತುತ 300 ಕೆ.ಪಿ.ಎಸ್. ಶಾಲೆಗಳಿದ್ದು, ಈ ವರ್ಷ ಮತ್ತೆ 500ಕ್ಕೂ ಹೆಚ್ಚು ಶಾಲೆಗಳನ್ನು ತೆರೆಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಾಲೆಗಳಲ್ಲಿ ಮಕ್ಕಳಿಗೆ ನೀತಿ ವಿಜ್ಞಾನ ಕಲಿಕೆ ಅಗತ್ಯವಿದೆ. ಒಂದರಿಂದ 10ನೇ ತರಗತಿಯವರೆಗೆ ನೀತಿ ವಿಜ್ಞಾನ ಕಲಿಸುವ ಯೋಜನೆ ಜಾರಿಗೆ ಚಿಂತನೆ ನಡೆದಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಅನುಷ್ಠಾನಕ್ಕೆ ತರಲಾಗುವುದು. ವಾರಕ್ಕೆ ಎರಡು ದಿನ ಈ ವಿಷಯ ಕಲಿಸಲಿದ್ದು, ಎರಡು ದಿನ ಶಿಕ್ಷಣ, ಎರಡು ದಿನ ಕಲಿಕೆಯ ವಿಷಯ ತರಗತಿಗಳು ಇರಲಿವೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿಯ ಬಜೆಟ್‌ನಲ್ಲಿ ಅಧಿಕ ಅನುದಾನ ನೀಡಿದ್ದು, ಎಂದರು. ಅನುದಾನಿತ ಶಾಲೆಗಳಿಗೆ 6 ಸಾವಿರ ಶಿಕ್ಷಕರು, ಕಲ್ಯಾಣ ಕರ್ನಾಟಕ ಭಾಗಕ್ಕೆ 5 ಸಾವಿರ ಶಿಕ್ಷಕರು, ಇನ್ನುಳಿದ ಭಾಗಕ್ಕೆ 5 ಸಾವಿರ ಶಿಕ್ಷಕರನ್ನು ತೆಗೆದುಕೊಳ್ಳಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು, ಸದ್ಯದಲ್ಲಿಯೇ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಜನಾಶೀರ್ವಾದ ಪಡೆದು ಅಭಿವೃದ್ಧಿ ಪರವಾಗಿ ಕಾರ್ಯ ನಿರ್ವಹಿಸುತ್ತಿದೆ. ವಿರೋಧ ಪಕ್ಷಗಳು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಬೊಬ್ಬೆಹೊಡೆದರು. ಆದರೆ ನಮ್ಮ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡು ಅಭಿವೃದ್ಧಿಯ ಆಡಳಿತವನ್ನು ನೀಡುತ್ತಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ಬಡವರ ಬದುಕು ಹಸನಾಗುತ್ತಿದೆ. ಆದರೆ ವಿರೋಧ ಪಕ್ಷಗಳು ಜನರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸುತ್ತಿದ್ದಾರೆ ಅದು ಸಾಧ್ಯವಿಲ್ಲ. ಅವರ ಟೀಕೆ-ಟಿಪ್ಪಣಿ, ಆಪಾದನೆಗಳಿಗೆ ಸರಿಯಾದ ಉತ್ತರ ನೀಡಬೇಕು ಎಂದು ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದರು.

ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಹಾಗೂ ಜಿಲ್ಲಾ ಪಂಚಾಯಿತಿ ಸೇರಿದಂತೆ ಯಾವುದೇ ಚುನಾವಣೆಗಳಿಗೆ ತಯಾರಾಗಬೇಕು. ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಳ್ಳುವಲ್ಲಿ ನಮ್ಮ ಪಕ್ಷದ ಕಾರ್ಯಕರ್ತರ ಪಾತ್ರ ಬಹುಮುಖ್ಯವಾಗಿದೆ. ಆದರೆ ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬಿಟ್ಟು ನಾವೆಲ್ಲರು ಒಗ್ಗಟ್ಟಾಗಿ ಪಕ್ಷವನ್ನು ಸಂಘಟಿಸಬೇಕು. ಹಿರಿಯರ ಮಾರ್ಗದರ್ಶನ ಹಾಗೂ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದ್ದೇನೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+