ರಾಜ್ಯದಲ್ಲಿ ಶಾಲಾ ಶಿಕ್ಷಕರ ವೇತನ, ಬಡ್ತಿ ಕುರಿತು ಸಚಿವ ಮಧುಬಂಗಾರಪ್ಪ ಮಹತ್ವದ ಮಾಹಿತಿ
Teachers School Salary And Promotion: ರಾಜ್ಯದಲ್ಲಿ ಶಿಕ್ಷಣ ಇಲಾಖೆ ಶಾಲಾ ಶಿಕ್ಷಕರಿಗೆ ಅನುಕೂಲ ಆಗುವಂತೆ ಆಗಾಗ ಮಹತ್ವದ ನಿರ್ಧಾರ ತೆಗೆದುಕೊಳುತ್ತಲಿರುತ್ತದೆ. ಹಾಗೆಯೇ ಇದೀಗ ವೇತನ, ಬಡ್ತಿ ಕುರಿತು ಪ್ರಮುಖ ಮಾಹಿತಿಯನ್ನು ಸಚಿವ ಮಧುಬಂಗಾರಪ್ಪ ಅವರು ಹೊರಹಾಕಿದ್ದಾರೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಅನುದಾನಿತ ಶಾಲೆಗಳ ಶಿಕ್ಷಕರಿಗೆ ರಿಲೀಫ್ ಸಿಕ್ಕಿದ್ದು, ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಶೇಕಡ 60ಕ್ಕಿಂತ ಕಡಿಮೆ ಫಲಿತಾಂಶ ಬಂದಿದ್ದರೆ, ವಿಷಯ ಶಿಕ್ಷಕರ ವಾರ್ಷಿಕ ವೇತನ, ಬಡ್ತಿ ತಡೆಹಿಡಿಯುವ ಕ್ರಮ ಜಾರಿ ಮಾಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಬಿಜೆಪಿಯ ಎಸ್.ವಿ. ಸಂಕನೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ ಅವರು, 2019ರಲ್ಲಿ ಹೊರಡಿಸಿದ ಆದೇಶ ಹಿಂಪಡೆಯುವ ಬಗ್ಗೆ ಪರಿಶೀಲನೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಶೇಕಡ 60ಕ್ಕಿಂತ ಕಡಿಮೆ ಫಲಿತಾಂಶ ಬಂದಿದ್ದರೆ, ವಿಷಯ ಶಿಕ್ಷಕರ ವಾರ್ಷಿಕ ವೇತನ, ಬಡ್ತಿ ತಡೆಹಿಡಿಯುವ, ಶಿಕ್ಷಕರ ವೇತನ ಅನುದಾನ ತಡೆಹಿಡಿಯುವ ಕ್ರಮ ಜಾರಿ ಮಾಡುವುದಿಲ್ಲ. ಈ ಸಂಬಂಧ 2019ರಲ್ಲಿ ಹೊರಡಿಸಿದ ಆದೇಶ ಹಿಂಪಡೆಯುವ ಬಗ್ಗೆ ನಿರ್ಧರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?: ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಕೊಡುವ ಭಾಗವಾಗಿ ಮೊಟ್ಟೆ ಹಾಗೂ ಬಾಳೆ ಹಣ್ಣು ವಿತರಣೆ ಮಾಡುವ ಬಗ್ಗೆ ಹಲವಡೆ ಆಕ್ಷೇಪಗಳು ಕೇಳಿಬಂದಿದ್ದವು. ಈ ಹಿನ್ನೆಲೆ ಪೋಷಕರಿಂದ ಕಡ್ಡಾಯವಾಗಿ ಒಪ್ಪಿಗೆ ಪತ್ರ ಪಡೆದು ಮೊಟ್ಟೆ, ಬಾಳೆಹಣ್ಣು ವಿತರಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೆನುಗೆ ಮೊಟ್ಟೆ ಸೇರಿಸಿದ ಬಳಿಕ ಕೆಲವು ಪೋಷಕರು ಮೊಟ್ಟೆ ತಿನ್ನಿಸುವುದಕ್ಕೆ ವಿರೋಧ ವ್ಯಕ್ತ ಪಡಿಸಿದ್ದಾರೆ. ಆದ್ದರಿಂದ ಶಾಲಾ ಪ್ರವೇಶ ಆದ ತಕ್ಷಣವೇ ವಿದ್ಯಾರ್ಥಿಗಳ ಪೋಷಕರಿಂದ ಮೊಟ್ಟೆ ತಿನ್ನುವ, ಇಲ್ಲವೇ ಬಾಳೆಹಣ್ಣು ತಿನ್ನುವ ಬಗ್ಗೆ ಅನುಮತಿ ಪತ್ರವನ್ನ ಪಡೆಯುತ್ತೇವೆ ಎಂದು ಹೇಳಿದರು. ಮಕ್ಕಳಿಗೆ ಪೌಷ್ಟಿಕಾಂಶದ ಕೊರತೆ ಇರುವುದರಿಂದ ಮೊಟ್ಟೆ ವಿತರಣೆ ಮಾಡುವಂತೆಯೂ ಶಿಕ್ಷಣ ತಜ್ಞರು ಮತ್ತು ವೈದ್ಯರು ಶಿಫಾರಸು ಮಾಡಿದ್ದಾರೆ ಅಂತಲೂ ಇದೇ ವೇಳೆ ಹೇಳಿದರು.












Click it and Unblock the Notifications