SSLC Result 2025: ರಾಜ್ಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಸಚಿವ ಮಧುಬಂಗಾರಪ್ಪ ಕಿವಿಮಾತು
ಬೆಂಗಳೂರು, ಮೇ 02: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಕಾತುರದಿಂದ ವಿಧ್ಯಾರ್ಥಿಗಳು ಕಾಯುತ್ತಿದ್ದು, ಇಂದು ಎಸ್‌ಎಸ್‌ಎಲ್‌ಸಿ ( Karnataka SSLC Exam ) ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ಇಂದು ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ಶುಕ್ರವಾರ 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಬೆಳಗ್ಗೆ 11:30ಕ್ಕೆ ಬೆಂಗಳೂರಿನ KSEAB ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.

ಇನ್ನೂ ಎಸ್ ಎಸ್ ಎಲ್ ಸಿ ಪರಿಕ್ಷೆ ಫಲಿತಾಂಶ ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವ ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದು, ಆತ್ಮೀಯ ವಿದ್ಯಾರ್ಥಿ ಮಿತ್ರರೇ, ಎಸ್. ಎಸ್. ಎಲ್. ಸಿ. ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ನನ್ನ ಶುಭ ಹಾರೈಕೆಗಳು. ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ... ಶುಭವಾಗಲಿ... ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ-02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು ಎಂದಿದ್ದಾರೆ. ಇನ್ನೂ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ. ಈ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಅಂತ ಮಾಹಿತಿ ನೀಡಿದ್ದಾರೆ.












Click it and Unblock the Notifications