Prakash Raj VS MB Patil: ನಟ ಪ್ರಕಾಶ್ ರೈಗೆ ಮಹತ್ವದ ಸಲಹೆ ಕೊಟ್ಟು ಕುಟುಕಿದ ಎಂ ಬಿ ಪಾಟೀಲ್
ಬೆಂಗಳೂರು, ಜುಲೈ 08: ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಹೋರಾಟದ ಹಕ್ಕಿದೆ. ನಾನೂ ಹೋರಾಟ ಮಾಡಿಕೊಂಡೇ ಬಂದಿರುವವನು. ಈ ವಿಷಯ ಬಹುಭಾಷಾ ನಟ ಪ್ರಕಾಶ್ ರೈಗೆ ಗೊತ್ತಿರಲಿಕ್ಕಿಲ್ಲ. ಬರಪೀಡಿತ ವಿಜಯಪುರ ಜಿಲ್ಲೆಯನ್ನು ನಾನು ಹೋರಾಡಿಯೇ ನೀರಾವರಿ ಭೂಮಿಯನ್ನಾಗಿ ಮಾಡಿದ್ದೇನೆ. ಪ್ರಕಾಶ್ ರೈ ಅವರು ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು ಮತ್ತು ಜನಪ್ರಿಯರು. ಆದ್ದರಿಂದ ಅವರು ಬೇರೆಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸಲಹೆ ಕೊಟ್ಟು ಕುಟುಕಿದ್ದಾರೆ.
ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ನಮ್ಮಲ್ಲಿ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕಿಗಾಗಿ ಕೇವಲ 1,282 ಎಕರೆ ಮಾತ್ರ ಸ್ವಾಧೀನಪಡಿಸಿಕೊಳ್ಳಲು ತೀರ್ಮಾನಿಸಿದ್ದೇವೆ. ಪಕ್ಕದ ಆಂಧ್ರ ಪ್ರದೇಶದಲ್ಲಿ ಇದೇ ಉದ್ದೇಶಕ್ಕಾಗಿ ನಮ್ಮ ಗಡಿಗೇ ಅಂಟಿಕೊಂಡಿರುವ ಮಡಕಶಿರಾದಿಂದ ಪೆನುಗೊಂಡದವರೆಗೆ 10 ಸಾವಿರ ಎಕರೆಯನ್ನು ಸ್ವಾಧೀನಪಡಿಸಿಕೊಂಡು, ಉಚಿತವಾಗಿ ಕೊಡುವುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಆಂಧ್ರದಲ್ಲಿ ಬೇರೆಬೇರೆ ಕೈಗಾರಿಕಾ ಉದ್ದೇಶಗಳಿಗೆ 45 ಸಾವಿರ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಇನ್ಫೋಸಿಸ್, ಕಾಗ್ನಿಜೆಂಟ್, ಟಿಸಿಎಸ್ ಮುಂತಾದ 100 ಕಂಪನಿಗಳಿಗೆ ವಿಶಾಖಪಟ್ಟಣದಲ್ಲಿ ಎಕರೆಗೆ ಬರೀ 99 ಪೈಸೆಯಂತೆ ಭೂಮಿ ಕೊಡಲಾಗಿದೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ಪ್ರಕಾಶ್ ರೈಗೆ ಇವೆಲ್ಲ ಕಾಣಿಸುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಇತ್ತ ತಮಿಳುನಾಡಿನ ಹೊಸೂರು ನಮ್ಮಿಂದ ಕೇವಲ 50 ಕಿ.ಮೀ. ದೂರದಲ್ಲಿದೆ. ಅಲ್ಲಿನ ಸರಕಾರ ಈಗ ಆ ಪ್ರದೇಶವನ್ನು ಕೇಂದ್ರೀಕರಿಸಿ ಕೈಗಾರಿಕಾ ಬೆಳವಣಿಗೆಯನ್ನು ವಿಸ್ತರಿಸುತ್ತಿದೆ. ಜತೆಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನೂ ನಿರ್ಮಿಸಲು ಮುಂದಾಗಿದೆ. ಇದಕ್ಕೆಲ್ಲ ಅದೂ ಸಹ ಅಗ್ಗದ ದರದಲ್ಲಿ ಭೂಮಿ ಕೊಡುತ್ತಿದೆ. ಆಂಧ್ರ ಮತ್ತು ತಮಿಳುನಾಡಿನಲ್ಲಿ ಉದ್ಯಮ ನಡೆಸುತ್ತಿರುವವರಿಗೆ ಬೆಂಗಳೂರು ಬರೀ ಆಶ್ರಯತಾಣವಾಗಿ ಕಾಣುತ್ತಿದೆ. ಆಂಧ್ರದ ಯೋಜನೆ ಗೆದ್ದರೆ, ನಮ್ಮ ರಕ್ಷಣಾ ಮತ್ತು ಏರೋಸ್ಪೇಸ್ ಕಂಪನಿಗಳು ಅಲ್ಲಿಗೆ ಹೋಗಬಹುದು. ಇದರಿಂದ ರಾಜ್ಯಕ್ಕೆ ಆಗುವ ನಷ್ಟವನ್ನು ಅಂದಾಜು ಮಾಡಲೂ ಸಾಧ್ಯವಿಲ್ಲ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ಕರ್ನಾಟಕವು ದೇಶದ ರಕ್ಷಣೆ ಮತ್ತು ವೈಮಾಂತರಿಕ್ಷ ವಹಿವಾಟಿನಲ್ಲಿ ಶೇಕಡ 65ರಷ್ಟು ಪಾಲು ಹೊಂದಿದ್ದು, ಈ ವಲಯದಲ್ಲಿನ ನಮ್ಮ ಕಾರ್ಯ ಪರಿಸರವು ಜಾಗತಿಕವಾಗಿ ತೃತೀಯ ಸ್ಥಾನದಲ್ಲಿದೆ. ನಮ್ಮಲ್ಲಿ ಈ ವಲಯದ ಎಚ್ಎಎಲ್, ಸ್ಯಾಫ್ರಾನ್, ಬೋಯಿಂಗ್, ಏರ್ ಬಸ್, ಕಾಲಿನ್ಸ್, ಲಾಕ್ ಹೀಡ್ ಮಾರ್ಟಿನ್ ಮುಂತಾದ ದೈತ್ಯ ಕಂಪನಿಗಳಿವೆ. ದೇವನಹಳ್ಳಿಯಲ್ಲಿರುವ ವಿಮಾನ ನಿಲ್ದಾಣದ ಪಕ್ಕದಲ್ಲೇ ಏರೋಸ್ಪೇಸ್ ಪಾರ್ಕ್ ಇದೆ. ಇದಕ್ಕೆ ಮತ್ತಷ್ಟು ಬಲ ತುಂಬಲೆಂದೇ ಈಗ ಅದರ ಸನಿಹದಲ್ಲೇ ಉದ್ದೇಶಿತ ಪಾರ್ಕ್ ಸ್ಥಾಪಿಸುವ ಚಿಂತನೆ ಇದೆ. ಸಂತ್ರಸ್ತ ರೈತರಿಗೆ 2013ರ ಭೂಸ್ವಾಧೀನ ಕಾಯ್ದೆಯ ಪ್ರಕಾರವೇ ನ್ಯಾಯಯುತ ಪರಿಹಾರ ಕೊಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಪ್ರಕಾಶ್ ರೈ ಬಗ್ಗೆ ವೈಯಕ್ತಿಕವಾಗಿ ಯಾವ ಸಿಟ್ಟೂ ಇಲ್ಲ. ಹಿಂದೆ ನಾನು ನೀರಾವರಿ ಸಚಿವನಾಗಿದ್ದಾಗಲೂ ಒಳ್ಳೆಯ ಕೆಲಸಗಳನ್ನೇ ಮಾಡಿದ್ದೇನೆ. ರೈತ ಮುಖಂಡ ಬಯ್ಯಾರೆಡ್ಡಿ ಅವರೇ ಇದನ್ನು ಮೆಚ್ಚಿಕೊಂಡು ಮಾತನಾಡಿದ್ದರು. ದುರದೃಷ್ಟವಶಾತ್ ಇವತ್ತು ಅವರು ನಮ್ಮೊಂದಿಗಿಲ್ಲ. ಅವರು ನಿಜವಾದ ರೈತ ನಾಯಕರಾಗಿದ್ದರು. ಈಗ ನಮ್ಮ ವಿರುದ್ಧ ಮಾತನಾಡುತ್ತಿರುವವರು ಇದನ್ನೆಲ್ಲ ಅರಿಯಬೇಕು ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಬುಧವಾರ ರಾಜನಾಥ್ ಸಿಂಗ್ ಭೇಟಿ
ಹಿಂದೆ ಕೇಂದ್ರ ಸರಕಾರವು ನಮ್ಮನ್ನು ಕಡೆಗಣಿಸಿ ತಮಿಳುನಾಡು ಮತ್ತು ಉತ್ತರಪ್ರದೇಶಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಿದೆ. ಈ ಲೋಪವನ್ನು ನಾನು ಹಿಂದೆಯೇ ಕೇಂದ್ರ ಸರಕಾರದ ಗಮನಕ್ಕೆ ತಂದಿದ್ದೇನೆ. ಕೋಲಾರ-ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ-ಬೆಳಗಾವಿ ನಡುವೆ ನಮಗೆ ಎರಡು ಡಿಫೆನ್ಸ್ ಕಾರಿಡಾರ್ ಕೊಡಬೇಕು. ಇದನ್ನು ಮನದಟ್ಟು ಮಾಡಿಕೊಡಲೆಂದೇ ಬುಧವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡುತ್ತಿದ್ದೇನೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಇರಲಿದ್ದಾರೆ ಎಂದು ಎಂ ಬಿ ಪಾಟೀಲ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ರಕ್ಷಣೆ ಮತ್ತು ವೈಮಾಂತರಿಕ್ಷ ವಲಯದಲ್ಲಿ ನಾವು ದೇಶಕ್ಕೇ ಅಗ್ರಸ್ಥಾನದಲ್ಲಿದ್ದೇವೆ. ಹೀಗಾಗಿ ನಮಗೆ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಭಾಗದಲ್ಲಿ ಒಂದೊಂದು ಡಿಫೆನ್ಸ್ ಕಾರಿಡಾರ್ ಅಗತ್ಯವಾಗಿ ಬೇಕಾಗಿದೆ. ಬೆಳಗಾವಿಯಲ್ಲಿ ಈಗ ಏಕಸ್ ತರಹದ ದೈತ್ಯ ಕಂಪನಿಗಳಿವೆ. ಬೇರೆ ರಾಜ್ಯದವರಿಗೆ ಡಿಫೆನ್ಸ್ ಕಾರಿಡಾರ್ ಕೊಡುವುದರಲ್ಲಿ ತಪ್ಪಿಲ್ಲ. ಆದರೆ, ನಮಗೆ ಸಲ್ಲಬೇಕಾದ್ದು ಸಲ್ಲಲೇಬೇಕು. ಹಿಂದೆ ಮಾಡಿದ ತಪ್ಪು ಕೇಂದ್ರ ಸರಕಾರಕ್ಕೂ ಅರಿವಾಗಿದೆ. ನಮ್ಮ ಹಿಂದಿನ ಭೇಟಿಗಳಲ್ಲಿ ರಾಜನಾಥ್ ಸಿಂಗ್ ಅವರೇ ಇದನ್ನು ಒಪ್ಪಿಕೊಂಡಿದ್ದರು. ಫೆಬ್ರವರಿಯಲ್ಲಿ ಅವರು ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬಂದಿದ್ದಾಗಲೂ ಈ ಸಂಗತಿಯನ್ನು ಪ್ರಸ್ತಾಪಿಸಲಾಗಿತ್ತು ಎಂದು ಅವರು ನುಡಿದಿದ್ದಾರೆ.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications