ರಾಗಿ-ಭತ್ತದ ತಳಿಗೆ ಜಿ. ಮಾದೇಗೌಡರ ಹೆಸರಿಡಲು ಕ್ರಮ ವಹಿಸಲು ಕೃಷಿ ವಿವಿಗೆ ಸಚಿವ ಚಲುವರಾಯಸ್ವಾಮಿ ಆದೇಶ
ಮಂಡ್ಯ, ಜುಲೈ 13: ರಾಗಿ ಅಥವಾ ಭತ್ತದ ತಳಿಗೆ ರಾಜ್ಯದ ಹಿರಿಯ ಮುತ್ಸದ್ದಿ, ರೈತ ಹೋರಾಟಗಾರರಾದ ದಿ. ಜಿ. ಮಾದೇಗೌಡರ ಹೆಸರಿಡಲು ಕ್ರಮ ವಹಿಸಿ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ ಕುಲಪತಿಗಳಿಗೆ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಸೂಚನೆ ನೀಡಿದ್ದಾರೆ.
ಜುಲೈ 12ರ ಸೋಮವಾರದಂದು ನಡೆದಿದ್ದ ಡಾ. ಜಿ. ಮಾದೇಗೌಡ ಪ್ರತಿಷ್ಠಾನದ 23ನೇ ವರ್ಷದ ರಾಜ್ಯ ಮಟ್ಟದ ಜಿ. ಮಾದೇಗೌಡ ಸಮಾಜಸೇವಾ ಮತ್ತು ಸಾವಯವ ಕೃಷಿ ಪ್ರಶಸ್ತಿ ಸಮಾರಂಭದಲ್ಲಿ ಶಾಸಕ ದಿನೇಶ್ ಗೂಳಿಗೌಡ ಅವರು ಈ ವಿಷಯದ ಬಗ್ಗೆ ಕೃಷಿ ಸಚಿವರ ಗಮನ ಸೆಳೆದಿದ್ದರು.
ಜಿ. ಮಾದೇಗೌಡರು ಕಳೆದ 60 ವರ್ಷಗಳ ಕಾಲ ಶೈಕ್ಷಣಿಕವಾಗಿ, ರಾಜಕೀಯವಾಗಿ ಹತ್ತು ಹಲವು ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ. ಅವರ ಹೆಸರು ಮುಂದಿನ ಪೀಳಿಗೆಗೆ ಚಿರಸ್ಥಾಯಿಯಾಗಿ ಉಳಿಯಲು ಭತ್ತ ಅಥವಾ ರಾಗಿ ತಳಿಗೆ ಅವರ ಹೆಸರನ್ನು ನಾಮಕರಣ ಮಾಡಬೇಕು. ಈ ಮೂಲಕ ಅವರಿಗೆ ಗೌರವವನ್ನು ಸಮರ್ಪಣೆ ಮಾಡಬೇಕು" ಎಂದು ವೇದಿಕೆಯಲ್ಲಿದ್ದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಮನವಿ ಮಾಡಿದ್ದರು.

ಈ ಮನವಿಗೆ ಅದೇ ಕಾರ್ಯಕ್ರಮದಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಸ್ಪಂದನೆ ನೀಡಿದ್ದರು. ತುರ್ತಾಗಿ ಈ ಬಗ್ಗೆ ಕ್ರಮ ವಹಿಸುವುದಾಗಿಯೂ ಹೇಳಿದ್ದರು. ಈಗ ಈ ಸಂಬಂಧ ಕ್ರಮ ವಹಿಸುವಂತೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಉಪ ಕುಲಪತಿಗಳಿಗೆ ಮತ್ತು ಕೃಷಿ ಇಲಾಖೆ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಮಂಡ್ಯದ ಡಾ. ಜಿ. ಮಾದೇಗೌಡ ಪ್ರತಿಷ್ಠಾನವು ಹಮ್ಮಿಕೊಂಡಿದ್ದ 23ನೇ ವರ್ಷದ ರಾಜ್ಯ ಮಟ್ಟದ ಜಿ. ಮಾದೇಗೌಡ ಸಮಾಜಸೇವಾ ಮತ್ತು ಸಾವಯವ ಕೃಷಿ ಪ್ರಶಸ್ತಿ ಸಮಾರಂಭದಲ್ಲಿ ಶಾಸಕರಾದ ದಿನೇಶ್ ಗೂಳಿಗೌಡ ಅವರು ಮಾತನಾಡಿ, ಜಿ. ಮಾದೇಗೌಡರು ಕಳೆದ 60 ವರ್ಷಗಳ ಕಾಲ ಶೈಕ್ಷಣಿಕವಾಗಿ, ರಾಜಕೀಯವಾಗಿ ಹತ್ತು ಹಲವು ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ. ಅವರ ಹೆಸರು ಮುಂದಿನ ಪೀಳಿಗೆಗೆ ಚಿರಸ್ಥಾಯಿಯಾಗಿ ಉಳಿಯಲು ಭತ್ತ ಅಥವಾ ರಾಗಿ ತಳಿಗೆ ಅವರ ಹೆಸರನ್ನು ನಾಮಕರಣ ಮಾಡುವಂತೆ ಈ ಸಂದರ್ಭದಲ್ಲಿ ವೇದಿಕೆಯಲ್ಲಿದ್ದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ ಮನವಿ ಮಾಡಿದರು.

ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಈ ಬಗ್ಗೆ ಸಕಾರಾತ್ಮಕ ಸ್ಪಂದನೆ ನೀಡಿದ್ದು, ಹೆಸರನ್ನು ಇಡುವ ಬಗ್ಗೆ ಒಲವು ತೋರಿದರು.












Click it and Unblock the Notifications