ಬಸವಣ್ಣನನ್ನ ಪಲಾಯನವಾದಿ ಅಂದ್ರಾ ಯತ್ನಾಳ್‌? ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಸವಣ್ಣ ಅವರನ್ನು ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್‌ ಸಚಿವ ಪ್ರಿಯಾಂಕ್‌ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಜಗಜ್ಯೋತಿ ಬಸವಣ್ಣನವರ ಬಗ್ಗೆ ಅತ್ಯಂತ ಅವಮಾನಕರವಾಗಿ, ಅತ್ಯಂತ ಹಗುರವಾಗಿ ಮಾತನಾಡಿರುವ ಬಿಜೆಪಿ ಶಾಸಕ ಯತ್ನಾಳ್ ಅವರು ಕ್ಷಮಿಸಲಾರದ ತಪ್ಪೆಸಗಿದ್ದಾರೆ ಎಂದು ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ನಾಯಕರು, ಅಲ್ಪಸಂಖ್ಯಾತರ ಬಗ್ಗೆ ಮನಸೋ ಇಚ್ಛೆ ಮಾತನಾಡುತ್ತಿದ್ದ ಬಿಜೆಪಿಯವರ ನಾಲಿಗೆಗಳು ಈಗ ಸಮಾಜ ಸುಧಾರಣೆಗೆ ಜೀವ ಸವೆಸಿದ ಮಹನೀಯರ ಬುಡಕ್ಕೂ ಚಾಚುವಷ್ಟು ಉದ್ದವಾಗಿವೆ. ಬಸವಣ್ಣನವರ ಹಾಗೆ ಹೊಳೆ ಹಾರಬೇಕು ಎನ್ನುವ ಮೂಲಕ ಬಸವಣ್ಣನವರನ್ನು ಪಲಾಯನವಾದಿ ಎಂಬರ್ಥದಲ್ಲಿ ಮಾತನಾಡಿದ ಯತ್ನಾಳ್ ಅವರನ್ನು ಈ ನಾಡಿನ ಪ್ರಜ್ಞಾವಂತ ಬಸವಾನುಯಾಯಿಗಳು ಗಟ್ಟಿ ಧ್ವನಿಯಲ್ಲಿ ಖಂಡಿಸಬೇಕಿದೆ ಎಂದು ಕರೆ ನೀಡಿದ್ದಾರೆ.

Minister Priyank Kharge Accused BJP MLA Basanagowda Patil Yatnal Insulted Basavanna

ತನ್ನ ಬಣ್ಣಿಸಬೇಡ, ಇದಿರು ಹಳಿಯಬೇಡ ಎಂದಿದ್ದ ಬಸವಣ್ಣನವರ ಹೆಸರನ್ನು ಯತ್ನಾಳ್ ಅವರು ತಮ್ಮ ದ್ವೇಷ ಭಾಷಣಕ್ಕೆ ಬಳಸಿದ್ದು ಮತ್ತೊಂದು ಘೋರ ಅಪರಾಧ. ಬಸವಣ್ಣನವರು ಹೊಳೆ ಹಾರಿಲ್ಲ, ಈ ಸಮಾಜಕ್ಕೆ ಜ್ಞಾನದ ಹೊಳೆ ಹರಿಸಿದ್ದಾರೆ, ಯತ್ನಾಳ್ ಅವರೇ..ನಿಮ್ಮ ಪ್ರಕಾರ ಬಸವಣ್ಣನವರು ಹೊಳೆ ಹಾರಿದ್ದಾರೆ ಎನ್ನುವುದಾದರೆ ಅವರನ್ನು ಹೊಳೆಗೆ ಹಾರುವಂತೆ ಮಾಡಿದವರು ಯಾರು? ಇಂದು ಯತ್ನಾಳ್ ಅವರು ಪ್ರತಿಪಾದಿಸುತ್ತಿರುವ ಸಿದ್ಧಾಂತವೇ ಅಂದು ಬಸವಾದಿ ಶರಣರನ್ನು ಹಿಂಸಿಸಿದ್ದಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಕಲ್ಯಾಣದ ಶರಣರ ಹತ್ಯೆ ನಡೆಸಿದವರು ಯಾರು? ಶರಣರು "ಮರಣವೇ ಮಹಾನವಮಿ" ಎಂದಿದ್ದೇಕೆ? ವಚನ ಬಂಡಾರಕ್ಕೆ ಬೆಂಕಿ ಇಟ್ಟವರು ಯಾರು? ಅನುಭವ ಮಂಟಪಕ್ಕೆ ದಾಳಿ ಮಾಡಿದವರು ಯಾರು? ಮಡಿವಾಳ ಮಾಚಿದೇವರು ಕತ್ತಿ ಹಿಡಿದಿದ್ದೇಕೆ? ಯಾರಿಂದ ರಕ್ಷಣೆ ಪಡೆಯಲು? ಬಿಜೆಪಿಯವರಿಗೆ ಈ ವಿಚಾರಗಳ ಬಗ್ಗೆ ಚರ್ಚಿಸುವ ಶಕ್ತಿ ಇದೆಯೇ? ಎಂದು ಸವಾಲು ಹಾಕಿದ್ದಾರೆ.

Minister Priyank Kharge Accused BJP MLA Basanagowda Patil Yatnal Insulted Basavanna

ಬಸವಣ್ಣನವರ ಅನುಭವ ಮಂಟಪದ ಪರಿಕಲ್ಪನೆಯಲ್ಲೇ ಇಂದು ನಾವು ಪ್ರಜಾಪ್ರಭುತ್ವವನ್ನು ಅಳವಡಿಸಿಕೊಂಡಿದ್ದೇವೆ. ಅವರ ತತ್ವಗಳ ಪ್ರೇರಣೆಯಲ್ಲೇ ನಮ್ಮ ಸಂವಿಧಾನವಿದೆ. ಧಮನಿತರಿಗೆ ಆತ್ಮಶಕ್ತಿ ನೀಡಿದ, ಶೋಷಿತರಿಗೆ ಘನತೆಯ ಬದುಕು ತಂದುಕೊಟ್ಟ, ಕಲ್ಯಾಣ ಕ್ರಾಂತಿಯ ಮೂಲಕ ಮೌಢ್ಯದಲ್ಲಿ ಜಡಗಟ್ಟಿದ್ದ ಸಮಾಜಕ್ಕೆ ಹೊಸ ಮಾರ್ಗ ತೋರಿದ ಬಸವಣ್ಣನವರು ಕೇವಲ "ಹೊಳೆ ಹಾರಿದವರಾಗಿ" ಕಂಡಿದ್ದು ಬಿಜೆಪಿಗರ ಅಜ್ಞಾನದ ದ್ಯೋತಕವಾಗಿದೆ ಎಂದು ಪ್ರಿಯಾಂಕ್‌ ವಾಗ್ದಾಳಿ ನಡೆಸಿದ್ದಾರೆ.

ಬಸವಣ್ಣರನ್ನು ಅನುಸರಿಸುವ ಈ ನಾಡಿನ ಜನ ಬಿಜೆಪಿಗರ ಈ ನಡೆಯನ್ನು ಸಹಿಸಲು ಸಾಧ್ಯವಿಲ್ಲ. ಕೆಲ ದಿನಗಳ ಹಿಂದೆ ನಾಡಿನ ಜನ ವೇದಿಕೆಯಿಂದ ಕೆಳಗಿಳಿಸಿ ಓಡಿಸಿದ್ದರೂ ಬುದ್ದಿ ಕಲಿಯದ ಯತ್ನಾಳ್ ಅವರ ನಾಲಿಗೆಗೆ ಕಡಿವಾಣ ಹಾಕುವ ಶಕ್ತಿ ಕರ್ನಾಟಕದ ಜನರಿಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+