ಹುಟ್ಟುಹಬ್ಬ; ಫೇಸ್‌ಬುಕ್ ಮೂಲಕ ಪ್ರಿಯಾಂಕ್‌ ಖರ್ಗೆ ಮನವಿ ಏನು?

ಬೆಂಗಳೂರು, ನವೆಂಬರ್ 15; ತಮ್ಮ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣಗಳ ಮೂಲಕ ಮನವಿಯೊಂದನ್ನು ಮಾಡಿದ್ದಾರೆ. ಈ ಬಾರಿಯೂ ಕೂಡ ನನ್ನ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.

ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಫೇಸ್‌ಬುಕ್ ಪೋಸ್ಟ್‌ ಹಾಕಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಪಿಯಾಂಕ್ ಖರ್ಗೆ ಹುಟ್ಟುಹಬ್ಬ ನವೆಂಬರ್ 22ರಂದು ಇದೆ.

Minister Priyank Kharge Face Book Post For His Birthday On November 22

ಸಚಿವರ ಪೋಸ್ಟ್

ಎಲ್ಲರಿಗೂ ಆತ್ಮೀಯ ನಮಸ್ಕಾರ,

ನಿಮಗೆಲ್ಲ ತಿಳಿದಿರುವ ಹಾಗೆ, ಹಲವು ವರ್ಷಗಳಿಂದ ನಾನು ನನ್ನ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಈ ಬಾರಿಯೂ ಕೂಡ ನನ್ನ ಹುಟ್ಟುಹಬ್ಬವನ್ನು ಆಚರಿಸದಿರಲು ನಿರ್ಧರಿಸಿದ್ದೇನೆ.

22 ನವೆಂಬರ್ 2023 (ಬುಧವಾರ)ದಂದು ನಾನು ಕಲಬುರ್ಗಿ ಹಾಗೂ ಬೆಂಗಳೂರಿನಲ್ಲಿ ಭೇಟಿಗೆ ಲಭ್ಯ ಇರುವುದಿಲ್ಲ. ಪ್ರತಿವರ್ಷದಂತೆ, ಈ ವರ್ಷವೂ ಸಹ ನಿಮ್ಮ ಸಹಕಾರ, ಪ್ರೀತಿ ಹಾಗೂ ತಾಳ್ಮೆ ನನ್ನೊಂದಿಗೆ ಹೀಗೇ ಇರಲಿ ಎಂದು ಕೇಳಿಕೊಳ್ಳುತ್ತೇನೆ.

ಈಗಾಗಲೇ ಅನೇಕ ಆತ್ಮೀಯರು ಹುಟ್ಟುಹಬ್ಬವನ್ನು ಆಚರಿಸಲು ತಯಾರಿ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ದಯಮಾಡಿ ಇಂತಹ ಆಚರಣೆಗಳಿಗೆ ನಿಮ್ಮ ಶ್ರಮ ಹಾಕಬಾರದು ಎಂದು ಕೇಳಿಕೊಳ್ಳುತ್ತೇನೆ.

ನೀವು ಮಾಡಲೇಬೇಕು ಎಂದು ನಿರ್ಧರಿಸಿದ್ದರೆ, ನಿಮ್ಮ ಪರಿಶ್ರಮ ಬಡ ಜನರಿಗೆ, ಶೋಷಿತರಿಗೆ, ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ರೀತಿ ಇರಲಿ ಎಂದು ನಿಮ್ಮಲ್ಲಿ ಕಳಕಳಿಯಿಂದ ವಿನಂತಿಸಿಕೊಳ್ಳುತ್ತೇನೆ.

ನಿಮ್ಮ ಪ್ರೀತಿ ಹಾಗೂ ಅಭಿಮಾನಕ್ಕೆ ನಾನು ಹಾಗೂ ನಮ್ಮ ಕುಟುಂಬ ಸದಾ ಚಿರಋಣಿಯಾಗಿರಲಿದೆ. ಧನ್ಯವಾದಗಳು.

ಹಬ್ಬದ ದಿನವೂ ಕೆಲಸ; ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ದೀಪಾವಳಿಯ ದಿನ ಸಹ ಕೆಲಸ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ನವೆಂಬರ್ 13ರಂದು ಅವರು ಹಬ್ಬ ಆಚರಣೆ ಮಾಡುವುದು ಬಿಟ್ಟು ಕಛೇರಿಯಲ್ಲಿ ಕುಳಿತು ಬಾಕಿ ಉಳಿದಿದ್ದ ಕಡತಗಳನ್ನು ವಿಲೇವಾರಿ ಮಾಡಿದ್ದಾರೆ. 300 ಕಡತಗಳನ್ನು ವಿಲೇವಾರಿ ಮಾಡಿರುವುದಾಗಿ ಅವರು ಟ್ವೀಟ್ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಶಾಸಕ ಪ್ರಿಯಾಂಕ್ ಖರ್ಗೆ ಕರ್ನಾಟಕದಲ್ಲಿ ಈ ಬಾರಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದಾರೆ. 2016ರಲ್ಲಿಯೂ ಸಿದ್ದರಾಮಯ್ಯ ಸಂಪುಟದಲ್ಲಿ ಅವರು ಐ.ಟಿ-ಬಿ.ಟಿ ಸಚಿವರಾಗಿದ್ದರು.

ನವೆಂಬರ್ 22, 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಪ್ರಿಯಾಂಕ್ ಖರ್ಗೆ ಚಿತ್ತಾಪುರ ಕ್ಷೇತ್ರದಲ್ಲಿ ಮೂರು ಬಾರಿ ಗೆಲ್ಲುವ ಮೂಲಕ ಹ್ಯಾಟ್ರಿಕ್ ಜಯ ದಾಖಲು ಮಾಡಿದ್ದಾರೆ. ವಿದ್ಯಾರ್ಥಿಯಾಗಿದ್ದಾಗಲೇ ಎನ್‌ಎಸ್‌ಯುಐಯಲ್ಲಿ ಗುರುತಿಸಿಕೊಂಡಿದ್ದ ಅವರು, ಬಿಎ ಪದವೀಧರರು.

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ. ಕೆಪಿಸಿಸಿ ಸಂವಹನ, ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರು ಹೌದು. ಕರ್ನಾಟಕದ ಬಿಜೆಪಿ ಸರ್ಕಾರದ ವಿರುದ್ಧ 'ಪೇ ಸಿಎಂ' ಅಭಿಯಾನಕ್ಕೆ ಚಾಲನೆ ನೀಡಿದ್ದು, ಪ್ರಿಯಾಂಕ್ ಖರ್ಗೆ ಅವರು.

2009ರಲ್ಲಿ ನಡೆದ ಚಿತ್ತಾಪುರ ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ಪ್ರಿಯಾಂಕ್ ಖರ್ಗೆ ರಾಜಕೀಯ ಜೀವನ ಆರಂಭಿಸಿದರು. ಆದರೆ ಮೊದಲ ಪ್ರಯತ್ನದಲ್ಲಿ ಸೋಲು ಕಂಡರು. 2013ರ ಚುನಾವಣೆಯಲ್ಲಿ ಗೆದ್ದು, ಮೊದಲ ಬಾರಿಗೆ ಶಾಸಕರಾದರು.

2013ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿತು. 2016ರಲ್ಲಿ ಸಿದ್ದರಾಮಯ್ಯ ಸಂಪುಟ ಪುನರ್‌ ರಚನೆ ಮಾಡಿದಾಗ ಪ್ರಿಯಾಂಕ್ ಖರ್ಗೆ ಐ. ಟಿ. & ಬಿ. ಟಿ ಖಾತೆ ಸಚಿವರಾದರು. ಸಂಪುಟ ಸೇರಿದಾಗ ಅವರ ವಯಸ್ಸು 38 ವರ್ಷ.

2018ರ ಚುನಾವಣೆಯಲ್ಲಿಯೂ ಗೆದ್ದ ಅವರು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ 14 ತಿಂಗಳು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದರು. 2023ರ ಚುನಾವಣೆಯಲ್ಲಿ ಗೆದ್ದ ಬಳಿಕ ಮತ್ತೆ ಸಚಿವರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+