Priyank Kharge: ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು: ಆರಗ ಗೆ ತಿರುಗೇಟು ಕೊಟ್ಟ ಪ್ರಿಯಾಂಕ್ ಖರ್ಗೆ
ಬೆಂಗಳೂರು, ಆಗಸ್ಟ್ 03: ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು ಎಂದು ಮಲ್ಲಿಕಾರ್ಜುನ್ ಖರ್ಗೆ ಅವರ ಮೈ ಬಣ್ಣದ ಕುರಿತು ಬಿಜೆಪಿ ಶಾಸಕ ಅರಗ ಜ್ಞಾನೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ತಿರುಗೇಟು ನೀಡಿದ್ದಾರೆ.
ಹಿರಿಯ ಮುತ್ಸದ್ಧಿ ರಾಜಕಾರಣಿ ಹಾಗೂ ರಾಜ್ಯಸಭೆ ವಿರೋಧಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿರುವ ಅವಹೇಳನಕಾರಿ ಹೇಳಿಕೆಗೆ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಖಡಕ್ ತಿರುಗೇಟು ನೀಡಿದ್ದು, 'ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಪ್ರತಿಭಟನೆ ವೇಳೆ ಖರ್ಗೆ ಅವರ ಬಣ್ಣದ ಬಗ್ಗೆ ವ್ಯಂಗ್ಯವಾಡಿದ್ದ ಜ್ಞಾನೇಂದ್ರ, ಕಲ್ಯಾಣ ಕರ್ನಾಟಕ ಭಾಗದವರು ಸುಟ್ಟು ಕರುಕಲಾಗಿರುತ್ತಾರೆ, ಖರ್ಗೆಯವರನ್ನ ನೋಡಿದರೆ ಗೊತ್ತಾಗುತ್ತದೆ ಎಂದು ವ್ಯಂಗ್ಯವಾಡಿದ್ರು, ಈ ಹೇಳಿಕೆ ವಿರುದ್ದ ಕೆರಳಿ ಕೆಂಡವಾದ ಕಾಂಗ್ರೆಸ್ ನಾಯಕರು ಬಿಜೆಪಿ ಶಾಸಕರ ವಿರುದ್ದ ಕಟು ಮಾತುಗಳಿಂದ ಖಂಡಿಸಿದ್ದರು. ಜೊತೆಗೆ, ಕಾರ್ಯಕರ್ತರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದರು.
ಬಿಜೆಪಿ ಶಾಸಕನಿಗೆ ತಮ್ಮದೇ ಧಾಟಿಯಲ್ಲಿ ತಿರುಗೇಟು ನೀಡಿರುವ ಸಚಿವ ಖರ್ಗೆ, ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆ ಮಾತು ಎಂದು ಹೇಳಿದ್ದಾರೆ. ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ.
ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಲ್ಲಿ ಬಿಟ್ಟಿ ತಿಂದವರ ಚರ್ಮ ಬೆಳ್ಳಗಿರಬಹುದು, ಸ್ವಾಭಿಮಾನದಿಂದ ದುಡಿದು ತಿನ್ನುವವರ ಮೈ ಬಿಸಿಲಲ್ಲಿ ಸುಟ್ಟಿರುತ್ತದೆ. ಮನುಸ್ಮೃತಿ ಯ ವರ್ಣಾಶ್ರಮವನ್ನು ಅಪ್ಪಿ ಒಪ್ಪಿ ಮುದ್ದಾಡುವ ಬಿಜೆಪಿ ದಲಿತರ ರಾಜಕೀಯ ಏಳಿಗೆ ಬಗ್ಗೆ ತೀವ್ರ ಅಸಹನೆ ಇರುವುದು ಇಂತಹ ಮಾತುಗಳಿಂದ ಹೊರಬರುತ್ತವೆ. ಕರ್ನಾಟಕ ಬಿಜೆಪಿಯ ಈ ಅಸಹನೆ ಬಿಜೆಪಿಯನ್ನೇ ಸುಟ್ಟು ಕರುಕಲು ಮಾಡುತ್ತದೆ, ಏಕೆಂದರೆ ಇದು ಮನುಸ್ಮೃತಿ ಯ ಕಾಲವಲ್ಲ, ಬಾಬಾಸಾಹೇಬರ ಸಂವಿಧಾನದ ಕಾಲ' ಎಂದು ಹೇಳಿದ್ದಾರೆ.
,@JnanendraAraga ಅವರೇ,
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 2, 2023
ನೀವು ಆಡಿರುವ ಮಾತು ಬರೀ ನಿಮ್ಮ ಮಾತುಗಳಲ್ಲ, ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ ಬಗೆಗಿನ ಅಸಹನೆಯ ಮಾತು.
ಸುಟ್ಟು ಕರಕಲಾಗಿದ್ದು ನಿಮ್ಮ ಬುದ್ದಿಯೇ ಹೊರತು ಕಲ್ಯಾಣ ಕರ್ನಾಟಕದ ಜನರಲ್ಲ.
ಶತಶತಮಾನಗಳಿಂದ ವರ್ಣಾಶ್ರಮದ ಹೆಸರಲ್ಲಿ ಶೋಷಣೆ ನಡೆಸಿ ಶ್ರಮಜೀವಿಗಳ ಬೆವರಿನಲ್ಲಿ…
ಇನ್ನೂ ಬಿಜೆಪಿ ವಿರುದ್ದ ಪ್ರತ್ಯೇಕ ಟ್ವೀಟ್ ಮಾಡಿದ್ದು, ಮಳೆ ನಿಂತರೂ ಹನಿ ನಿಲ್ಲದು ಎಂಬ ಗಾದೆಯಂತೆ ಬಿಜೆಪಿಯ ನಾಲ್ಕು ವರ್ಷದ ಭ್ರಷ್ಟ ಆಡಳಿತದ ಅವ್ಯವಸ್ಥೆಯು ಫಲ ಈಗಲೂ ಜನರ ಜೀವ ಹಿಂಡುತ್ತಿದೆ. ನಮ್ಮ ಸರ್ಕಾರ ಬಂದು ಎರಡು ತಿಂಗಳಾಗಿದೆ, ಭ್ರಷ್ಟ ಬಿಜೆಪಿ ಮಾಡಿದ್ದ ಅವ್ಯವಸ್ಥೆಯನ್ನು ಸರಿಪಡಿಸುವ ಕೆಲಸ ಜಾರಿಯಲ್ಲಿದೆ.
ಜಲಜೀವನ್ ಮಿಷನ್ ನಲ್ಲಿ ಪ್ರತಿ ಮನೆಗೂ ನೀರು ಕೊಟ್ಟೇ ಬಿಟ್ಟಿದ್ದೇವೆ ಎಂದು ಪ್ರಚಾರ ಮಾಡಿದ್ದ ಬಿಜೆಪಿ ಈಗ ತಮ್ಮ ಸುಳ್ಳನ್ನು ತಾವೇ ಬಯಲು ಮಾಡುತ್ತಿದ್ದಾರೆ. ಈ ಫ್ಯಾಕ್ಟ್ ಚೆಕ್ ಕೆಲಸವನ್ನು ಬಿಜೆಪಿ ಹೀಗೆಯೇ ಮುಂದುವರೆಸಲಿ!ಜಲಜೀವನ್ ಮಿಷನ್ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾಲು 55%, ಕೇಂದ್ರದ ಪಾಲು 45%, ಬಿಜೆಪಿಯ ಭ್ರಷ್ಟಾಚಾರದ ಪಾಲು 40%,ಮೋದಿಯವರಿಗೆ ಕ್ರೆಡಿಟ್ ಮಾತ್ರ 100% ಎಂದು ತಿಳಿಸಿದ್ದಾರೆ.
ಬಿಜೆಪಿ ಅವಧಿಯಲ್ಲಿ ಜಲಜೀವನ್ ಮಿಷನ್ ಎನ್ನುವುದು "ಭ್ರಷ್ಟಾಚಾರದ ಮಿಷನ್" ಆಗಿತ್ತು, ಇದರ ಪರಿಣಾಮವನ್ನೇ ಇಂದಿಗೂ ರಾಜ್ಯದ ಜನತೆ ಎದುರಿಸುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರು ಭ್ರಷ್ಟಾಚಾರದ ಆರೋಪದಲ್ಲಿ ರಾಜೀನಾಮೆ ನೀಡಿದ್ದರು, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 40% ಕಮಿಷನ್ ಗೆ ಗುತ್ತಿಗೆದಾರರೊಬ್ಬರು ಜೀವವನ್ನೇ ಬಿಡಬೇಕಾಯ್ತು. ನನ್ನ ಇಲಾಖೆಗೆ ಇಷ್ಟು ಘಾಡವಾಗಿ ಅಂಟಿರುವ ಕೊಳೆಯನ್ನು ಸ್ವಚ್ಛ ಮಾಡುತ್ತಿದ್ದೇನೆ.
ಮಳೆ ನಿಂತರೂ ಹನಿ ನಿಲ್ಲದು ಎಂಬ ಗಾದೆಯಂತೆ ಬಿಜೆಪಿಯ ನಾಲ್ಕು ವರ್ಷದ ಭ್ರಷ್ಟ ಆಡಳಿತದ ಅವ್ಯವಸ್ಥೆಯು ಫಲ ಈಗಲೂ ಜನರ ಜೀವ ಹಿಂಡುತ್ತಿದೆ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) August 3, 2023
ನಮ್ಮ ಸರ್ಕಾರ ಬಂದು ಎರಡು ತಿಂಗಳಾಗಿದೆ, ಭ್ರಷ್ಟ ಬಿಜೆಪಿ ಮಾಡಿದ್ದ ಅವ್ಯವಸ್ಥೆಯನ್ನು ಸರಿಪಡಿಸುವ ಕೆಲಸ ಜಾರಿಯಲ್ಲಿದೆ.
ಜಲಜೀವನ್ ಮಿಷನ್ ನಲ್ಲಿ ಪ್ರತಿ ಮನೆಗೂ ನೀರು ಕೊಟ್ಟೇ ಬಿಟ್ಟಿದ್ದೇವೆ ಎಂದು… https://t.co/pcUwXjZiKH
ಬಿಜೆಪಿ ಅವಧಿಯಲ್ಲಿ ಪರ ರಾಜ್ಯಗಳತ್ತ ಮುಖ ಮಾಡಿದ್ದ ಉದ್ಯಮಗಳನ್ನು, ಹೂಡಿಕೆಗಳನ್ನು ಕರ್ನಾಟಕದತ್ತ ಕರೆತರುತ್ತಿದ್ದೇವೆ, ಉದ್ಯೋಗ ಸೃಷ್ಟಿಗೆ ಪೂರಕ ವಾತಾವರಣ ನಿರ್ಮಿಸುತ್ತಿದ್ದೇವೆ. ಅಜಾನ್, ಹಲಾಲ್, ಹಿಜಾಬ್ ಎಂಬ ಪ್ರಚೋದನೆಗೆ ಕನ್ನಡಿಗರು ಸಂಪೂರ್ಣ ತಿರಸ್ಕಾರದ ಉಡುಗೊರೆ ಕೊಟ್ಟಿದ್ದಾರೆ, ಬಿಜೆಪಿ ಮುಕ್ತ ದಕ್ಷಿಣ ಭಾರತವಾಗಿದೆ, ಆದರೂ ಬುದ್ದಿ ಕಲಿಯದೆ ಸುಳ್ಳಿನ ಸೌಧ ಕಟ್ಟವುದನ್ನು ಮುಂದುವರೆಸಿದ ಬಿಜೆಪಿಯನ್ನು ದೇಶದ ಜನ ತಿರಸ್ಕರಿಸುವುದು ನಿಶ್ಚಿತ.
ಒಂದು ರಾಷ್ಟ್ರೀಯ ಪಕ್ಷವಾಗಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗದ್ದು, ಬಿಜೆಪಿ ರಾಜಕೀಯ ದಿವಾಳಿತನ.ಮೇಲ್ಮನೆ, ಕೆಳಮನೆಗಳಲ್ಲಿ ವಿರೋಧ ಪಕ್ಷದ ನಾಯಕನ ಕುರ್ಚಿ ಖಾಲಿ ಇದೆ, ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿ ಮೊದಲು ತಮ್ಮ ರಾಜಕೀಯ ದಾರಿದ್ರ್ಯವನ್ನು ನಿವಾರಣೆ ಮಾಡಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications