Video: ನಾಗರಹೊಳೆಯಲ್ಲಿ ಕಾಡಾನೆ ಮೇಲೆ ಕಲ್ಲು ತೂರಾಟ: ಬೈಕ್ ಸವಾರರ ಬಂಧನಕ್ಕೆ ರಾಮಲಿಂಗಾರೆಡ್ಡಿ ಖಡಕ್ ಸೂಚನೆ
ಮೈಸೂರು: ಮೈಸೂರು ಮತ್ತು ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಹರಡಿರುವ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹೆದ್ದಾರಿಯಲ್ಲಿ ಸಂಚರಿಸುವಾಗ ವನ್ಯಮೃಗಗಳಿಗೆ ತೊಂದರೆ ಆಗದಂತೆ ಸಂಚರಿಸುವ ನಿಯಮ ಇದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಈ ಮಾರ್ಗದಲ್ಲಿ ಸಂಚಾರಕ್ಕೆ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಸಮಯ ನಿರ್ಬಂಧ ಸೇರಿದಂತೆ ಹಲವು ನಿಯಮಗಳನ್ನು ಪಾಲಿಸಲೇಬೇಕಿದೆ. ಆದರೆ ಇದೇ ರಸ್ತೆ ಬದಿಯಲ್ಲಿ ನಿಂತಿದ್ದ ಕಾಡಾನೆಗೆ ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರು ವ್ಯಕ್ತಿಗಳು ಕಲ್ಲು ತೂರಿ ಕಿರುಕುಳ ನೀಡಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾಗಿ ತಿಳಿಸಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ಕೊಟ್ಟಿದ್ದಾರೆ.

ಘಟನೆ ಖಂಡಿಸಿದ ಸಚಿವ ರಾಮಲಿಂಗಾ ರೆಡ್ಡಿ
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ವೀಡಿಯೊವನ್ನು ನಾನು ವೈಯಕ್ತಿಕವಾಗಿ ವೀಕ್ಷಿಸಿದ್ದೇನೆ. ಸದರಿ ವೀಡಿಯೊದಲ್ಲಿ ನಾಗರಹೊಳೆ ಅರಣ್ಯ ವ್ಯಾಪ್ತಿಯ ರಸ್ತೆ ಬದಿಯಲ್ಲಿದ್ದ ಆನೆಯ ಮೇಲೆ KA 09 HY 0257 ನೋಂದಣಿ ಸಂಖ್ಯೆಯ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಉದ್ದೇಶಪೂರ್ವಕವಾಗಿ ಕಲ್ಲುಗಳನ್ನು ತೂರಿ, ವನ್ಯಜೀವಿಗಳ ಮೇಲೆ ಕ್ರೌರ್ಯ ಎಸಗಿರುವುದು ಅತ್ಯಂತ ಕಳವಳಕಾರಿ ಮತ್ತು ಖಂಡನೀಯ ವಿಷಯವಾಗಿದೆ.
ವನ್ಯಜೀವಿಗಳ ಸಂರಕ್ಷಣೆ ಮತ್ತು ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಇಂತಹ ಬೇಜವಾಬ್ದಾರಿ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಆದ್ದರಿಂದ, ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಕೂಡಲೇ ವೀಡಿಯೊದಲ್ಲಿರುವ ದ್ವಿಚಕ್ರ ವಾಹನವನ್ನು (KA 09 HY 0257) ಹಾಗೂ ಕೃತ್ಯವೆಸಗಿದ ವ್ಯಕ್ತಿಗಳನ್ನು ಪತ್ತೆ ಹಚ್ಚಬೇಕು. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ (Wildlife Protection Act) ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಅವರು ನಿರ್ದೇಶಿಸಿದ್ದಾರೆ.
ಆದೇಶ ಪಾಲನೆ ವರದಿ ಸಲ್ಲಿಕೆಗೆ ಸಚಿವರ ಸೂಚನೆ
ಈ ಕುರಿತು ಕೈಗೊಂಡ ಕ್ರಮದ ಬಗ್ಗೆ ಕೂಡಲೇ ವರದಿ ಸಲ್ಲಿಸುವಂತೆ ಅರಣ್ಯ ಪಡೆ ಮುಖ್ಯಸ್ಥರಾದ ಬಿಪಿ ರವಿ ಅವರಿಗೆ (HoFF) ಸೂಚಿಸಿದ್ದಾಗಿ ಅವರು ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಸಚಿವರ ಪೋಸ್ಟ್ ಬೇರೆ ಬೇರೆ ಪ್ರಕರಣಗಳನ್ನು ಉಲ್ಲೇಖಿಸಿ ಕಾಮೆಂಟ್ ಮಾಡಿದ್ದಾರೆ. ವೈರಲ್ ವಿಡಿಯೋಗೆ ಸಂಬಂಧಿಸಿದಂತೆ ಸಚಿವರ ತ್ವರಿತ ಸ್ಪಂದನೆ, ಕ್ರಮದ ನಿರ್ಧಾರಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಒಂದು ವೀಡಿಯೊವನ್ನು ನಾನು ವೈಯಕ್ತಿಕವಾಗಿ ವೀಕ್ಷಿಸಿದ್ದೇನೆ. ಸದರಿ ವೀಡಿಯೊದಲ್ಲಿ ನಾಗರಹೊಳೆ ಅರಣ್ಯ ವ್ಯಾಪ್ತಿಯ ರಸ್ತೆ ಬದಿಯಲ್ಲಿದ್ದ ಆನೆಯ ಮೇಲೆ KA 09 HY 0257 ನೋಂದಣಿ ಸಂಖ್ಯೆಯ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಉದ್ದೇಶಪೂರ್ವಕವಾಗಿ ಕಲ್ಲುಗಳನ್ನು ತೂರಿ, ವನ್ಯಜೀವಿಗಳ ಮೇಲೆ ಕ್ರೌರ್ಯ ಎಸಗಿರುವುದು ಅತ್ಯಂತ ಕಳವಳಕಾರಿ ಮತ್ತು ಖಂಡನೀಯ ವಿಷಯವಾಗಿದೆ.ವನ್ಯಜೀವಿಗಳ ಸಂರಕ್ಷಣೆ ಮತ್ತು ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಇಂತಹ ಬೇಜವಾಬ್ದಾರಿ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ.ಆದುದರಿಂದ, ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ಕೂಡಲೇ ವೀಡಿಯೊದಲ್ಲಿರುವ ದ್ವಿಚಕ್ರ ವಾಹನವನ್ನು (KA 09 HY 0257) ಹಾಗೂ ಕೃತ್ಯವೆಸಗಿದ ವ್ಯಕ್ತಿಗಳನ್ನು ಪತ್ತೆ ಹಚ್ಚಿ, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ (Wildlife Protection Act) ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಈ ಕುರಿತು ಕೈಗೊಂಡ ಕ್ರಮದ ಬಗ್ಗೆ ಕೂಡಲೇ ವರದಿ ಸಲ್ಲಿಸುವಂತೆ ಅರಣ್ಯ ಪಡೆ ಮುಖ್ಯಸ್ಥರಾದ ಶ್ರೀ ಬಿಪಿ ರವಿ ಅವರಿಗೆ (HoFF) ನಿರ್ದೇಶನ ನೀಡಿದ್ದೇನೆ.#RamalingaReddy #Nagarahole #WildlifeProtection #KarnatakaForest #SaveWildlife #Elephant @aranya_kfd
— Ramalinga Reddy (@RLR_BTM) November 18, 2026



Click it and Unblock the Notifications
