ಬೆಳಗಾವಿಗೆ ಕನ್ನಡಪರ ಸಂಘಟನೆಗಳು ಬರಬಾರದು ಎಂದಿದ್ಯಾಕೆ ಸಚಿವ ಸತೀಶ್ ಜಾರಕಿಹೊಳಿ ?
ಕನ್ನಡಪರ ಸಂಘಟನೆಗಳನ್ನು ಕೆಣಕುವಂತಹ ಹೇಳಿಕೆಯನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಕೊಟ್ಟಿದ್ದಾರೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಭಾಗದಲ್ಲಿ ಭಾಷಾ ವಿವಾದದಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮಹಾರಾಷ್ಟ್ರದ ಎಂಇಎಸ್ ಪುಂಡರು ಕರ್ನಾಟಕದ ಬಸ್‌ಗಳಿಗೆ ಮಸಿ ಬಳಿಯುವುದು, ಬಸ್ ಡ್ರೈವರ್ ಹಾಗೂ ಕಂಡಕ್ಟರ್ ಮುಖಕ್ಕೆ ಕೇಸರಿ ಬಣ್ಣ ಬಳಿಯುವುದು ಸಹ ನಡೆಯುತ್ತಿದ್ದು. ಈ ಬೆಳವಣಿಗೆಗೆ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರ ನಡುವೆ ಕನ್ನಡಪರ ಸಂಘಟನೆಗಳನ್ನು ಸತೀಶ್ ಜಾರಕಿಹೊಳಿ ಅವರು ಕೆಣಕಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ನಾರಾಯಣಗೌಡ ಹಾಗೂ ಕಾರ್ಯಕರ್ತರು ಬೆಳಗಾವಿಗೆ ಬರುತ್ತೇವೆ ಎಂದು ಹೇಳಿರುವ ಬೆನ್ನಲ್ಲೇ ಸಚಿವರು ಹೇಳಿಕೆಯೊಂದನ್ನು ಕೊಟ್ಟಿದ್ದಾರೆ.
ಬೆಳಗಾವಿಯಲ್ಲಿ ಕರ್ನಾಟಕದ ಸರ್ಕಾರಿ ಬಸ್ ಡ್ರೈವರ್ & ಕಂಡಕ್ಟರ್‌ನ ಮೇಲೆ ಮರಾಠಿ ಪುಂಡರು ದಾಳಿ ಮಾಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕದ ಕೆಲವು ರಾಜಕಾರಣಿಗಳು ಮಹಾರಾಷ್ಟ್ರದವರ ಪರವಾಗಿ ಮಾತನಾಡುತ್ತಿದ್ದಾರೆ ಎನ್ನುವ ಆರೋಪವೂ ಇದೆ. ಇದೀಗ ಈ ವಿಚಾರವಾಗಿ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ ಅವರು, ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆದಿದೆ. ಈ ವಿಚಾರವಾಗಿ ನಾನು ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆದಿದ್ದೇನೆ.ಇಬ್ಬರ ವೈಯಕ್ತಿಕ ಜಗಳ, ಭಾಷೆಗೆ ಇದು ವರ್ಗ ಆಗಬಾರದು ಅನ್ನೋದು ನಮ್ಮ ಮನವಿ ಅಂತ ಹೇಳಿದ್ದಾರೆ.

ಮುಂದುವರಿದು ಈ ಪ್ರಕರಣದಲ್ಲಿ ಕನ್ನಡ, ಮರಾಠಿ ಸಂಘಟನೆ ಎಂದು ಬಿಂಬಿಸಬಾರದು.ಅಂತಿಮವಾಗಿ ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಪೆಟ್ಟು ಬೀಳಲಿದೆ. ಈ ಸಂಬಂಧ ಪೊಲೀಸ್ ಅವರು ತನಿಖೆ ಮಾಡುತ್ತಿದ್ದಾರೆ. ಬಸ್ ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್ ದಾಖಲು ಆಗಬಾರದಿತ್ತು. ಪೊಲೀಸ್ ರಿಂದ ತಪ್ಪಾಗಿದೆ. ಇದನ್ನು ಸರಿ ಮಾಡಲು ಮುಂದೆ ಅವಕಾಶ ಇದೆ. ಎರಡು ರಾಜ್ಯಗಳ ಬಸ್ ಸಂಚಾರ ಸ್ಥಗಿತದಿಂದ ನಷ್ಟ ಆಗಲಿದೆ. ಸರ್ಕಾರಕ್ಕೂ ನಷ್ಟ ಆಗಲಿದೆ ಜನರಿಗೂ ತೊಂದರೆ ಆಗಲಿದೆ ಎಂದು ಅವರು ಹೇಳಿದ್ದಾರೆ.
ಪೊಲೀಸರ ಕೆಲಸ ನಾವು ಮಾಡಲು ಆಗಲ್ಲ. ಅವರಿಗೆ ಕೆಲಸ ಮಾಡಲು ಬಿಡಬೇಕು. ಸರ್ಕಾರಿ ಬಸ್‌ಗೆ ಮಸಿ ಬಳಿಯುತ್ತಿರುವ ವಿಚಾರದ ಬಗ್ಗೆ ಮಾತನಾಡಿರುವ ಅವರು, ಇವರು ಮಾಡ್ತಾರೆ ಅಂತ ಅವರು ಮಾಡ್ತಾರೆ. ಶಿವಸೇನೆಯು ಬೆಳಗಾವಿ ಮಹಾರಾಷ್ಟ್ರ ಸೇರಬೇಕು ಎನ್ನುವ ನಿಲುವು ಹೊಂದಿದೆ. ಬೆಳಗಾವಿ- ಕೊಲ್ಹಾಪುರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ಆಗಲಿದೆ ಎಂದು ಅವರು ಹೇಳಿದ್ದಾರೆ.
ಯಾವುದೇ ಸಂಘಟನೆ ಬಂದು ಏನು ಮಾಡುತ್ತಾರೆ ?
ಇನ್ನು ಬೆಳಗಾವಿಗೆ ಕರ್ನಾಟಕ ರಕ್ಷಣಾ ವೇದಿಕೆ ಬರಲಿದೆ ಎನ್ನುವ ವಿಚಾರದ ಬಗ್ಗೆಯೂ ಸತೀಶ್ ಜಾರಕಿಹೊಳಿ ಅವರು ಮಾತನಾಡಿದ್ದಾರೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಮಂಗಳವಾರ ಕರವೇ ಬೆಳಗಾವಿ ಚಲೋ ಪ್ರತಿಭಟನೆ ವಿಚಾರವಾಗಿ ಮಾತನಾಡಿರುವ ಅವರು, ಯಾವುದೇ ಸಂಘಟನೆ ಬಂದು ಏನೂ ಮಾಡ್ತಾರೆ. ಬೆಳಗಾವಿ ಚಲೋ ಕೈ ಬಿಡಿ ಎಂದು ನಮ್ಮ ಮನವಿ. ಯಾರು ಕೂಡ ಬೆಳಗಾವಿಗೆ ಬರಬರಾದು ಎಂದು ನಮ್ಮ ಮನವಿ. ಎರಡು ಕಡೆ ಕೇಸ್ ಆಗಿದೆ ಪೊಲೀಸರು ತನಿಖೆ ಮಾಡ್ತಾರೆ ಎಂದು ಅವರು ಹೇಳಿದ್ದಾರೆ. ಇದು ಕನ್ನಡಪರ ಸಂಘಟನೆಗಳ ಅಸಮಾಧಾನಕ್ಕೆ ಕಾರಣವಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications