ಸಚಿವ ಶಿವಳ್ಳಿ ನಿಧನ: ಧಾರವಾಡದಲ್ಲಿ ಮಾತ್ರ ರಜೆ ಘೋಷಣೆ
ಬೆಂಗಳೂರು, ಮಾರ್ಚ್ 22: ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರು ಇಂದು ನಿಧನ ಹೊಂದಿರುವುದಕ್ಕೆ ರಾಜ್ಯ ಸರ್ಕಾರವು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೂರು ದಿನಗಳ ಶೋಕಾಚರಣೆ ಘೋಷಿಸಿದೆ.
ಆದರೆ ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿರುವ ಕಾರಣ ರಾಜ್ಯದಲ್ಲಿ ಸಾರ್ವತ್ರಿಕ ರಜೆಯನ್ನು ಘೋಷಿಸಿಲ್ಲ ಬದಲಾಗಿ ಧಾರವಾಡದಲ್ಲಿ ಮಾತ್ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಿಬ್ಬಂದಿ, ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಇನ್ನುಳಿದ ಶಾಲಾ-ಕಾಲೇಜು, ಸರ್ಕಾರ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದಾದ್ಯಂತ ಮಾರ್ಚ್ 22, 23, 24 ರಂದು ಶೋಕಾಚರಣೆ ಘೋಷಿಸಲಾಗಿದ್ದು, ಯಾವುದೇ ಮನೊರಂಜನೆ ಕಾರ್ಯಕ್ರಮಗಳು ಇರುವುದಿಲ್ಲ. ಹಾಗೂ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು. ಜೊತೆಗೆ ಶಿವಳ್ಳಿ ಅವರ ಅಂತಿಮಸಂಸ್ಕಾರವನ್ನು ಸಕಲ ಸರ್ಕಾರಿ ಗೌರವದೊಂದಿಗೆ ಮಾಡಲು ಸರ್ಕಾರ ಆದೇಶಿಸಿದೆ.

ಪೌರಾಡಳಿತ ಸಚಿವರಾಗಿದ್ದ ಸಿ.ಎಸ್.ಶಿವಳ್ಳಿ ಅವರು ಇಂದು ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ಹುಬ್ಬಳ್ಳಿಯಲ್ಲಿ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಅವರು, ಕುಮಾರಸ್ವಾಮಿ ಸಂಪುಟದಲ್ಲಿ ಮೊದಲ ಬಾರಿ ಸಚಿವರಾಗಿದ್ದರು.












Click it and Unblock the Notifications