ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಸತಿ ಯೋಜನೆ ಫಲಾನುಭವಿಗಳಿಗೆ ಸಾಲ ಮಂಜೂರಾತಿ ಮಾಡುವಂತೆ ಬ್ಯಾಂಕ್ ಗಳಿಗೆ ಸೂಚನೆ: ವಿ ಸೋಮಣ್ಣ

|
Google Oneindia Kannada News

ಬೆಂಗಳೂರು,ಡಿಸೆಂಬರ್ 15: ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ ಎ.ಹೆಚ್.ಬಿ ಘಟಕದಡಿ ನಿರ್ಮಿಸಲಾಗುತ್ತಿರುವ ಮನೆಗಳಿಗೆ ಹಾಗೂ ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳಿಗೆ ಜನವರಿ 15 ರೊಳಗೆ ಸಾಲ ಮಂಜೂರಾತಿ ಮಾಡುವಂತೆ ವಿವಿಧ ಬ್ಯಾಂಕುಗಳ ಮುಖ್ಯಾಧಿಕಾರಿಗಳಿಗೆ ಸಚಿವ ವಿ. ಸೋಮಣ್ಣ ಸೂಚಿಸಿದರು.

ಬುಧವಾರ ವಿಧಾನಸೌಧದಲ್ಲಿ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿ.ಸೋಮಣ್ಣ ರವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳ ವಂತಿಕೆಗೆ ಬ್ಯಾಂಕುಗಳಿಂದ ಸಾಲ ಸೌಲಭ್ಯ ಕಲ್ಪಿಸುವ ಬಗ್ಗೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಿರ್ಮಿಸುವ ಪಿ.ಎಂ.ಎ.ವೈ, ಎ.ಹೆಚ್.ಪಿ ಮನೆಗಳಿಗೆ ನಗರ ಸ್ಥಳೀಯ ಸಂಸ್ಥೆಗಳಿಂದ ಅನುದಾನ ಬಿಡುಗಡೆ ಮಾಡುವ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯ್ತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ವಿ.ಸೋಮಣ್ಣ, ಸಾಲ ಮಂಜೂರಾತಿ ವಿಳಂಬ ವಿಚಾರ ಕುರಿತು ಬ್ಯಾಂಕ್ ಗಳಿಗಿರುವ ಸಮಸ್ಯೆಯನ್ನು ಆಲಿಸಿದ ಸಚಿವರು ಶೀಘ್ರದಲ್ಲಿ ಲೋನ್ ವಿತರಣೆ ಮಾಡುವಂತೆ ಸೂಚನೆ ನೀಡಿದರು. ಬಡವರು ಮತ್ತು ಮಧ್ಯಮವರ್ಗದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮನೆಗಳನ್ನು ನಿರ್ಮಿಸಲಾಗಿದ್ದು ಫಲಾನುಭವಿಗಳಿಗಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಬದಿಗಿಟ್ಟು ಫ್ಲ್ಯಾಟ್ ಹಂಚಿಕೆ ಮಾಡಿರುವ ಆಧಾರದ ಮೇಲೆ ಸ್ಪೆಷಲ್ ಪ್ಲ್ಯಾನ್ ಅಡಿಯಲ್ಲಿ ಸಾಲ ಮಂಜೂರಾತಿ ಮಾಡುವಂತೆ ವಿವಿಧ ಬ್ಯಾಂಕ್ ಗಳ ಮುಖ್ಯಸ್ಥರಿಗೆ ಸೂಚಿಸಿದರು.

minister somanna instructs banks to grant loans before jan 15

ಜನವರಿ 15 ರೊಳಗೆ ಒಂದು ಲಕ್ಷ ಮನೆಗಳ ಫಲಾನುಭವಿಗಳಿಗೆ ಫಲಾನುಭವಿ ವಂತಿಕೆ ಆಧಾರದ ಮೇಲೆ ಸಾಲ ಮಂಜೂರಾತಿ ಮಾಡುವಂತೆ ಕೆನರಾ ಲೀಡ್ ಬ್ಯಾಂಕ್, ಎಸ್ ಎಲ್ ಬಿಸಿ, ಎಸ್ ಬಿಐ, ಬ್ಯಾಂಕ್ ಆಫ್ ಬರೋಡ, ಐಡಿಬಿಐ ಸೇರಿದಂತೆ ವಿವಿಧ ಬ್ಯಾಂಕ್ ಗಳ ಮುಖ್ಯಾಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 'ಸೂರಿಲ್ಲದವರಿಗೆ ಸೂರು' ಎಂಬ ಧ್ಯೇಯದಡಿ 2016-17 ಮತ್ತು 2017-2018 ರಲ್ಲಿ 'ಮುಖ್ಯಮಂತ್ರಿಗಳ ಒಂದು ಲಕ್ಷ ಬಹುಮಹಡಿ ಬೆಂಗಳೂರು ವಸತಿ ಯೋಜನೆ'ಗೆ ಕೇಂದ್ರ ಸರ್ಕಾರವು ಮೊದಲನೇ ಕಂತಿನ ರೂ.600 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಕಂದಾಯ ಇಲಾಖೆಯಿಂದ 553 ಎಕರೆ ಜಮೀನನ್ನು ನಿಗಮಕ್ಕೆ ಹಸ್ತಾಂತರಿಸಿಕೊಳ್ಳಲಾಗಿದೆ.

minister somanna instructs banks to grant loans before jan 15

ಬೆಂಗಳೂರಿನಲ್ಲಿ ಸುಮಾರು 10 ಕಿ.ಮೀ ದೂರದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಮೊದಲನೇ ಹಂತದಲ್ಲಿ ಈಗಾಗಲೇ 2,000 ಮನೆಗಳು ಪೂರ್ಣಗೊಂಡಿದ್ದು 10,000 ಮನೆಗಳು ಪೂರ್ಣಗೊಳ್ಳುವ ಹಂತದಲ್ಲಿವೆ. 2023 ಮಾರ್ಚ್ ತಿಂಗಳೊಳಗೆ 25,000 ಮನೆಗಳನ್ನು ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ.

ಸುಸಜ್ಜಿತ ಮನೆಗಳನ್ನು ನಿರ್ಮಿಸಲಾಗುತ್ತಿದ್ದು ಮಧ್ಯಮವರ್ಗದ ಕುಟುಂಬವೊಂದು ವಾಸ ಮಾಡಲು ಅನುಕೂಲಕರವಾದ ವಾತಾವರಣ ಕಲ್ಪಿಸಲಾಗಿದೆ. ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾಂಪೌಂಡ್, ಒಳರಸ್ತೆ, ಕುಡಿಯುವ ನೀರು, ಬೀದಿ ದೀಪ ಹಾಗೂ ಇತರೆ ವ್ಯವಸ್ಥಿತವಾದ ಸೌಲಭ್ಯಗಳನ್ನು ಒದಗಿಸಲಾಗಿದೆ. ಎಲ್ಲಾ ಮನೆಗಳಿಗೂ ಕಾವೇರಿ ನೀರು ಅಥವಾ ಬೋರ್ ವೆಲ್ ವ್ಯವಸ್ಥೆಯನ್ನು ಕಲ್ಪಿಸಿ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗಿದೆ.

ವಸತಿ ಇಲಾಖೆ ನಿರ್ಮಿಸುತ್ತಿರುವ ಮನೆಗಳನ್ನು ಬಡವರು, ಕೂಲಿ ಕಾರ್ಮಿಕರು, ಆಟೋ ಚಾಲಕರು, ಗಾರ್ಮೆಂಟ್ಸ್ ನೌಕರರು, ಬೀಡಿ ಕಟ್ಟುವವರು, ಬೀದಿ ಬದಿ ವ್ಯಾಪಾರಿಗಳು ಸಣ್ಣ ಸಣ್ಣ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರು ಹಾಗೂ 3 ಲಕ್ಷ ಆದಾಯ ಇರುವವರು ಸೇರಿ ಅರ್ಹ ಬಡವರಿಗೆ ಮನೆಗಳನ್ನು ನೀಡಲಾಗುತ್ತಿದೆ. ಸಾಮಾನ್ಯ ವರ್ಗದ ಜನರು ರೂ.6.50 ಲಕ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು 6 ಲಕ್ಷ ರೂ. ಪಾವತಿಸಬೇಕಾಗಿರುತ್ತದೆ. ಆದ್ದರಿಂದ ಫ್ಲ್ಯಾಟ್ ಹಂಚಿಕೆ ಮಾಡಿರುವ ಆಧಾರದ ಮೇಲೆ ಸ್ಪೆಷಲ್ ಪ್ಲ್ಯಾನ್ ಅಡಿಯಲ್ಲಿ ಫಲಾನುಭವಿಗಳಿಗೆ ಸಾಲ
ಮಂಜೂರಾತಿ ಮಾಡುವಂತೆ ಬ್ಯಾಂಕ್ ಮುಖ್ಯಸ್ಥರಿಗೆ ಸಚಿವರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿಗಳು, ವಸತಿ ಇಲಾಖೆ, ಎಸ್ ಎಲ್ ಬಿಸಿ ಮುಖ್ಯಸ್ಥರಾದ ಮುರುಳಿಕೃಷ್ಣ, ಬೆಂಗಳೂರು ನಗರ ಜಿಲ್ಲೆಯ ರಾಜೀವ್ ಗಾಂಧಿ ವಸತಿ ಮಂಡಳಿಯ ವ್ಯವಸ್ಥಾಪಕರಾದ ಕವಿತಾ ಮನ್ನಿಕೇರಿ, ನಿಗಮದ ಮುಖ್ಯ ಅಭಿಯಂತರರಾದ ಸಣ್ಣ ಚಿತ್ತಯ್ಯ, ಸುಪರಿಟೆಂಡೆಂಟ್ ಇಂಜಿನಿಯರ್ ಮಾಲತೇಶ್, ಕೊಳಗೇರಿ ಅಭಿವೃದ್ಧಿ ನಿಗಮದ ಆಯುಕ್ತರು ಹಾಗೂ ಅಧಿಕಾರಿಗಳು, ವಸತಿ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ವಿವಿಧ ಬ್ಯಾಂಕ್ ಗಳ ಜನರಲ್ ಮ್ಯಾನೇಜರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

English summary
Minister somanna instructs banks to grant loans before jan 15,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X