ಸಚಿವ ಡಾ. ಕೆ. ಸುಧಾಕರ್ ತಂದೆಗೆ ಕೋವಿಡ್ - 19 ಸೋಂಕು

ಬೆಂಗಳೂರು, ಜೂನ್ 22 : ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಂದೆಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಕುಟುಂಬದ ಇತರ ಸದಸ್ಯರ ವರದಿಗಾಗಿ ಕಾಯಲಾಗುತ್ತಿದೆ.

Recommended Video

      Karnataka Lockdown? ಲಾಕ್ ಡೌನ್ ಎದುರಿಸಲು ಕರ್ನಾಟಕ ರಾಜ್ಯ ಎಲ್ಲಾ ರೀತಿಯಲ್ಲೂ ರೆಡಿ | Oneindia Kannada

      ಸೋಮವಾರ ಸಂಜೆ ಕರ್ನಾಟಕದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮಾಡಿದ್ದಾರೆ. "ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ" ಎಂದು ಹೇಳಿದ್ದಾರೆ.

      "ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ" ಎಂದು ಸಚಿವರು ಟ್ವೀಟ್ ಮಾಡಿದ್ದಾರೆ.

      ಡಾ. ಕೆ. ಸುಧಾಕರ್ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಸೋಮವಾರ ಖಚಿತವಾಗಿತ್ತು. ಬಳಿಕ ಸಚಿವರು ಸಹ ಮುಖ್ಯಮಂತ್ರಿಗಳು ಕರೆದ ಸಭೆಗೆ ಹಾಜರಾಗದೇ ಹೋಂ ಕ್ವಾರಂಟೈನ್‌ನಲ್ಲಿದ್ದರು.

      ಸಚಿವರು ಮಾಡಿರುವ ಟ್ವೀಟ್

      ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ "ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ" ಎಂದು ಟ್ವೀಟ್ ಮಾಡಿದ್ದಾರೆ.

      ಸಚಿವರು ಮಾಹಿತಿ ನೀಡಿದ್ದರು

      ಸೋಮವಾರ ಮಧ್ಯಾಹ್ನ ಟ್ವೀಟ್ ಮಾಡಿದ್ದ ಸಚಿವರು, "ಜ್ವರ, ಕೆಮ್ಮು ಸಮಸ್ಯೆ ಕಂಡುಬಂದ ಹಿನ್ನಲೆಯಲ್ಲಿ 82 ವರ್ಷದ ನನ್ನ ಪೂಜ್ಯ ತಂದೆಯವರು ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಪರೀಕ್ಷೆಗೂ ಒಳಗಾಗಿದ್ದಾರೆ. ವರದಿಯ ಫಲಿತಾಂಶವನ್ನು ಕಾಯುತ್ತಿದ್ದೇವೆ" ಎಂದು ಹೇಳಿದ್ದರು.

      ಸಭೆಗೆ ಗೈರಾಗಿದ್ದ ಸಚಿವರು

      ಸಭೆಗೆ ಗೈರಾಗಿದ್ದ ಸಚಿವರು

      ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚಾಗುತ್ತಿರುವುದರಿಂದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತುರ್ತು ಸಭೆ ಕರೆದಿದ್ದರು. ಆದರೆ, ಸಚಿವರು ಸಭೆಗೆ ಗೈರಾಗಿದ್ದರು, ಅವರು ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದರು.

      ಅಪ್ಪನ ಜೊತೆಗಿನ ಫೋಟೋ

      ಅಪ್ಪನ ಜೊತೆಗಿನ ಫೋಟೋ

      ಡಾ. ಕೆ. ಸುಧಾಕರ್ ಅಪ್ಪನ ಜೊತೆಗಿರುವ ಫೋಟೋವನ್ನು ಭಾನುವಾರ ತಮ್ಮ ಫೇಸ್‌ ಬುಕ್‌ ಪೇಜ್‌ನಲ್ಲಿ ಶೇರ್ ಮಾಡಿದ್ದರು, ಫಾದರ್ಸ್ ಡೇ ಶುಭಾಶಯ ತಿಳಿಸಿದ್ದರು.

      ಜೂನ್ 10ರಂದು ತಂದೆಯ ಹುಟ್ಟು ಹಬ್ಬಕ್ಕೂ ಕೂಡ ಅವರು ಫೇಸ್ ಬುಕ್‌ನಲ್ಲಿ ಸ್ಟೇಟಸ್ ಹಾಕಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ನಾವು ಸಹ ಹಾರೈಸೋಣ

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+