ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ: ಸುಧಾಕರ್
ಬೆಂಗಳೂರು, ಜುಲೈ 23: ಕೊವಿಡ್ 19 ಚಿಕಿತ್ಸೆಗೆ ಬೇಕಾದ ಸಾಧನ, ಉಪಕರಣ, ಸಾಮಾಗ್ರಿಗಳ ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಆದರೆ ಎಲ್ಲಾ ಆರೋಪಗಳು ಸುಳ್ಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅಲ್ಲಗೆಳೆದಿದ್ದಾರೆ.
Recommended Video
ಸರ್ಕಾರ ಎಲ್ಲಾ ಇಲಾಖೆ ಸೇರಿ ಒಟ್ಟು ₹4167 ಕೋಟಿ ರು ಗಳನ್ನು ಮಾರ್ಚ್ ತಿಂಗಳಿನಿಂದ ಇಲ್ಲಿ ತನಕ ಖರ್ಚು ಮಾಡಲಾಗಿದೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ಅವರು ಮಾಧ್ಯಮ ಗೋಷ್ಠಿಯಲ್ಲಿ ₹324 ಕೋಟಿ ಎಂದಿದ್ದಾರೆ. ಸರ್ಕಾರ ಯಾಕೆ ಸುಳ್ಳು ಹೇಳುತ್ತಿದೆ ? ಕೊವಿಡ್ 19 ಸಂಬಂಧಿಸಿದ ಖರೀದಿಯಲ್ಲಿ ಸರ್ಕಾರ 2000 ಕೋಟಿ ರು ನುಂಗಿ ಹಾಕಿದೆ ಎಂದು ಸಿದ್ದರಾಮಯ್ಯ ಅವರು ಲೆಕ್ಕ ಕೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಸುಧಾಕರ್, ಕೊರೊನಾ ಮಹಾಮಾರಿಯ ಸಂಕಷ್ಟದಲ್ಲಿ ಸತ್ಯಾಂಶವಿಲ್ಲದ ದಾಖಲೆಗಳ ಮೂಲಕ ರಾಜ್ಯದ ಜನರ ದಿಕ್ಕು ತಪ್ಪಿಸುವ ನಿಮ್ಮ ಆಧಾರ ರಹಿತ ಆರೋಪಗಳನ್ನು ರಾಜ್ಯದ ಜನ ನಂಬುವುದಿಲ್ಲ. ಜನರಿಗೆ ಸತ್ಯಯಾವುದು ಸುಳ್ಳು ಯಾವುದು ಗೊತ್ತಿದೆ. ಯಾರೂ ಬೇಕಾದರೂ ಲೆಕ್ಕ ಕೇಳಿದರೂ ನಮ್ಮ ಬಳಿ ಸರಿಯಾದ ದಾಖಲೆಗಳಿವೆ ಎಂದಿದ್ದಾರೆ.

ವೆಂಟಿಲೇಟರ್ ಗೆ 4 ಲಕ್ಷ ರೂಪಾಯಿ ನೀಡಲಾಗಿದೆ.
ಕೇಂದ್ರ ಸರ್ಕಾರವು ಒಂದೊಂದು ವೆಂಟಿಲೇಟರ್ ಗೆ 4 ಲಕ್ಷ ರೂಪಾಯಿ ನೀಡಿ ಖರೀದಿಸಿದೆ. ತಮಿಳುನಾಡಿನಲ್ಲಿ ಅಲ್ಲಿನ ಸರ್ಕಾರವು 100 ವೆಂಟಿಲೇಟರ್ ಗಳನ್ನು ಖರೀದಿಸಿದ್ದು, ಒಂದು ವೆಂಟಿಲೇಟರ್ ಗೆ 4.78 ಲಕ್ಷ ರೂಪಾಯಿ ನೀಡಿದ್ದಾರೆ. ಕರ್ನಾಟಕದಲ್ಲಿ ಮಾರ್ಚ್.22ರಂದು ಒಂದು ವೆಂಟಿಲೇಟರ್ ಗೆ 5.60ಲಕ್ಷ ನೀಡಿದ್ದಾರೆ. ಎರಡನೇ ಬಾರಿ ಒಂದು ವೆಂಟಿಲೇಟರ್ ತಲಾ 12.36 ಲಕ್ಷ ನೀಡಿದ್ದಾರೆ. ಮೂರನೇ ಬಾರಿ 18.23 ಲಕ್ಷ ರೂಪಾಯಿ ನೀಡಿ ವೆಂಟಿಲೇಟರ್ ಖರೀದಿಸಿದ್ದಾರೆ. ಹೀಗೆ ಇರುವಾಗ ಕರ್ನಾಟಕದಲ್ಲಿ ವೆಂಟಿಲೇಟರ್ ಗಳ ಖರೀದಿ ಪಾರದರ್ಶಕವಾಗಿ ನಡೆದಿದೆ ಎಂದು ನಿಮಗೆ ಅನ್ನಿಸುತ್ತದೆಯೇ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಯಾವುದೇ ಭ್ರಷ್ಟಾಚಾರವಾಗಿಲ್ಲ
ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ ಅಂತ ನಾವು ದಾಖಲೆಗಳನ್ನು ಬಿಡುಗಡೆ ಮಾಡಿದರೂ ಮಾನ್ಯ ವಿರೋಧ ಪಕ್ಷದ ನಾಯಕರು ಆಧಾರ ರಹಿತವಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ʼನಿಜ ಸತ್ಯದ ಅರಿವಾಗುವ ತನಕ ನೀವು ತಿಳಿದಿರುವ ಸತ್ಯವೆಲ್ಲವೂ ಕಾಲ್ಪನೀಕʼ ಎಂದಿದ್ದಾರೆ.

ತೌಡು, ಗಟ್ಟಿ, ಜೊಳ್ಳು ಯಾವುದು ಗೊತ್ತಿದೆ.
ಜಗತ್ತಿನಲ್ಲಿ ನಾನೇ ಬಲ್ಲವ ಎಂದು ನಾನೇ ಸತ್ಯವಂತನೆಂದುಕೊಂಡರೆ ಅಂಥವರು ಎಲ್ಲರಿಗಿಂತಲೂ ಕೀಳಾಗುತ್ತಾರೆ. ಸೇವಾ ಕಾರ್ಯದಲ್ಲಿ ಪ್ರೀತಿ ಕರುಣೆ ಇರಬೇಕೆ ಹೊರತು ಪ್ರತಿಷ್ಠೆ ಕೀರ್ತಿ ಮತ್ತು ಕಾಮನೆಗಳಲ್ಲ. ಅಸೂಯೆ ಅಧಃಪತನಕ್ಕೆ ನಾಂದಿ. ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂಬುದು ಗೊತ್ತಿದೆ.

ಕೋವಿಡ್ ವಿಚಾರದಲ್ಲಿ ರಾಜಕೀಯ ಬೇಡ
'290 ಕೋಟಿಯಷ್ಟು ಇದುವೆರಗೂ ಖರೀದಿಯಾಗಿದೆ. ಇದರಲ್ಲಿ 33 ಕೋಟಿ ಯಷ್ಟು ವೈದ್ಯಕೀಯ ಇಲಾಖೆಯಿಂದ ಖರೀದಿಸಲಾಗಿದೆ. 33 ಕೋಟಿಗೆ 33 ಪ್ರಶ್ನೆ ಕೇಳಿದ್ರೇ ಹೇಗೆ ಕೆಲಸ ಮಾಡೋದು?' ಎಂದು ಸುಧಾಕರ್ ಪ್ರಶ್ನಿಸಿದ್ದಾರೆ.
'ಅಶ್ವಥ್ ನಾರಾಯಣ್, ಶ್ರೀರಾಮುಲು ಅವರು ಸರ್ಕಾರದಿಂದ ಎಲ್ಲವನ್ನೂ ಹೇಳಿದ್ದಾರೆ. ಸುದೀರ್ಘವಾಗಿ ಒಂದೂವರೆ ಗಂಟೆಗಳ ಕಾಲ ಅಂಕಿ ಅಂಶಗಳ ಸಮೇತ ತಿಳಸಿದ್ದಾರೆ. ಏನಾದ್ರೂ ತಪ್ಪಾಗಿದ್ರೇ ರಾಜೀನಾಮೆ ಕೊಡ್ತೇನೆ ಎಂದು ಶ್ರೀರಾಮುಲು ಹೇಳಿದ್ದಾರೆ ಆದರೂ, ಕಾಂಗ್ರೆಸ್ ಸುಳ್ಳು ಲೆಕ್ಕ ಮುಂದಿಟ್ಟುಕೊಂಡು ಬಂದಿದೆ, ದೇಶದಲ್ಲಿ ಯಾರು ಕೂಡ ಕೋವಿಡ್ ವಿಚಾರದಲ್ಲಿ ಈ ರೀತಿ ರಾಜಕಾರಣ ಮಾಡಿಲ್ಲ ಎಂದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications