ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ: ಸುಧಾಕರ್

|
Google Oneindia Kannada News

ಬೆಂಗಳೂರು, ಜುಲೈ 23: ಕೊವಿಡ್ 19 ಚಿಕಿತ್ಸೆಗೆ ಬೇಕಾದ ಸಾಧನ, ಉಪಕರಣ, ಸಾಮಾಗ್ರಿಗಳ ಖರೀದಿಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ. ಆದರೆ ಎಲ್ಲಾ ಆರೋಪಗಳು ಸುಳ್ಳು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅಲ್ಲಗೆಳೆದಿದ್ದಾರೆ.

Recommended Video

India vs China : ಪಾಕಿಸ್ತಾನವನ್ನು ಬಿಟ್ಟು ಚೀನಾವನ್ನು ಟಾರ್ಗೆಟ್ ಮಾಡಿದ ಭಾರತ | Oneindia Kannada

ಸರ್ಕಾರ ಎಲ್ಲಾ ಇಲಾಖೆ ಸೇರಿ ಒಟ್ಟು ₹4167 ಕೋಟಿ ರು ಗಳನ್ನು ಮಾರ್ಚ್ ತಿಂಗಳಿನಿಂದ ಇಲ್ಲಿ ತನಕ ಖರ್ಚು ಮಾಡಲಾಗಿದೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ಅವರು ಮಾಧ್ಯಮ ಗೋಷ್ಠಿಯಲ್ಲಿ ₹324 ಕೋಟಿ ಎಂದಿದ್ದಾರೆ‌. ಸರ್ಕಾರ ಯಾಕೆ ಸುಳ್ಳು ಹೇಳುತ್ತಿದೆ ? ಕೊವಿಡ್ 19 ಸಂಬಂಧಿಸಿದ ಖರೀದಿಯಲ್ಲಿ ಸರ್ಕಾರ 2000 ಕೋಟಿ ರು ನುಂಗಿ ಹಾಕಿದೆ ಎಂದು ಸಿದ್ದರಾಮಯ್ಯ ಅವರು ಲೆಕ್ಕ ಕೇಳಿದ್ದಾರೆ.

ಕೋವಿಡ್ ಭ್ರಷ್ಟಾಚಾರ: ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಒತ್ತಾಯಕೋವಿಡ್ ಭ್ರಷ್ಟಾಚಾರ: ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಒತ್ತಾಯ

ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಸುಧಾಕರ್, ಕೊರೊನಾ ಮಹಾಮಾರಿಯ ಸಂಕಷ್ಟದಲ್ಲಿ ಸತ್ಯಾಂಶವಿಲ್ಲದ ದಾಖಲೆಗಳ ಮೂಲಕ ರಾಜ್ಯದ ಜನರ ದಿಕ್ಕು ತಪ್ಪಿಸುವ ನಿಮ್ಮ ಆಧಾರ ರಹಿತ ಆರೋಪಗಳನ್ನು ರಾಜ್ಯದ ಜನ ನಂಬುವುದಿಲ್ಲ. ಜನರಿಗೆ ಸತ್ಯಯಾವುದು ಸುಳ್ಳು ಯಾವುದು ಗೊತ್ತಿದೆ. ಯಾರೂ ಬೇಕಾದರೂ ಲೆಕ್ಕ ಕೇಳಿದರೂ ನಮ್ಮ ಬಳಿ ಸರಿಯಾದ ದಾಖಲೆಗಳಿವೆ ಎಂದಿದ್ದಾರೆ.

ವೆಂಟಿಲೇಟರ್ ಗೆ 4 ಲಕ್ಷ ರೂಪಾಯಿ ನೀಡಲಾಗಿದೆ.

ವೆಂಟಿಲೇಟರ್ ಗೆ 4 ಲಕ್ಷ ರೂಪಾಯಿ ನೀಡಲಾಗಿದೆ.

ಕೇಂದ್ರ ಸರ್ಕಾರವು ಒಂದೊಂದು ವೆಂಟಿಲೇಟರ್ ಗೆ 4 ಲಕ್ಷ ರೂಪಾಯಿ ನೀಡಿ ಖರೀದಿಸಿದೆ. ತಮಿಳುನಾಡಿನಲ್ಲಿ ಅಲ್ಲಿನ ಸರ್ಕಾರವು 100 ವೆಂಟಿಲೇಟರ್ ಗಳನ್ನು ಖರೀದಿಸಿದ್ದು, ಒಂದು ವೆಂಟಿಲೇಟರ್ ಗೆ 4.78 ಲಕ್ಷ ರೂಪಾಯಿ ನೀಡಿದ್ದಾರೆ. ಕರ್ನಾಟಕದಲ್ಲಿ ಮಾರ್ಚ್.22ರಂದು ಒಂದು ವೆಂಟಿಲೇಟರ್ ಗೆ 5.60ಲಕ್ಷ ನೀಡಿದ್ದಾರೆ. ಎರಡನೇ ಬಾರಿ ಒಂದು ವೆಂಟಿಲೇಟರ್ ತಲಾ 12.36 ಲಕ್ಷ ನೀಡಿದ್ದಾರೆ. ಮೂರನೇ ಬಾರಿ 18.23 ಲಕ್ಷ ರೂಪಾಯಿ ನೀಡಿ ವೆಂಟಿಲೇಟರ್ ಖರೀದಿಸಿದ್ದಾರೆ. ಹೀಗೆ ಇರುವಾಗ ಕರ್ನಾಟಕದಲ್ಲಿ ವೆಂಟಿಲೇಟರ್ ಗಳ ಖರೀದಿ ಪಾರದರ್ಶಕವಾಗಿ ನಡೆದಿದೆ ಎಂದು ನಿಮಗೆ ಅನ್ನಿಸುತ್ತದೆಯೇ ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಕೊವಿಡ್-19 ನಿರ್ವಹಣೆಗೆ ಯಾವ ಇಲಾಖೆಯಲ್ಲಿ ಎಷ್ಟು ಖರ್ಚು?ಕೊವಿಡ್-19 ನಿರ್ವಹಣೆಗೆ ಯಾವ ಇಲಾಖೆಯಲ್ಲಿ ಎಷ್ಟು ಖರ್ಚು?

ಯಾವುದೇ ಭ್ರಷ್ಟಾಚಾರವಾಗಿಲ್ಲ

ಯಾವುದೇ ಭ್ರಷ್ಟಾಚಾರವಾಗಿಲ್ಲ

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ ಅಂತ ನಾವು ದಾಖಲೆಗಳನ್ನು ಬಿಡುಗಡೆ ಮಾಡಿದರೂ ಮಾನ್ಯ ವಿರೋಧ ಪಕ್ಷದ ನಾಯಕರು ಆಧಾರ ರಹಿತವಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ʼನಿಜ ಸತ್ಯದ ಅರಿವಾಗುವ ತನಕ ನೀವು ತಿಳಿದಿರುವ ಸತ್ಯವೆಲ್ಲವೂ ಕಾಲ್ಪನೀಕʼ ಎಂದಿದ್ದಾರೆ.

'330 ರೂಪಾಯಿ ಪಿಪಿಇ ಕಿಟ್ ಖರೀದಿಸಲು 2117 ರೂಪಾಯಿ ಖರ್ಚು''330 ರೂಪಾಯಿ ಪಿಪಿಇ ಕಿಟ್ ಖರೀದಿಸಲು 2117 ರೂಪಾಯಿ ಖರ್ಚು'

ತೌಡು, ಗಟ್ಟಿ, ಜೊಳ್ಳು ಯಾವುದು ಗೊತ್ತಿದೆ.

ತೌಡು, ಗಟ್ಟಿ, ಜೊಳ್ಳು ಯಾವುದು ಗೊತ್ತಿದೆ.

ಜಗತ್ತಿನಲ್ಲಿ ನಾನೇ ಬಲ್ಲವ ಎಂದು ನಾನೇ ಸತ್ಯವಂತನೆಂದುಕೊಂಡರೆ ಅಂಥವರು ಎಲ್ಲರಿಗಿಂತಲೂ ಕೀಳಾಗುತ್ತಾರೆ. ಸೇವಾ ಕಾರ್ಯದಲ್ಲಿ ಪ್ರೀತಿ ಕರುಣೆ ಇರಬೇಕೆ ಹೊರತು ಪ್ರತಿಷ್ಠೆ ಕೀರ್ತಿ ಮತ್ತು ಕಾಮನೆಗಳಲ್ಲ. ಅಸೂಯೆ ಅಧಃಪತನಕ್ಕೆ ನಾಂದಿ. ಸತ್ಯ ಯಾವತ್ತು ಧಾನ್ಯವಿದ್ದಂತೆ, ಸುಳ್ಳು ತೌಡಿದ್ದಂತೆ. ಜನರಿಗೆ ಗಟ್ಟಿ, ಜೊಳ್ಳು ಯಾವುದು ಎಂಬುದು ಗೊತ್ತಿದೆ.

'4 ಲಕ್ಷದ ವೆಂಟಿಲೇಟರ್ ಖರೀದಿಗೆ 18 ಲಕ್ಷ ನೀಡಿದ ರಾಜ್ಯ ಸರ್ಕಾರ''4 ಲಕ್ಷದ ವೆಂಟಿಲೇಟರ್ ಖರೀದಿಗೆ 18 ಲಕ್ಷ ನೀಡಿದ ರಾಜ್ಯ ಸರ್ಕಾರ'

ಕೋವಿಡ್ ವಿಚಾರದಲ್ಲಿ ರಾಜಕೀಯ ಬೇಡ

ಕೋವಿಡ್ ವಿಚಾರದಲ್ಲಿ ರಾಜಕೀಯ ಬೇಡ

'290 ಕೋಟಿಯಷ್ಟು ‌ಇದುವೆರಗೂ ಖರೀದಿಯಾಗಿದೆ. ಇದರಲ್ಲಿ 33 ಕೋಟಿ ಯಷ್ಟು ವೈದ್ಯಕೀಯ ಇಲಾಖೆಯಿಂದ ಖರೀದಿಸಲಾಗಿದೆ. 33 ಕೋಟಿಗೆ 33 ಪ್ರಶ್ನೆ ಕೇಳಿದ್ರೇ ಹೇಗೆ ಕೆಲಸ ಮಾಡೋದು?' ಎಂದು ಸುಧಾಕರ್ ಪ್ರಶ್ನಿಸಿದ್ದಾರೆ.

'ಅಶ್ವಥ್ ನಾರಾಯಣ್, ಶ್ರೀರಾಮುಲು ಅವರು ಸರ್ಕಾರದಿಂದ ಎಲ್ಲವನ್ನೂ ಹೇಳಿದ್ದಾರೆ. ಸುದೀರ್ಘವಾಗಿ ಒಂದೂವರೆ ಗಂಟೆಗಳ ಕಾಲ ಅಂಕಿ ಅಂಶಗಳ ಸಮೇತ ತಿಳಸಿದ್ದಾರೆ. ಏನಾದ್ರೂ ತಪ್ಪಾಗಿದ್ರೇ ರಾಜೀನಾಮೆ ಕೊಡ್ತೇನೆ ಎಂದು ಶ್ರೀರಾಮುಲು ಹೇಳಿದ್ದಾರೆ ಆದರೂ, ಕಾಂಗ್ರೆಸ್ ಸುಳ್ಳು ಲೆಕ್ಕ ಮುಂದಿಟ್ಟುಕೊಂಡು ಬಂದಿದೆ, ದೇಶದಲ್ಲಿ ಯಾರು ಕೂಡ ಕೋವಿಡ್ ವಿಚಾರದಲ್ಲಿ ಈ ರೀತಿ ರಾಜಕಾರಣ ಮಾಡಿಲ್ಲ ಎಂದರು.

English summary
Karnataka Congress seeking judicial probe into alleged COVID-19 equipment Scam by Yediyurappa led BJP government, Medical education minister Sudhakar declined the allegations and said ready to provide all data regarding purchase of equipment
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X