ಬಿಜೆಪಿ ವಿಶ್ವಾಸನೀಯ ಪಕ್ಷ ಎನ್ನುವುದು ಮತ್ತೆ ಸಾಬೀತು: ಗುಜರಾತ್ ಫಲಿತಾಂಶಕ್ಕೆ ಸುನಿಲ್ ಕುಮಾರ್ ಸಂತಸ
ಬೆಂಗಳೂರು, ಡಿಸೆಂಬರ್ 8: ಗುಜರಾತ್ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಗುರುವಾರ 12 ಗಂಟೆ ಸುಮಾರಿಗೆ ಬಹುಮತ ದಾಟಿ ಭಾರತೀಯ ಜನತಾ ಪಕ್ಷ 154 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಜೋರಾಗಿದೆ.
ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ರಾಜ್ಯ ರಾಜಕೀಯದಲ್ಲೂ ಭಾರಿ ಕುತೂಹಲವಿದ್ದು, ಬಿಜೆಪಿ ಬಹುಮತ ದಾಟಿ 154 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಬಗ್ಗೆ ಇಂಧನ ಸಚಿವ ಸುನಿಲ್ ಕುಮಾರ್ ಸಂತೋಷ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುನಿಲ್ ಕುಮಾರ್, 'ಗುಜರಾತ್‌ನಲ್ಲಿ ಸತತ 7ನೇ ಬಾರಿ ಅಧಿಕಾರಕ್ಕೇರುವ ಮೂಲಕ, ಭಾರತೀಯ ಜನತಾ ಪಕ್ಷ ಜನರ ವಿಶ್ವಾಸನೀಯ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸಧೃಡ ನಾಯಕತ್ವಕ್ಕೆ ಬೆಂಬಲಿಸಿದ ಗುಜರಾತ್‌ನ ಮತದಾರರಿಗೆ ಧನ್ಯವಾದಗಳು' ಎಂದಿದ್ದಾರೆ.
ಇನ್ನು 'ಗೆಲುವು ಸಾಧಿಸಿದ ಪಕ್ಷದ ಅಭ್ಯರ್ಥಿಗಳು ಹಾಗೂ ಹಗಲಿರುಳು ಪಕ್ಷದ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಹಾರ್ದಿಕ ಅಭಿನಂದನೆಗಳು' ಎಂದು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಿಗೆ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಸುನಿಲ್ ಕುಮಾರ್ ಶುಭಾಶಯ ಕೋರಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆ ಮತ ಎಣಿಕೆಯಲ್ಲಿ ಗುರುವಾರ 12 ಗಂಟೆ ಸುಮಾರಿಗೆ ಬಿಜೆಪಿ 154 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ 19 ಕ್ಷೇತ್ರಗಳಲ್ಲಿ, ಆಮ್ ಆದ್ಮಿ ಪಕ್ಷ 6 ಕ್ಷೇತ್ರದಲ್ಲಿ, ಹಾಗೂ ಇತರರು 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.
1,621 ಅಭ್ಯರ್ಥಿಗಳು ಕಣದಲ್ಲಿರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಮತ ಎಣಿಕೆಗೆ ಭಾರೀ ಭದ್ರತೆ ಮಾಡಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಬಹುಮತ ಪಡೆದಿದ್ದ ಬಿಜೆಪಿ ಈ ಭಾರಿ ಅಧಿಕ ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ.












Click it and Unblock the Notifications