ಸಚಿವ ಉಮೇಶ್ ಕತ್ತಿ ನಿಧನ: ಬಿಜೆಪಿಯ ಜನೋತ್ಸವ ಸಮಾವೇಶ ರದ್ದು?
ಬೆಂಗಳೂರು, ಸೆಪ್ಟೆಂಬರ್ 7: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗುರುವಾರ ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಸಮಾವೇಶ ರದ್ದಾಗುವ ಸಾಧ್ಯತೆ ಇದೆ.
ಸಮಾವೇಶ ಮುಂದೂಡುವ ಅಥವ ರದ್ದುಗೊಳಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀರ್ಮಾನ ಕೈಗೊಳ್ಳಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಮೇಶ್ ಕತ್ತಿ ಅಂತ್ಯ ಸಂಸ್ಕಾರದಲ್ಲಿ ಪಾಳ್ಗೊಳ್ಳಲು ಬೆಳಗಾವಿಗೆ ಹೊರಟಿದ್ದಾರೆ.
Recommended Video
ದೊಡ್ಡಬಳ್ಳಾಪುರದಲ್ಲಿ ರಾಜ್ಯ ಸರ್ಕಾರದ ಸಾಧನೆಗಳನ್ನು ಅನಾವರಣ ಮಾಡಲು ಜನೋತ್ಸವ ಸಮಾವೇಶ ಆಯೋಜನೆ ಮಾಡಲಾಗಿದೆ. ಸೆಪ್ಟೆಂಬರ್ 8ರಂದು ಸಮಾವೇಶ ನಡೆಯಲಿದ್ದು, ಬಿಜೆಪಿಯ ರಾಷ್ಟ್ರೀಯ ನಾಯಕರು ಸಹ ಸಮಾವೇಶಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸಮಾವೇಶದ ಮೂಲಕ ಮುಂದಿನ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿಯನ್ನು ನಡೆಸಿದೆ. ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಸಹ ಪಾಳ್ಗೊಳ್ಳುವ ನಿರೀಕ್ಷೆ ಇದೆ. ಸಮಾವೇಶಕ್ಕೆ ಸುಮಾರು 2-3 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ.
'ಜನೋತ್ಸವ - ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ' ಸಮಾವೇಶವು 8 ಸೆಪ್ಟೆಂಬರ್ 2022 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜೆಪಿ ನಡ್ಡಾ ಅವರ ಉಪಸ್ಥಿತಿ ಮತ್ತು ರಾಜ್ಯ ನಾಯಕರ ಸಮ್ಮುಖದಲ್ಲಿ ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. ಈ ವೇಳೆ ಅತ್ಯಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಸಮಾವೇಶವನ್ನು ಯಶಸ್ವಿಗೊಳಿಸೋಣ ಎಂದು ಬಿಜೆಪಿ ಟ್ವೀಟ್ ಮಾಡಿತ್ತು.

ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಪಟ್ಟಣದ ಹೊರವಲಯದಲ್ಲಿ 'ಜನೋತ್ಸವ ಸಮಾವೇಶ' ಆಯೋಜನೆ ಮಾಡಲಾಗಿತ್ತು. ಆದರೆ ದಕ್ಷಿಣ ಕನ್ನಡದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತು ಪ್ರವೀಣ್ ಹತ್ಯೆ ನಡೆದ ಬಳಿಕ ಸಮಾವೇಶ ಮುಂದೂಡಲಾಗಿತ್ತು.
ಈಗ ಸೆಪ್ಟೆಂಬರ್ 8ರ ಗುರುವಾರ ಸಮಾವೇಶಕ್ಕೆ ದಿನ ನಿಗದಿ ಮಾಡಲಾಗಿತ್ತು. ಆದರೆ ಮಂಗಳವಾರ ರಾತ್ರಿ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಆದ್ದರಿಂದ ಜನೋತ್ಸವ ಸಮಾವೇಶ ರದ್ದಾಗುವ ಸಾಧ್ಯತೆ ಇದೆ.












Click it and Unblock the Notifications