ಕರ್ನಾಟಕದಲ್ಲಿ ಕ್ಲಬ್, ಹೋಟೆಲ್ ಗಳಲ್ಲಿ ಧೂಮಪಾನ ನಿಷೇಧ
ಬೆಂಗಳೂರು, ನವೆಂಬರ್ 19 :ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್, ಕರ್ನಾಟಕ ಧೂಮಪಾನ ನಿಷೇಧ ಹಾಗೂ ಧೂಮಪಾನಿಗಳಲ್ಲದವರ ಆರೋಗ್ಯ ರಕ್ಷಣೆ ಕಾಯ್ದೆ ಪ್ರಕಾರ ಎಲ್ಲ ದರ್ಶಿನಿ, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ಪಬ್, ಕ್ಲಬ್ಗಳಲ್ಲಿ ಧೂಮಪಾನ ನಿಷೇಧಿಸಿ ಆದೇಶ ಹೊರಡಿಸಿದ್ದೇವೆ. ತಕ್ಷಣವೇ ಈ ಆದೇಶ ಕಾರ್ಯರೂಪಕ್ಕೆ ಬರಲಿದೆ. ಈ ಆದೇಶವನ್ನು ಪಾಲಿಸದೇ ಇದ್ದರೆ ಹೋಟೆಲ್, ಬಾರ್, ಕ್ಲಬ್ಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಗರ ಆರೋಗ್ಯ ಯೋಜನೆಗಳು ಹಾಗೂ ಸಾಂಕ್ರಾಮಿಕ ರೋಗ ನಿಯಂತ್ರಣ ಕುರಿತಂತೆ ಅಮೆರಿಕಾ ನಿಯೋಗದೊಂದಿಗೆ ಸಚಿವ ಯು.ಟಿ.ಖಾದರ್ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್, ಧೂಮಪಾನ ನಿಷೇಧದ ಬಗ್ಗೆ ಒತ್ತು ನೀಡಲಾಗಿದೆ ಎಂದರು.
ತಂಬಾಕು ಆಧಾರಿತ ಆರೋಗ್ಯ ಸಮಸ್ಯೆಗಳ ನಿಯಂತ್ರಣಕ್ಕೆ ಸಂಸ್ಥೆಗಳು, ಸಾರ್ವಜನಿಕರ ಸಹಕಾರ ಬೇಕು ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಸಚಿವ ಶಿವಾನಂದ ಪಟೇಲ್ ರ ಜೊತೆ ಮಾತನಾಡಿದ್ದೇನೆ. ತಂಬಾಕು ಮತ್ತು ಆಲ್ಕೋಹಾಲ್ ಉತ್ಪನ್ನಗಳಿಗೆ ತೆರಿಗೆ ರಿಯಾಯ್ತಿ ರದ್ದು ಮಾಡುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ ಎಂದರು.

ಗೋವಾ ಸರ್ಕಾರದ ಮೀನು ನಿಷೇಧದ ಬಗ್ಗೆ ಮಾತನಾಡಿ ಈ ಬಗ್ಗೆ ಮಾತುಕತೆ ಜಾರಿಯಲ್ಲಿದೆ. ಗೋವಾ ಸರ್ಕಾರದ ಕ್ರಮ ವೈಜ್ಞಾನಿಕವಾಗಿಲ್ಲ, ರಾಜ್ಯದ ಜನತೆಯ ಹಿತ ಕಾಯಲಾಗುವುದು ಎಂದು ಹೇಳಿದರು.












Click it and Unblock the Notifications