• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕದಲ್ಲಿ ಕ್ಲಬ್, ಹೋಟೆಲ್ ಗಳಲ್ಲಿ ಧೂಮಪಾನ ನಿಷೇಧ

|

ಬೆಂಗಳೂರು, ನವೆಂಬರ್ 19 :ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್, ಕರ್ನಾಟಕ ಧೂಮಪಾನ ನಿಷೇಧ ಹಾಗೂ ಧೂಮಪಾನಿಗಳಲ್ಲದವರ ಆರೋಗ್ಯ ರಕ್ಷಣೆ ಕಾಯ್ದೆ ಪ್ರಕಾರ ಎಲ್ಲ ದರ್ಶಿನಿ, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ಪಬ್, ಕ್ಲಬ್​ಗಳಲ್ಲಿ ಧೂಮಪಾನ ನಿಷೇಧಿಸಿ ಆದೇಶ ಹೊರಡಿಸಿದ್ದೇವೆ. ತಕ್ಷಣವೇ ಈ ಆದೇಶ ಕಾರ್ಯರೂಪಕ್ಕೆ ಬರಲಿದೆ. ಈ ಆದೇಶವನ್ನು ಪಾಲಿಸದೇ ಇದ್ದರೆ ಹೋಟೆಲ್, ಬಾರ್, ಕ್ಲಬ್​ಗಳ ಪರವಾನಗಿಯನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ನಗರ ಆರೋಗ್ಯ ಯೋಜನೆಗಳು ಹಾಗೂ ಸಾಂಕ್ರಾಮಿಕ ರೋಗ ನಿಯಂತ್ರಣ ಕುರಿತಂತೆ ಅಮೆರಿಕಾ ನಿಯೋಗದೊಂದಿಗೆ ಸಚಿವ ಯು.ಟಿ.ಖಾದರ್ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾದರ್, ಧೂಮಪಾನ ನಿಷೇಧದ ಬಗ್ಗೆ ಒತ್ತು ನೀಡಲಾಗಿದೆ ಎಂದರು.

ಇ-ಸಿಗರೇಟ್, ಇ-ಹುಕ್ಕಾ ನಿಷೇಧಕ್ಕೆ ಕೇಂದ್ರದಿಂದ ಎಲ್ಲ ರಾಜ್ಯಗಳಿಗೆ ಸೂಚನೆ

ತಂಬಾಕು ಆಧಾರಿತ ಆರೋಗ್ಯ ಸಮಸ್ಯೆಗಳ ನಿಯಂತ್ರಣಕ್ಕೆ ಸಂಸ್ಥೆಗಳು, ಸಾರ್ವಜನಿಕರ ಸಹಕಾರ ಬೇಕು ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಸಚಿವ ಶಿವಾನಂದ ಪಟೇಲ್ ರ ಜೊತೆ ಮಾತನಾಡಿದ್ದೇನೆ. ತಂಬಾಕು ಮತ್ತು ಆಲ್ಕೋಹಾಲ್ ಉತ್ಪನ್ನಗಳಿಗೆ ತೆರಿಗೆ ರಿಯಾಯ್ತಿ ರದ್ದು ಮಾಡುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ ಎಂದರು.

ಹೋಟೆಲ್, ಬಾರ್‌ನಲ್ಲಿ ಧಮ್ ಹೊಡೆಯಂಗಿಲ್ಲ: ಸ್ಮೋಕ್ ಝೋನ್ ಕಡ್ಡಾಯ

ಗೋವಾ ಸರ್ಕಾರದ ಮೀನು ನಿಷೇಧದ ಬಗ್ಗೆ ಮಾತನಾಡಿ ಈ ಬಗ್ಗೆ ಮಾತುಕತೆ ಜಾರಿಯಲ್ಲಿದೆ. ಗೋವಾ ಸರ್ಕಾರದ ಕ್ರಮ ವೈಜ್ಞಾನಿಕವಾಗಿಲ್ಲ, ರಾಜ್ಯದ ಜನತೆಯ ಹಿತ ಕಾಯಲಾಗುವುದು ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka Minister UT Khader urges for more Smoking Zones and complete ban on Smoking in Hotel, Bars, Restaurants, club. Karnataka has banned e cigarettes and smoking is prohibited in Public places.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more