ಆಸ್ಪತ್ರೆ ಬಿಲ್ ಪಾವತಿಸಲಾಗದೆ ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಜಮೀರ್ ಅಹಮದ್ ಸಹಾಯಹಸ್ತ; ಎರಡೂವರೆ ಲಕ್ಷ ರೂ. ನೆರವು
ಬೆಂಗಳೂರು, ಅಕ್ಟೋಬರ್ 06: ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಗರ್ಭಿಣಿ ಮಹಿಳೆ ಕುಟುಂಬ ವೈದ್ಯಕೀಯ ವೆಚ್ಚ ಭರಿಸಲು ಸಂಕಷ್ಟದಲ್ಲಿರುವ ಮಾಹಿತಿ ತಿಳಿದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸಹಾಯಹಸ್ತ ನೀಡಿದ್ದು, ಎರಡೂವರೆ ಲಕ್ಷ ರೂ. ಬಿಲ್ ಪಾವತಿ ಮಾಡಿದ್ದಾರೆ.
ಅಷ್ಟೇ ಅಲ್ಲದೆ ಮೃತದೇಹ ಸ್ವಗ್ರಾಮವಾದ ಚಿಕ್ಕನಾಯಕನ ಹಳ್ಳಿಯ ಹುಳಿಯಾರು ಪಾಳ್ಯಕ್ಕೆ ತೆಗೆದು ಕೊಂಡು ಹೋಗಲು ಬೆಂಗಳೂರಿನಿಂದ ಆಂಬುಲೆನ್ಸ್ ವ್ಯವಸ್ಥೆ ಸಹ ಮಾಡಿಸಿದ್ದಾರೆ. ಚಿಕ್ಕ ನಾಯಕನ ಹಳ್ಳಿ ಹುಳಿಯಾರು ಪಾಳ್ಯದ ಹಣ್ಣಿನ ವ್ಯಾಪಾರಿ ಜಬಿವುಲ್ಲಾ ಎಂಬುವರ ಪತ್ನಿ ಮೂವತ್ತು ವರ್ಷದ ಫಾತಿಮಾಬಿ ಎಂಬುವರು ತಿಪಟೂರು ಆಸ್ಪತ್ರೆಗೆ ದಾಖಲಾಗಿ ಜೆಪಿ ನಗರದ ಕ್ಷೇಮ ಆಸ್ಪತ್ರೆ ಯಲ್ಲಿ ಕಳೆದ 20 ದಿನಗಳ ಹಿಂದೆ ದಾಖಲಾಗಿ ಹೆಣ್ಣು ಮಗುವಿಗೆ ಜನ್ಮ ಕೊಟ್ಟಿದ್ದರು. ನಂತರ ಅನಾರೋಗ್ಯ ಕಾಣಿಸಿಕೊಂಡು ಅಲ್ಲಿಂದ ಹಾಸನ ಆಸ್ಪತ್ರೆ ನಂತರ ಬೆಂಗಳೂರಿನ ಕ್ಷೇಮ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದರು.

ಆಸ್ಪತ್ರೆ ಚಿಕಿತ್ಸೆ ವೆಚ್ಚ 3.80 ಲಕ್ಷ ರೂ. ಆಗಿದ್ದು ಕುಟುಂಬದವರ ಬಳಿ 50 ಸಾವಿರ ರೂ. ಮಾತ್ರ ಇದ್ದು, ಮೃತದೇಹ ತೆಗೆದುಕೊಂಡು ಹೋಗಲು 3 ಲಕ್ಷ ರೂ. ಪಾವತಿಸಬೇಕಿತ್ತು. ಪತ್ನಿಯನ್ನು ಕಳೆದುಕೊಂಡ ಪತಿ ಹಣ ಪಾವತಿ ಮಾಡಲು ಆಗದೆ ಸಂಕಷ್ಟ ಎದುರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಸಚಿವರು, ತಕ್ಷಣ ಅಧಿಕಾರಿಗಳ ಮೂಲಕ ಆಸ್ಪತ್ರೆ ಆಡಳಿತ ಮಂಡಳಿ ಅವರ ಜತೆ ಚರ್ಚಿಸಿ 80 ಸಾವಿರ ರೂ. ಕಡಿಮೆ ಮಾಡಿಸಿ ಸಚಿವರೇ ಅಧ್ಯಕ್ಷ ರಾಗಿರುವ ವಖ್ಫ್ ಕೌನ್ಸಿಲ್ ಫಾರ್ ವುಮೆನ್ಸ್ ಮೂಲಕ ಎರಡು ಲಕ್ಷ ರೂ. ಹಾಗೂ ವೈಯಕ್ತಿಕ ವಾಗಿ 50 ಸಾವಿರ ರೂ.ಪಾವತಿ ಮಾಡಿ ಮೃತದೇಹ ಸ್ವಗ್ರಾಮಕ್ಕೆ ತೆಗೆದುಕೊಂಡು ಹೋಗಲು ಆಂಬುಲೆನ್ಸ್ ಸಹ ವ್ಯವಸ್ಥೆ ಮಾಡಿಸಿದರು.
ಹಾಸನದಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಸೇರಿಸಿ ಎಂದಾಗ ಆಂಬುಲೆನ್ಸ್ ಚಾಲಕ ಜೆಪಿ ನಗರದ ಆಸ್ಪತ್ರೆ ಗೆ ಕರೆತಂದು ದಾಖಲು ಮಾಡಿದ್ದ, ಅಲ್ಲಿ ಚಿಕಿತ್ಸೆ ವೆಚ್ಚ ಪಾವತಿಸಲು ಆಗಿರಲಿಲ್ಲ.
ತಾಯಿ ಅನಾರೋಗ್ಯದ ನಡುವೆಯೇ ಮಗು ನೋಡಲು ಹಂಬಲಿಸಿ ಮಗುವನ್ನು ಅಪ್ಪಿ ಕೊಂಡಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದ ಸಚಿವರು, ವಿಶೇಷ ಪ್ರಕರಣ ಎಂದು ಭಾವಿಸಿ ನೆರವು ಕಲ್ಪಿಸಿದ್ದಾರೆ.
-
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಕೆಲವೇ ಗಂಟೆಗಳಲ್ಲಿ ಇರಾನ್ ಬಂದರುಗಳಿಗೆ ಅಮೆರಿಕದಿಂದ ಕಡಲ ದಿಗ್ಬಂಧನ? ಯುದ್ಧದ ಭೀತಿಯಲ್ಲಿ ಕೊಲ್ಲಿ ರಾಷ್ಟ್ರಗಳು -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Siddaramaiah: ಜನರ ದಾರಿತಪ್ಪಿಸುವ ಬಿಜೆಪಿಯನ್ನು ನಂಬಬೇಡಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರಣವೇನು -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ











Click it and Unblock the Notifications