ಚನ್ನಪಟ್ಟಣ ಚುನಾವಣೆ: ಹೆಚ್​ಡಿಕೆಗೆ “ಕರಿಯ ಕುಮಾರಸ್ವಾಮಿ” ಎಂದ ಜಮೀರ್​

ರಾಮನಗರ, ನವೆಂಬರ್‌ 11: ರಾಜ್ಯದಲ್ಲಿ ಬೈ ಎಲೆಕ್ಷನ್‌ ಭರಾಟೆ ಜೋರಾಗಿದೆ. ಕರ್ನಾಟಕದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಹೈವೋಲ್ಟೇಜ್ ಕ್ಷೇತ್ರವಾಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಪ್ರಚಾರ ರಂಗೇರಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಗೆಲ್ಲುವ ನಿಟ್ಟಿನಲ್ಲಿ ರಾಜ್ಯದ ಹಲವಾರು ನಾಯಕರು ತಂಡೋಪ ತಂಡವಾಗಿ ಚನ್ನಪಟ್ಟಣಕ್ಕೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ಚುನಾವಣಾ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್​ ​ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭಾನುವಾರ ಚನ್ನಪಟ್ಟಣದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಸಚಿವ ಜಮೀರ್ ಅಹ್ಮದ್​ ​ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದಾರೆ.

Minister Zameer Ahmed Racist Remarks kariya Black HD Kumaraswamy

ಚನ್ನಪಟ್ಟಣದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸಿಪಿ ಯೋಗೇಶ್ವರ ಪರವಾಗಿ ಜಮೀರ್​ ಅಹ್ಮದ್​ ಪ್ರಚಾರಕ್ಕೆ ಇಳಿದಿದ್ದರು. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ, ಸಚಿವ ಜಮೀರ್​ ಅಹ್ಮದ್​ ಖಾನ್ ಅವರು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಭಾಷಣದ ಮಧ್ಯೆ "ಕರಿಯ ಕುಮಾರಸ್ವಾಮಿ" ಎಂದು ಟೀಕಿಸಿದ್ದಾರೆ. ಈ ಮೂಲಕ ಕಪ್ಪು ವರ್ಣದ ಜನಾಂಗೀಯ ನಿಂದನೆ ಮಾಡಿದ್ದಾರೆ.

ಪ್ರಚಾರ ಭಾಷಣದಲ್ಲಿ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ಮಾಡುವ ಭರದಲ್ಲಿ "ಬಿಜೆಪಿಯವರಿಗಿಂತ ಕಾಲಾ ಕುಮಾರಸ್ವಾಮಿ (ಕರಿಯ ಕುಮಾರಸ್ವಾಮಿ) ಹೆಚ್ಚು ಖತರ್ನಾಕ್​​" ಎಂದು ಉರ್ದುವಿನಲ್ಲಿ ಹೇಳಿದ್ದಾರೆ. ಸಿ ಪಿ ಯೋಗೇಶ್ವರ್ ನಮ್ಮ ಪಕ್ಷದಿಂದ ರಾಜಕೀಯ ಪ್ರಾರಂಭ ಮಾಡಿದರು. ಕೆಲವು ವ್ಯತ್ಯಾಸಗಳಾಗಿ ಬಿಜೆಪಿಗೆ ಹೋದರು. ಜೆಡಿಎಸ್ ಹೋಗಬೇಕು ಅಂತ ಅಂದುಕೊಂಡಿದ್ದರು, ಆದರೆ ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್ ಅಂತ‌ ಜೆಡಿಎಸ್​ಗೆ ಹೋಗಿಲ್ಲ ಎಂದು ಸಚಿವ ಜಮೀರ್‌ ಅವರು ಹೇಳಿದ್ದಾರೆ.

ಈ ಹಿಂದೆ ಹಿಜಾಬ್ ಬೇಡೆ ಅಂದಿದ್ದೀರಿ. ಈಗ ನಿನಗೆ ಮುಸಲ್ಮಾನರ ಮತ ಬೇಕಾ? ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಬಿಜೆಪಿಗೆ ಹೋಗಿ ಮುಸಲ್ಮಾನರನ್ನು ಖರೀದಿ ಮಾಡ್ತಾನಂತೆ. ಏ ಕುಮಾರಸ್ವಾಮಿ ನಿನ್ ರೇಟು ಹೇಳು, ಮುಸಲ್ಮಾನರು ಒಂದೊಂದ್ ಪೈಸೆ ಹಾಕಿ ಇಡೀ ನಿನ್ನ ಕುಟುಂಬವನ್ನೇ ಖರೀದಿ ಮಾಡುತ್ತಾರೆ ಎಂದು ಸಚಿವ ಜಮೀರ್‌ ಅವರು ಕುಮಾರಸ್ವಾಮಿ ಅವರ ವಿರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ.

ಮುಸ್ಲಿಂ ಮತ ಒಗ್ಗೂಡಿಸಲು ಜಮೀರ್ ಗೆ ಹೈಕಮಾಂಡ್ 'ಟಾಸ್ಕ್ '

ಪ್ರತಿಷ್ಠೆ ಕಣವಾಗಿರುವ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಮುಸ್ಲಿಂ ಮತ ಒಗ್ಗೂಡಿಸಲು ಕಾಂಗ್ರೆಸ್ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರು ಸತತ ಎರಡನೇ ದಿನವೂ ಮುಖಂಡರ ಸೆಳೆಯುವ ಕಾರ್ಯ ಮುಂದುವರಿಸಿದರು.

ಭಾನುವಾರ ಬೆಳಗ್ಗೆ ಖಾಸಗಿ ರೆಸಾರ್ಟ್ ನಲ್ಲಿ ಮಾಜಿ ಸಂಸದ ಡಿಕೆ ಸುರೇಶ್, ಶಾಸಕರಾದ ಇಕ್ಬಾಲ್ ಹುಸೇನ್, ಎನ್ ಎ ಹ್ಯಾರಿಸ್ ಅವರೊಂದಿಗೆ ಸಭೆ ನಡೆಸಿದ ಜಮೀರ್ ಅಹಮದ್ ಖಾನ್ ಅವರು ನಂತರ, ಮುಖಂಡರಾದ ತೌಸೀಫ್, ಜಖಿ ಅಹಮದ್ ಖಾನ್, ಎಸ್ ಕೆ ಬೀಡಿ ಸಂಸ್ಥೆ ಮಾಲೀಕ ರಾದ ಸಾದತ್, ಹಮೀದ್ ಮುನಾವರ್, ಜಬಿವುಲ್ಲಾ, ಫರಿದ್ ಅವರ ನಿವಾಸಕ್ಕೆ ಭೇಟಿ ನೀಡಿ ಜೆಡಿಎಸ್ ನ ಹಲವಾರು ಮುಖಂಡರನ್ನು ಕರೆಸಿಕೊಂಡು ಕಾಂಗ್ರೆಸ್ ಗೆ ಸೇರ್ಪಡೆಗೊಳಿಸಿದರು.

ಇತ್ತೀಚಿಗೆ ಜೆಡಿಎಸ್ ಸೇರಿದ್ದ ನಾಯಕರನ್ನು ಮನವೊಲಿಸಿ ಕಾಂಗ್ರೆಸ್ ಪರ ಕೆಲಸ ಮಾಡಲು ಒಪ್ಪಿಸಿದರು. ಕೆ ಎಂ ಡಿಸಿ ಅಧ್ಯಕ್ಷ ಬಿಕೆ ಅಲ್ತಾಫ್ ಖಾನ್, ಹಿರಿಯ ಮುಖಂಡ ವಾಸಿಲ್ ಅವರೊಂದಿಗೆ ಇಡೀ ದಿನ ಮುಸ್ಲಿಂ ಮುಖಂಡರ ಪ್ರತ್ಯೇಕ ಸಭೆ ನಡೆಸಿ ಕಾರ್ಯತಂತ್ರ ರೂಪಿಸಿದರು. ನಂತರ ಟಿಪ್ಪು ಮೈದಾನದಲ್ಲಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಜಮೀರ್‌ ವಿರುದ್ಧ ಜೆಡಿಎಸ್‌ ಕಿಡಿ

ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ವೇಳೆ ವಸತಿ ಖಾತೆ ಸಚಿವ ಜಮೀರ್‌ ಅವರು ಜನಾಂಗೀಯ ನಿಂದನೆ ಮಾಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ (10-11-2024) ರಾತ್ರಿ ಪ್ರಚಾರದ ವೇಳೆ ಬಹಿರಂಗ ಸಭೆಯಲ್ಲಿ ಸಾರ್ವಜನಿಕವಾಗಿ ಕೇಂದ್ರ ಸಚಿವರಾದ ಶ್ರೀ ಹೆಚ್‌.ಡಿ. ಕುಮಾರಸ್ವಾಮಿ ಅವರನ್ನು, ​ಜಮೀರ್​ ಅಹ್ಮದ್​ ಖಾನ್‌ "ಕಾಲಾ ಕುಮಾರಸ್ವಾಮಿ" (ಕರಿಯ ಕುಮಾರಸ್ವಾಮಿ) ಎಂದು ಉರ್ದು ಭಾಷೆಯಲ್ಲಿ ನಿಂದಿಸಿದ್ದಾರೆ.

ಈ ಮೂಲಕ ಕಪ್ಪು ವರ್ಣದವರ ಜನಾಂಗೀಯ ನಿಂದನೆ ಮಾಡಿ ವರ್ಣಭೇದ ತಾರತಮ್ಯ ಎಸಗಿದ್ದಾರೆ. ಅಷ್ಟೆ ಅಲ್ಲದೇ ಒಂದು ಸಮುದಾಯವನ್ನು ಎತ್ತಿಕಟ್ಟಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹದಗೆಡಲು ಜನರನ್ನು ಪ್ರಜೋದಿಸಿರುವ ಜಮೀರ್​ ಅಹ್ಮದ್​ ಬಾಯಿಂದ ಬಂದಿರುವ ಈ ಜನಾಂಗೀಯ ದ್ವೇಷದ ಮಾತುಗಳು ಅಕ್ಷಮ್ಯ. ಅಪರಾಧ.

ಈ ಕೂಡಲೇ ಗೃಹ ಸಚಿವರಾದ ಪರಮೇಶ್ವರ್‌ ಹಾಗೂ ರಾಮನಗರ ಜಿಲ್ಲಾ ಪೊಲೀಸರು ಜನಾಂಗೀಯ ನಿಂದನೆ, ವರ್ಣಭೇದ ಹಾಗೂ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿರುವ ಸಚಿವ ಜಮೀರ್‌ ಅಹ್ಮದ್‌ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜಾತ್ಯತೀತ ಜನತಾದಳ ಪಕ್ಷವು ಆಗ್ರಹಿಸುತ್ತದೆ. ರಾಷ್ಟ್ರೀಯ ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ನೈತಿಕತೆ ಉಳಿಸಿಕೊಂಡಿದ್ದರೇ ಮೊದಲು ಈ ಜನಾಂಗೀಯ ದ್ವೇಷಿ ಜಮೀರ್‌ ರಾಜೀನಾಮೆ ಪಡೆಯಬೇಕು ಎಂದು ಜೆಡಿಎಸ್‌ ಒತ್ತಾಯಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+