ಜಾಮೀನು ರದ್ಧತಿ ಅರ್ಜಿ ವಿಚಾರಣೆ ಮುಂದೂಡಿಕೆ, ಸಂತೋಷ್‌ಗೆ ರಿಲೀಫ್

ಬೆಂಗಳೂರು, ಆಗಸ್ಟ್. 24 : ಯಡಿಯೂರಪ್ಪ ಆಪ್ತ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಜಾಮೀನು ರದ್ಧತಿ ಕೋರಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಆ.30ಕ್ಕೆ ಮುಂದೂಡಿದೆ.

ಕೆ.ಎಸ್.ಈಶ್ವರಪ್ಪ ಆಪ್ತ ಕಾರ್ಯದರ್ಶಿ ವಿನಯ್ ಅಪಹರಣ ಪ್ರಕರಣದಲ್ಲಿ ಎನ್.ಆರ್.ಸಂತೋಷ್ ಆರೋಪಿ. ಈ ಪ್ರಕರಣದಲ್ಲಿ ಅವರಿಗೆ ಜಾಮೀನು ಸಿಕ್ಕಿದೆ. ಆದರೆ, ಅವರು ವಿಚಾರಣೆಗೆ ಸಹಕಾರ ನೀಡುತ್ತಿಲ್ಲ ಎಂದು ಪೊಲೀಸರು ಜಾಮೀನು ರದ್ದುಗೊಳಿಸುವಂತೆ 62ನೇ ಸೆಷನ್ಸ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

Minor relief for NR Santosh, Court adjourns hearing till August 30, 2017

ಗುರುವಾರ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಆ.30ಕ್ಕೆ ವಿಚಾರಣೆಯನ್ನು ಮುಂದೂಡಿತು. ಇದರಿಂದಾಗಿ ಎನ್‌.ಆರ್.ಸಂತೋಷ್‌ಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಒಟ್ಟು ಒಂಭತ್ತು ಆರೋಪಿಗಳಿದ್ದಾರೆ.

ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಸಂತೋಷ್ ವಿಚಾರಣೆ ನಡೆಸಿದ್ದಾರೆ. ಆದರೆ, ಅವರು ತನಿಖೆಗೆ ಸಹಕಾರ ನೀಡುತ್ತಿಲ್ಲ ಎಂದು ಪೊಲೀಸರು ಜಾಮೀನು ರದ್ಧತಿಗೆ ಮನವಿ ಮಾಡಿದ್ದರು.

ನಿರೀಕ್ಷಣಾ ಜಾಮೀನು ನೀಡುವಾಗ ತನಿಖೆಗೆ ಸಹಕಾರ ನೀಡಬೇಕು ಎಂದು ಷರತ್ತು ವಿಧಿಸಲಾಗಿತ್ತು. ಆದರೆ, ಅದನ್ನು ಅವರು ಪಾಲಿಸುತ್ತಿಲ್ಲ ಎಂದು ಪೊಲೀಸರು ಹೇಳಿದ್ದು, ಜಾಮೀನು ರದ್ಧತಿ ಕೋರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+