Ganeshotsav 2024: ಪಿಒಪಿ ಗಣೇಶನ ಮಾರಾಟ ಮಾಡೀರೀ ಜೋಕೆ: ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು?
ಬೆಂಗಳೂರು, ಆಗಸ್ಟ್ 23: ಪರಿಸರ ಸ್ನೇಹಿ ಗಣಪತಿ ಮೂರ್ತಿ ಮತ್ತು ಹಸಿರು ಪಟಾಕಿ ಮಾತ್ರ ಉತ್ತೇಜಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಪರಿಸರ ಮಾಲಿನ್ಯ ಉಂಟು ಮಾಡುವ ಪಿಓಪಿ ಗಣಪತಿ ಮತ್ತು ಪಟಾಕಿಗೆ ಕಡಿವಾಣ ಹಾಕುವಂತೆ ಅರಣ್ಯ,ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಲಹೆ ನೀಡಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿಂದು ಮುಖ್ಯಕಾರ್ಯದರ್ಶಿ ಮತ್ತು ಜಿಲ್ಲಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಕಾನ್ಷರೆನ್ಸ್ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾದ್ರಪದ ಶುಕ್ಲ ಚೌತಿಯ ದಿನ ಆಚರಿಸುವ ಸಿದ್ಧಿವಿನಾಯಕ ವ್ರತ ಕಥೆಯಲ್ಲಿ ಚಿನ್ನ, ಬೆಳ್ಳಿ ಅಥವಾ ಮಣ್ಣಿನ ಗಣೇಶ ಮೂರ್ತಿಯನ್ನು ಪೂಜಿಸುವಂತೆ ತಿಳಿಸಲಾಗಿದೆ. ಆದರೆ ಪರಿಸರಕ್ಕೆ ಹಾನಿ ಆಗುವ ಪಿಓಪಿ ಗಣೇಶ ಮೂರ್ತಿಗಳ ವ್ಯಾಪಕ ಬಳಕೆ ಆಗುತ್ತಿದ್ದು, ಪರಿಸರ ಉಳಿಸಲು ಜನ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ವಯನಾಡು, ಶಿರೂರು ಮೊದಲಾದ ಕಡೆ ಗುಡ್ಡ ಕುಸಿತ ಆಗಿರುವ ಪ್ರಸಕ್ತ ಸನ್ನಿವೇಶದಲ್ಲಿ ಪರಿಸರ, ಪ್ರಕೃತಿ ಉಳಿಸುವುದು ಎಲ್ಲರ ಕರ್ತವ್ಯವಾಗಿದೆ. ಸರ್ಕಾರ ಪಿಓಪಿ ಗಣೇಶ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ, ದಾಸ್ತಾನು ನಿಷೇಧಿಸಿದ್ದು, ಹೊರರಾಜ್ಯದಿಂದ ಪಿಓಪಿ ಗಣಪತಿ ಬಾರದಂತೆ ವಾಣಿಜ್ಯ ತೆರಿಗೆ, ಸಾರಿಗೆ ಮತ್ತು ಪೊಲೀಸ್ ಇಲಾಖೆ ಸಹಯೋಗದಲ್ಲಿ ಸಂಘಟಿತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಪಿಓಪಿ ಗಣೇಶವಿಗ್ರಹಗಳನ್ನು ಕ್ಯಾಲ್ಸಿಯಂ, ಸಲ್ಫೇಟ್ ಹೆಮಿಹೈಡ್ರೇಟ್ ಯುಕ್ತ ಪುಡಿಯಿಂದ ಮಾಡಲಾಗುತ್ತದೆ. ಇದರಲ್ಲಿ ಸಲ್ಫರ್, ಜಿಪ್ಸಮ್, ರಂಜಕ ಮತ್ತು ಮೆಗ್ನೀಸಿಯಮ್ ಸೇರಿದಂತೆ ಅನೇಕ ಅಂಶ ಇರುತ್ತದೆ. ಇವುಗಳಿಗೆ ಕ್ಯಾಡ್ಮಿಯಂ, ಪಾದರಸ, ಆರ್ಸೆನಿಕ್, ಸೀಸ ಮತ್ತು ಇಂಗಾಲವನ್ನು ಒಳಗೊಂಡ ರಾಸಾಯನಿಕ ಬಣ್ಣ ಲೇಪಿಸಲಾಗುತ್ತದೆ. ಇದನ್ನು ನದಿ, ಕೆರೆ, ಕಟ್ಟೆಯಲ್ಲಿ ವಿಸರ್ಜಿಸಿದರೆ ಜಲಚರಗಳು ಸಾವಿಗೀಡಾಗುತ್ತವೆ. ಜನ, ಜಾನುವಾರುಗಳು ಕಾಯಿಲೆ ಬೀಲುತ್ತಾರೆ ಎಂದು ತಿಳಿಸಿದರು.
ಸಾರ್ವಜನಿಕರ ಹಿತ ದೃಷ್ಟಿಯಿಂದ ಪರಿಸರ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇಷ್ಟು ವರ್ಷ ಸುತ್ತೋಲೆ ಮಾತ್ರ ಹೊರಡಿಸಲಾಗುತ್ತಿತ್ತು. ಕಳೆದ ವರ್ಷ ಸರ್ಕಾರ ಆದೇಶವನ್ನೇ ಹೊರಡಿಸಿದೆ. ಇದನ್ನು ಜಿಲ್ಲಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳು ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕು ಎಂದರು.
ಮುಚ್ಚಳಿಕೆ ಬರೆಸಿಕೊಳ್ಳಲು ಸೂಚನೆ
ಸಾರ್ವಜನಿಕ ಗಣೇಶೋತ್ಸವ ಸಮಿತಿಗಳಿಗೆ ಅನುಮತಿ ನೀಡುವಾಗ ಪಿಓಪಿ ಗಣಪತಿ ಪೂಜಿಸಿ, ವಿಸರ್ಜಿಸುವುದಿಲ್ಲ, ಶಬ್ದ ಮಾಲಿನ್ಯ, ವಾಯು ಮಾಲಿನ್ಯಉಂಟು ಮಾಡುವ ಪಟಾಕಿ ಸಿಡಿಸುವುದಿಲ್ಲ ಎಂದು ಮುಚ್ಚಳಿಕೆ ಬರೆಸಿಕೊಳ್ಳಿ ಎಂದು ಈಶ್ವರ ಖಂಡ್ರೆ ಸಲಹೆ ಮಾಡಿದರು.
ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪರಿಸರ ಸ್ನೇಹಿ ಗಣಪತಿ ಕೂರಿಸಿ, ಪೂಜಿಸಿ ಮಾದರಿಯಾಗುವ 3 ಗಣೇಶೋತ್ಸವ ಸಮಿತಿಗಳಿಗೆ ಪ್ರಶಸ್ತಿ ಪತ್ರ, ಬಹುಮಾನ ನೀಡುವ ಮತ್ತು ಮಣ್ಣಿನ ಗಣಪತಿ ಮಾಡುವವರಿಂದ ಶಾಲಾ, ಕಾಲೇಜು ಮಕ್ಕಳಿಗೆ ಹಾಗೂ ಯುವಕರಿಗೆ ತರಬೇತಿ ಕೊಡಿಸುವ ಯೋಜನೆ ಜಾರಿಗೆ ತರಬೇಕು ಎನ್ನುವ ಸಲಹೆಯನ್ನು ನೀಡಿದರು.
ಗಜ ಮುಖ ಗಣಪನ ಪೂಜಿಸಿ ಜಲ ಚರಗಳ ಸಾವಿಗೆ ಕಾರಣವಾಗುವುದು ಎಷ್ಟು ಸರಿ?
ಗಜಮುಖ ಗಣಪನ ಪೂಜಿಸಿ, ಜಲಚರಗಳ ಸಾವಿಗೆ ಕಾರಣವಾಗುವುದು ಎಷ್ಟು ಸರಿ ಎಂದು ಪ್ರಶ್ನಿಸಿದ ಈಶ್ವರ ಖಂಡ್ರೆ, ಜೇಡಿ ಮಣ್ಣಿನಿಂದ ತಯಾರಿಸಿದ ಗೌರಿ- ಗಣಪತಿಯನ್ನೇ ಪೂಜೆ ಮಾಡಬೇಕು. ಪರಿಸರ ಉಳಿಸಬೇಕು. ಎಷ್ಟೇ ಕಾನೂನು ಇದ್ದರೂ, ಜನ ಜಾಗೃತಿ ಮೂಡಿಸಿದಾಗ ಮಾತ್ರ ಇದು ಯಶಸ್ಸು ಕಾಣುತ್ತದೆ. ಈ ನಿಟ್ಟಿನಲ್ಲಿ ವಿವಿಧ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘಗಳ ವಾಟ್ಸ್ ಅಪ್ ಗ್ರೂಪ್ ಗಳಲ್ಲಿ ಸಂದೇಶ ಕಳುಹಿಸಿ, ಕಸ ಸಾಗಿಸುವ ವಾಹನಗಳಲ್ಲಿ ಧ್ವನಿ ಪ್ರಚಾರ (ಜಿಂಗಲ್) ಹಾಕುವ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಬೆಂಗಳೂರಿನಲ್ಲಿ 50 ರಿಂದ 1000ಕ್ಕೂ ಹೆಚ್ಚು ಮನೆಗಳಿರುವ ಸಮುಚ್ಛಯಗಳೂ ಇವೆ. ಈ ಸಮುಚ್ಛಯಗಳಲ್ಲಿ ಪಿಓಪಿ ಗಣೇಶ ಮೂರ್ತಿ ನಿಷೇಧಿಸುವಂತೆ ಅಲ್ಲಿನ ಸಂಘಟನೆಗಳಿಗೆ ತಿಳಿಸಿ ಎಂದೂ ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಬೆಂಗಳೂರಿನಲ್ಲಿ ಲಕ್ಷಾಂತರ ಪಿಓಪಿ ಗಣೇಶ ಮೂರ್ತಿ ತಯಾರಿಸುತ್ತಿದ್ದ ಘಟಕದ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ತಿಳಿಸಿದ ಅವರು, ಹಸಿರು ನ್ಯಾಯಮಂಡಳಿ (ಪ್ರಧಾನ ಪೀಠ)ಯು ಪಿಓಪಿ ಮತ್ತು ಬಣ್ಣ ಲೇಪಿತ ಗಣಪತಿ ವಿಸರ್ಜನೆಯಿಂದ ಜಲ ಮೂಲಗಳು ಕಲುಷಿತವಾಗುತ್ತಿದ್ದು, ಜಲ (ಮಾಲಿನ್ಯ ನಿಯಂತ್ರಣ)ಕಾಯಿದೆ ಕಂ 33 (ಎ) ಅಡಿಯಲ್ಲಿ ಕ್ರಮ ಜರುಗಿಸಲು ಸೂಚಿಸಿದೆ. ಹೀಗಾಗಿ ಸರ್ಕಾರ 2023ರ ಸೆಪ್ಟೆಂಬರ್ 15ರಂದು ಈ ಆದೇಶ ಹೊರಡಿಸಿದೆ.
ಪಟಾಕಿಗೂ ಕಡಿವಾಣ
ಸರ್ವೋನ್ನತ ನ್ಯಾಯಾಲಯ 31.10.2010 ಮತ್ತು 23.10.2018ರ ತನ್ನ ಆದೇಶದಲ್ಲಿ ರಾತ್ರಿ 8ರಿಂದ 10ಗಂಟೆಯೊಳಗೆ ಮಾತ್ರ ಪಟಾಕಿ ಸಿಡಿಸಲು, 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಹೊರಹೊಮ್ಮುವ ಮತ್ತು ಸರ ಪಟಾಕಿ ಹಚ್ಚುವುದನ್ನು ನಿಷೇಧಿಸಲು ನಿರ್ದೇಶನ ನೀಡಿದೆ. ಹೀಗಾಗಿ ಪಟಾಕಿ ಮಾರಾಟ ಮಳಿಗೆ ತೆರೆಯುವವರಿಗೆ ಕಡ್ಡಾಯವಾಗಿ ಹಸಿರು ಪಟಾಕಿ ಮಾತ್ರ ಮಾರುವುದಾಗಿ ಮುಚ್ಚಳಿಕೆ ಬರೆಸಿಕೊಂಡು ಮಾರಾಟಕ್ಕೆ ಅನುಮತಿ ನೀಡಲು ಸೂಚಿಸಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications