ಬೆನ್ನಿಹಿನ್ ಬೆಂಗಳೂರಿಗೆ ಬರುತ್ತಿಲ್ಲ: ಇದು ಅಧಿಕೃತ

'ಸ್ವತಃ ಬೆನ್ ಹಿನ್ ತನ್ನ ಬೆಂಗಳೂರು ಭೇಟಿಯನ್ನು ರದ್ದುಪಡಿಸಿದ್ದಾರೆ' ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕಾನೂನು ಸುವ್ಯವಸ್ಥೆ) ಕಮಲ್ ಪಂತ್ ಅವರನ್ನು ಉಲ್ಲೇಖಿಸಿ ibnlive ರಾಷ್ಟ್ರೀಯ ಟಿವಿ ಚಾನೆಲ್ ಸ್ಪಷ್ಟಪಡಿಸಿದೆ.
ಆದಾಗ್ಯೂ, ನಾಳೆ ಬುಧವಾರದಿಂದ ನಡೆಯುವ ಸಾಮೂಹಿಕ ಪ್ರಾರ್ಥನೆ ಸಮಾರಂಭ ಅಬಾಧಿತವಾಗಿ ನಡೆಯಲಿದೆ. ಆದರೆ ಬೆನ್ ಹಿನ್ ಅನುಪಸ್ಥಿತಿ ಎದ್ದುಕಾಣಲಿದೆ ಎಂದು ವರದಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ಇದೇ ನಾಳೆ ಬುಧವಾರ 15 ರಿಂದ 19ರವರಿಗೆ ನಗರದ ಯಲಹಂಕ ಸಮೀಪದಲ್ಲಿ ಕ್ರೈಸ್ತ ಧರ್ಮಗುರು ಬೆನ್ ಹಿನ್ ಸಾಮೂಹಿಕ ಚಿಕಿತ್ಸೆ/ಪ್ರಾರ್ಥನೆ ಸಮಾರಂಭವನ್ನು ಹಮ್ಮಿಕೊಂಡಿದ್ದರು. ಈ ಸಮಾರಂಭವನ್ನು ಕ್ರೈಸ್ತ ಧರ್ಮದ ಪ್ರಚಾರ ಹಾಗೂ ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವುದಕ್ಕಾಗಿ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ತಡೆ ನೀಡಬೇಕು ಎಂದು ಅನೇಕ ಸಂಘಟನೆಗಳು ಒತ್ತಾಯ ಮಾಡಿದ್ದವು.
ಭಾರತೀಯ ಜನತಾ ಪಾರ್ಟಿ ಸೇರಿದಂತೆ ಅನೇಕ ಬಲಪಂಥೀಯ ಸಂಘಟನೆಗಳು ಸ್ವಯಂಘೋಷಿತ ಪವಾಡಪುರುಷನು ಸಾಮೂಹಿಕ ಚಿಕಿತ್ಸೆ/ಪ್ರಾರ್ಥನೆ ಸಮಾರಂಭವನ್ನು ಮತಾಂತರಕ್ಕೆ ರಹದಾರಿಯಾಗಿ ಬಳಸಿಕೊಳ್ಳುತ್ತಿದ್ದಾನೆ ಎಂದು ಆರೋಪಿಸಿ, ಬೆನ್ ಹಿನ್ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದ್ದವು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications