ಸಾಮಾಜಿಕ ಜಾಲ ತಾಣ ಬಳಕೆ: ಪೊಲೀಸ್ ಇಲಾಖೆ ನೀಡಿದ ಎಚ್ಚರಿಕೆ

ಸಾಮಾಜಿಕ ಜಾಲತಾಣದ ಮೂಲಕ ಸಮಾಜದ ಸ್ವಾಸ್ಥ್ಯ ಹಾಳುಮಾಡುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸುಮೋಟೋ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಪೊಲೀಸ್ ಇಲಾಖೆ ನಿರ್ಧರಿಸಿದೆ.

ಬೆಂಗಳೂರು, ಫೆ 23: ಸೈಬರ್ ಕ್ರೈಂ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈಗಿರುವ ಸ್ವಯಂಪ್ರೇರಿತ (ಸುಮೋಟೋ) ದೂರು ದಾಖಲಿಸಿಕೊಳ್ಳುವ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಪೊಲೀಸ್ ಇಲಾಖೆ ನಿರ್ಧರಿಸಿದೆ.

ಪ್ರಮುಖವಾಗಿ ಫೇಸ್ ಬುಕ್, ಟ್ವಿಟ್ಟರ್ ಮತ್ತು ವಾಟ್ಸಾಪ್ ಅನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಜೊತೆಗೆ, ಪ್ರತೀ ಠಾಣೆಯಲ್ಲಿನ ಸಿಬ್ಬಂದಿಗಳಿಗೆ ಸೈಬರ್ ಕ್ರೈಂ ವಿಚಾರದಲ್ಲಿ ಹೆಚ್ಚಿನ ತರಬೇತಿ ನೀಡಲು ಪೊಲೀಸ್ ಇಲಾಖೆ ಮುಂದಾಗಿದೆ. (ಬೆಂಗಳೂರಲ್ಲಿ ಸೈಬರ್ ಕ್ರೈಂ ಠಾಣೆ)

Misuse of social media: Police department effectively follow sumoto

ಸಾಮಾಜಿಕ ಜಾಲತಾಣ ಇತ್ತೀಚಿನ ದಿನಗಳಲ್ಲಿ ಪ್ರಭಲ ಮಾಧ್ಯವಾಗಿ ಹೊರಹೊಮ್ಮುತ್ತಿದೆ. ಈ ಮಾಧ್ಯಮಗಳ ಮೂಲಕ ಸಮಾಜದ ಸ್ವಾಸ್ಥ್ಯ ಹಾಳುಮಾಡುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸುಮೋಟೋ ವ್ಯವಸ್ಥೆಯನ್ನು ಬಳಸಿಕೊಂಡು ಅಪರಾಧದ ಸಂಖ್ಯೆಯನ್ನು ಇಳಿಮುಖ ಮಾಡುವ ಉದ್ದೇಶವನ್ನು ಪೊಲೀಸ್ ಇಲಾಖೆ ಹೊಂದಿದೆ.

ಅಸಂಬದ್ದವಾಗಿ ಸ್ಟೇಟಸ್ ಹಾಕುವುದು, ಅದನ್ನು ಶೇರ್ ಮಾಡುವುದು ಮತ್ತು ಲೈಕ್ ಮಾಡುವುದು ಕೂಡಾ ಸುಮೋಟೋ ವ್ಯವಸ್ಥೆಯಲ್ಲಿ ಬರಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಸಾಮಾಜಿಕ ಜಾಲತಾಣದಿಂದ ತೊಂದರೆ ಅನುಭವಿಸಿದವರು ಖುದ್ದು ಠಾಣೆಗೆ ಬಂದು ದೂರು ನೀಡುವ ಅವಶ್ಯಕತೆಯಿಲ್ಲ, ಇಮೇಲ್ ಮೂಲಕ ಕೂಡಾ ದೂರು ನೀಡಬಹುದು ಎಂದು ಇಲಾಖೆ ತಿಳಿಸಿದೆ. ಆದರೆ ದೂರಿನ ಅನ್ವಯ ಅವಶ್ಯಕತೆ ಬಿದ್ದಲ್ಲಿ ಪೊಲೀಸ್ ವಿಚಾರಣೆಯ ವೇಳೆ ಸಹಕರಿಸಬೇಕಾಗುತ್ತದೆ ಎಂದು ಪೊಲೀಸ್ ಮಹಾನಿರ್ದೇಶಕ ಆರ್ ಕೆ ದತ್ತ ಹೇಳಿದ್ದಾರೆ.

ಮನಸ್ಸಿಗೆ ತೋಚಿದಂತೆ ಸ್ಟೇಟಸ್ ಹಾಕುವುದು, ಅದನ್ನು ಶೇರ್ ಮತ್ತು ಲೈಕ್ ಮಾಡುವುದೂ ಅಪರಾಧವೆಂದು ಪರಿಗಣಿಸಲಾಗುವುದು. ಅಲ್ಲದೇ, ಸಾಮಾಜಿಕ ಜಾಲತಾಣದ ಅಕೌಂಟನ್ನೂ ರದ್ದು ಪಡಿಸುವ ಸಾಧ್ಯತೆಯೂ ಇದೆ ಎಂದು ದತ್ತ ಎಚ್ಚರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+