ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಣಪತಿ ಆತ್ಮಹತ್ಯೆ : ಎಫ್‌ಐಆರ್ ರದ್ದುಕೋರಿ ಸಲ್ಲಿಸಿದ್ದ ಅರ್ಜಿ ವಾಪಸ್

|
Google Oneindia Kannada News

ಕರ್ನಾಟಕ, ಜುಲೈ 28 : ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದ ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಾಂತಿ ಮತ್ತು ಎ.ಎಂ.ಪ್ರಸಾದ್ ಅವರು ತಮ್ಮ ಅರ್ಜಿಯನ್ನು ವಾಪಸ್ ಪಡೆದರು. ಕೋರ್ಟ್ ಸೂಚನೆ ಹಿನ್ನಲೆಯಲ್ಲಿ ಅರ್ಜಿಯನ್ನು ವಾಪಸ್ ಪಡೆಯಲಾಗಿದೆ.

ಗುರುವಾರ ನ್ಯಾಯಮೂರ್ತಿ ಆನಂದ್ ಬೈರಾರೆಡ್ಡಿ ಅವರ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ನ್ಯಾಯಮೂರ್ತಿಗಳು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದರು ಮತ್ತು ಅರ್ಜಿ ವಾಪಸ್ ಪಡೆಯುವಂತೆ ಸೂಚಿಸಿದರು. ಆದ್ದರಿಂದ, ಇಬ್ಬರೂ ಅಧಿಕಾರಿಗಳು ತಮ್ಮ ಅರ್ಜಿಯನ್ನು ವಾಪಸ್ ಪಡೆದರು.[ವಿಡಿಯೋ - ಡಿವೈಎಸ್ ಪಿ ಗಣಪತಿ ಕಡೇ ಸಂದರ್ಶನ]

ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಡಿಕೇರಿ ಜೆಎಂಎಫ್‌ಸಿ ಕೋರ್ಟ್ ಇಬ್ಬರೂ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲು ಆದೇಶ ನೀಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.[ಗಣಪತಿ ಸಾವಿನ ಪ್ರಕರಣದ Timeline]

ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ತೆರಳಲಿದ್ದಾರೆ. ಕರ್ನಾಟಕ ಸರ್ಕಾರ ಲೋಕಾಯುಕ್ತ ಐಜಿಪಿ ಹುದ್ದೆಯಿಂದ ಅವರನ್ನು ಬಿಡುಗಡೆಗೊಳಿಸಿದೆ. ಎ.ಎಂ.ಪ್ರಸಾದ್ ಅವರನ್ನು ಬೆಂಗಳೂರು ನಗರ ಸಂಚಾರ ವಿಭಾಗ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ...[ಎಂ.ಕೆ.ಗಣಪತಿ ಆತ್ಮಹತ್ಯೆ, ಎಡಿಜಿಪಿ ಎ.ಎಂ.ಪ್ರಸಾದ್ ಹೇಳಿದ್ದೇನು?]

ಎಂ.ಕೆ.ಗಣಪತಿ ಏನು ಹೇಳಿದ್ದರು?

ಎಂ.ಕೆ.ಗಣಪತಿ ಏನು ಹೇಳಿದ್ದರು?

ಆತ್ಮಹತ್ಯೆಗೂ ಮುನ್ನ ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರು, 'ನನಗೆ ಮುಂದೆ ಏನಾದರೂ ಆದರೆ ಅದಕ್ಕೆ ಲೋಕಾಯುಕ್ತ ಐಜಿಪಿ ಪ್ರಣಬ್‌ ಮೊಹಾಂತಿ, ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಮತ್ತು ಸಚಿವ ಕೆ.ಜೆ.ಜಾರ್ಜ್ ಅವರೇ ಕಾರಣ' ಎಂದು ಹೇಳಿದ್ದರು.

ನೇಹಾಲ್ ಅವರು ಸಲ್ಲಿಸಿದ್ದ ಅರ್ಜಿ

ನೇಹಾಲ್ ಅವರು ಸಲ್ಲಿಸಿದ್ದ ಅರ್ಜಿ

ಎಂ.ಕೆ.ಗಣಪತಿ ಅವರ ಪುತ್ರ ನೇಹಾಲ್ ಅವರು ಮಡಿಕೇರಿ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಾಂತಿ ಮತ್ತು ಎ.ಎಂ.ಪ್ರಸಾದ್ ಅವರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲು ಆದೇಶ ನೀಡಬೇಕು ಎಂದು ಕೋರಿದ್ದರು. ಅರ್ಜಿಯನ್ನು ಪರಿಗಣಿಸಿದ ಕೋರ್ಟ್ ಎಫ್‌ಐಆರ್ ದಾಖಲು ಮಾಡಲು ಸೂಚಿಸಿತ್ತು.

ಅರ್ಜಿಯಲ್ಲಿ ಏನಿತ್ತು?

ಅರ್ಜಿಯಲ್ಲಿ ಏನಿತ್ತು?

ಇಬ್ಬರು ಐಪಿಎಸ್ ಅಧಿಕಾರಿಗಳು ತಮ್ಮ ಅರ್ಜಿಯಲ್ಲಿ ನೇಹಾಲ್ ಅವರು ಮಡಿಕೇರಿ ಕೋರ್ಟ್‌ನಲ್ಲಿ ಖಾಸಗಿ ದೂರು ದಾಖಲಿಸುವ ಮೊದಲು ಸಕ್ಷಮ ಪ್ರಾಧಿಕಾರದ ಒಪ್ಪಿಗೆ ಪಡೆದಿಲ್ಲ. ತಮ್ಮ ವಿರುದ್ಧದ ಆರೋಪಗಳಿಗೆ ಸಮರ್ಪಕವಾದ ಸಾಕ್ಷಿಗಳಿಲ್ಲ. ಆತ್ಮಹತ್ಯೆ ಪ್ರಕರಣದ ಬಗ್ಗೆ ಸರ್ಕಾರ ಈಗಾಗಲೇ ಸಿಐಡಿ ಮತ್ತು ನ್ಯಾಯಾಂಗ ತನಿಖೆಗೆ ಆದೇಶ ನೀಡಿದೆ. ಆದ್ದರಿಂದ ಮತ್ತೊಂದು ಎಫ್‌ಐಆರ್ ದಾಖಲು ಮಾಡಲು ನೀಡಿದ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೋರಿದ್ದರು.

ಕೆ.ಜೆ.ಜಾರ್ಜ್ ಅವರ ವಿರುದ್ಧವೂ ಎಫ್‌ಐಆರ್

ಕೆ.ಜೆ.ಜಾರ್ಜ್ ಅವರ ವಿರುದ್ಧವೂ ಎಫ್‌ಐಆರ್

ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ.ಜಾರ್ಜ್ ಅವರ ವಿರುದ್ಧವೂ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ದಾಖಲಾದ ಬಳಿಕ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ, ಅವರು ಎಫ್‌ಐಆರ್ ರದ್ದು ಕೋರಿ ಮೇಲ್ಮನವಿ ಸಲ್ಲಿಸಿಲ್ಲ.

ಸಿಐಡಿ ಮತ್ತು ನ್ಯಾಯಾಂಗ ತನಿಖೆ

ಸಿಐಡಿ ಮತ್ತು ನ್ಯಾಯಾಂಗ ತನಿಖೆ

ಜುಲೈ 7ರಂದು ಮಂಗಳೂರು ಐಜಿ ಕಚೇರಿಯ (ಪಶ್ಚಿಮ ವಲಯ) ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರು ಮಡಿಕೇರಿಯ ವಿನಾಯಕ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸರ್ಕಾರ ಮೊದಲು ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ನಂತರ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ.

English summary
IPS officer A.M.Prasad and Pranab Mohanty withdraw petition in Karnataka High Court on July 28, 2016. Officers moved court after Madikeri JMFC court has ordered the Madikeri town police to register FIR against them in connection with the DySP MK Ganapati suicide case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X