ನ್ಯಾಯಾಂಗ ತನಿಖೆಗೆ ಪ್ರತಿಪಕ್ಷಗಳ ವಿರೋಧವೇಕೆ?

Posted By:
Subscribe to Oneindia Kannada

ಬೆಂಗಳೂರು, ಜುಲೈ 14 : ಡಿವೈಎಸ್‌ಪಿ ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಆದರೆ, ಪ್ರತಿಪಕ್ಷಗಳು ಇದನ್ನು ವಿರೋಧಿಸುತ್ತಿದ್ದು, ಸಿಬಿಐ ತನಿಖೆಗೆ ಒತ್ತಾಯಿಸುತ್ತಿವೆ. [ಸಿಐಡಿ ಮತ್ತು ನ್ಯಾಯಾಂಗ ತನಿಖೆಯ ನಡುವಿನ ವ್ಯತ್ಯಾಸವೇನು?]

ಎಂ.ಕೆ.ಗಣಪತಿ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಮೊದಲು ಸಿಐಡಿಗೆ ವಹಿಸಲಾಗಿತ್ತು. ಆದರೆ, ಪ್ರತಿಪಕ್ಷಗಳು ಸಿಬಿಐ ತನಿಖೆಗೆ ಪಟ್ಟು ಹಿಡಿದು ಧರಣಿ ಕುಳಿತಿವೆ. ಆದ್ದರಿಂದ, ಬುಧವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. [ಗಣಪತಿ ಆತ್ಮಹತ್ಯೆ ಬಗ್ಗೆ ನ್ಯಾಯಾಂಗ ತನಿಖೆ]

bjp protest

ವಿರೋಧವೇಕೆ?: ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಯಲಿದ್ದು, ತನಿಖೆಯನ್ನು ಪೂರ್ಣಗೊಳಿಸಲು ಸರ್ಕಾರ ಆರು ತಿಂಗಳ ಗಡುವು ನೀಡಿದೆ. ಸರ್ಕಾರ ಸೂಚಿಸುವ ನಿವೃತ್ತ ನ್ಯಾಯಮೂರ್ತಿಗಳು ಈ ತನಿಖೆಯನ್ನು ಕೈಗೊಳ್ಳಲಿದ್ದಾರೆ. [ಗಣಪತಿ ಆತ್ಮಹತ್ಯೆ, ಸಚಿವ ಜಾರ್ಜ್ ಹೇಳುವುದೇನು?]

ಸಾಮಾನ್ಯವಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೂಚಿಸುವ ನ್ಯಾಯಮೂರ್ತಿಗಳಿಂದ ತನಿಖೆಯಾಗಬೇಕು. ಸರ್ಕಾರ ಸೂಚಿಸುವವರಿಂದ ಅಲ್ಲ ಎಂಬುದು ಪ್ರತಿಪಕ್ಷಗಳ ವಾದ. ಅಲ್ಲದೇ ತನಿಖೆಗೆ ಆರು ತಿಂಗಳ ಕಾಲ ಅವಕಾಶ ನೀಡಿ ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ ಎಂದು ಪ್ರತಿಪಕ್ಷಗಳ ಆರೋಪವಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka government ordered for judicial probe on DySP MK Ganapathi suicide case. But BJP and JDS opposed this and demanding for CBI probe.
Please Wait while comments are loading...