ಎಂ.ಕೆ.ಗಣಪತಿ ಆತ್ಮಹತ್ಯೆ : ಡಿಸೆಂಬರ್‌ನಲ್ಲಿ ವರದಿ

Posted By: Gururaj
Subscribe to Oneindia Kannada
   ಎಂ.ಕೆ.ಗಣಪತಿ ಆತ್ಮಹತ್ಯೆ : ಡಿಸೆಂಬರ್‌ನಲ್ಲಿ ವರದಿ | Oneindia Kannada

   ಬೆಂಗಳೂರು, ನವೆಂಬರ್ 24 : ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ನಿವೃತ್ತ ನ್ಯಾ.ಕೆ.ಎನ್.ಕೇಶವನಾರಾಯಣ ಆಯೋಗ ಪೂರ್ಣಗೊಳಿಸಿದೆ. ಮತ್ತೊಂದು ಕಡೆ ಸುಪ್ರೀಂಕೋರ್ಟ್ ಆದೇಶದಂತೆ ಸಿಬಿಐ ಸಹ ತನಿಖೆಯನ್ನು ನಡೆಸುತ್ತಿದೆ.

   ಕರ್ನಾಟಕ ಸರ್ಕಾರ 2016ರ ಜುಲೈನಲ್ಲಿ ತಿಂಗಳಿನಲ್ಲಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಆಯೋಗವನ್ನು ರಚನೆ ಮಾಡಿತ್ತು. ಡಿಸೆಂಬರ್ ಅಂತ್ಯದಲ್ಲಿ ಆಯೋಗ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ ಮಾಡಲಿದೆ.

   ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

   MK Ganapati case, Judicial Commission to submit report on December

   ಆಯೋಗ ಎಂ.ಕೆ.ಗಣಪತಿ ಕುಟುಂಬ ಸದಸ್ಯರು, ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳು, ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು, ಎಫ್‌ಎಸ್‌ಎಲ್ ವಿಜ್ಞಾನಿಗಳು ಸೇರಿ 49 ಜನರ ಹೇಳಿಕೆಯನ್ನು ಆಯೋಗ ಸಂಗ್ರಹ ಮಾಡಿದೆ.

   ಡಿವೈಎಸ್ಪಿ ಗಣಪತಿ ಕೇಸ್: ತನಿಖೆ ತೀವ್ರಗೊಳಿಸಿದ ಸಿಬಿಐ

   ಗಣಪತಿ ಅವರ ಬಳಸುತ್ತಿದ್ದ ಫೋನ್, ಅವರು ಕೊನೆಯದಾಗಿ ನೀಡಿದ ಹೇಳಿಕೆ, ಮಡಿಕೇರಿ ವಿನಾಯಕ ಲಾಡ್ಜ್ ನ ಸಿಸಿಟಿವಿ ದೃಶ್ಯಾವಳಿಗಳು ಸೇರಿದಂತೆ ವಿವಿಧ ಸಾಕ್ಷಿಗಳನ್ನು ಆಯೋಗ ಸಂಗ್ರಹಿಸಿ ಪ್ರತ್ಯೇಕವಾದ ತನಿಖೆ ನಡೆಸಿದೆ.

   ಕೆ.ಜೆ.ಜಾರ್ಜ್ ವಿರುದ್ಧ ಸಿಬಿಐ ಎಫ್‌ಐಆರ್ : ಯಾರು, ಏನು ಹೇಳಿದರು?

   ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್‌ ಮೊಹಾಂತಿ ಹಾಗೂ ಎ.ಎಂ.ಪ್ರಸಾದ್‌ ಆರೋಪಿಗಳಾಗಿದ್ದಾರೆ. ಕರ್ನಾಟಕದ ಸರ್ಕಾರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ಸಚಿವರಿಗೆ ಕ್ಲೀನ್ ಚಿಟ್ ನೀಡಿತ್ತು.

   ಎಂ.ಕೆ.ಗಣಪತಿ ಆತ್ಮಹತ್ಯೆ ಅವರ ತಂದೆ ಕುಶಾಲಪ್ಪ ಅವರು ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ತನಿಖೆಗೆ ಆದೇಶ ನೀಡಿದೆ.

   ಮಂಗಳೂರಿನ ಐಜಿ ಕಚೇರಿಯಲ್ಲಿ ಡಿವೈಎಸ್‌ಪಿ ಆಗಿದ್ದ ಎಂ.ಕೆ.ಗಣಪತಿ ಅವರು ಜುಲೈ 7ರಂದು ಖಾಸಗಿ ಸುದ್ದಿವಾಹಿನಿಯ ಸಂದರ್ಶನದಲ್ಲಿ ಕೆ.ಜೆ.ಜಾರ್ಜ್ ಹಾಗೂ ಇಬ್ಬರು ಪೊಲೀಸ್ ಅಧಿಕಾರಿಗಳ ಹೆಸರು ಪ್ರಸ್ತಾಪಿಸಿದ್ದರು. ನಂತರ ಮಡಿಕೇರಿ ವಿನಾಯಕ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Justice (retired) K.S. Keshava Narayana Judicial Commission will submit report to Karnataka government on December. Government formed commission to probe the suicide case of DySP M.K.Ganapati. ಎಂ.ಕೆ.ಗಣಪತಿ ಆತ್ಮಹತ್ಯೆ : ಡಿಸೆಂಬರ್‌ನಲ್ಲಿ ವರದಿ

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ