'ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸರ್ಕಾರ ತನಿಖೆಯ ನಾಟಕ ಮಾಡಿದೆ'

Posted By: Gururaj
Subscribe to Oneindia Kannada

ಬೆಂಗಳೂರು, ಆಗಸ್ಟ್. 24 : 'ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.

ಗಣಪತಿ ಆತ್ಮಹತ್ಯೆಯ ಪ್ರಮುಖ ಸಾಕ್ಷಿಗಳ ನಾಶ? ಇಲ್ಲಿದೆ ಸ್ಫೋಟಕ ಮಾಹಿತಿ

ಗುರುವಾರ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಸಿಐಡಿ ತನಿಖೆಯಲ್ಲಿ ಲೋಪವಾಗಿರುವ ಹಿನ್ನಲೆಯಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದರು.

MK Ganapati suicide case : BS Yeddyurappa demands for CBI enquiry

'ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಾಕ್ಷಿಗಳನ್ನು ನಾಶ ಮಾಡಲಾಗಿದೆ. ಯಾರ ಸೂಚನೆಯಂತೆ ಸಾಕ್ಷಿಗಳನ್ನು ನಾಶ ಮಾಡಲಾಗಿದೆ? ಎಂದು ಸರ್ಕಾರ ಹೇಳಿಕೆ ನೀಡಬೇಕು. ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ವಹಿಸಬೇಕು' ಎಂದು ಆಗ್ರಹಿಸಿದರು.

ಗಣಪತಿ ಸಾವಿನ ಪ್ರಕರಣ: ಜಾರ್ಜ್ ಗೆ ಸುಪ್ರೀಂನಿಂದ ನೋಟಿಸ್

'ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಚು ನಡೆಸಿ ಸಾಕ್ಷಿಗಳನ್ನು ನಾಶ ಮಾಡಲಾಗಿದೆ. ಕೆಂಪಯ್ಯ ಅವರ ಕೈವಾಡ ಇದರಲ್ಲಿದೆ. ಅವರ ಸೂಚನೆಯಂತೆಯೇ ಫೋಟೋಗಳು, ದೂರವಾಣಿ ಕರೆಗಳ ಮಾಹಿತಿ ನಾಶ ಮಾಡಲಾಗಿದೆ' ಎಂದು ಆರೋಪಿಸಿದರು.

'ಸರ್ಕಾರ ಎಸಿಬಿ, ಸಿಐಡಿಗಳನ್ನು ಸಾಕ್ಷಿಗಳ ನಾಶಕ್ಕೆ ಹೇಗೆ ಬಳಸಿಕೊಳ್ಳುತ್ತಿದೆ ಎಂಬುದಕ್ಕೆ ಮತ್ತೊಂದು ಪುರಾವೆ ಸಿಕ್ಕಿದೆ. ಅನುಪಮಾ ಶೆಣೈ, ಕಲ್ಲಪ್ಪ ಹಂಡಿಭಾಗ್, ಡಿ.ಕೆ.ರವಿ ಮುಂತಾದ ಪ್ರಾಮಾಣಿಕ ಅಧಿಕಾರಿಗಳಿಗೆ ಉಸಿರು ಗಟ್ಟಿಸುವ ವಾತಾವರಣವನ್ನು ಸರ್ಕಾರ ನಿರ್ಮಾಣ ಮಾಡಿತ್ತು' ಎಂದು ದೂರಿದರು.

ಎಂ.ಕೆ.ಗಣಪತಿ ಆತ್ಮಹತ್ಯೆ : ಕೆ.ಜೆ.ಜಾರ್ಜ್‌ಗೆ ಕ್ಲೀನ್ ಚಿಟ್

'ರಾಜ್ಯ ಸರ್ಕಾರ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆಯ ನಾಟಕ ಮಾಡಿದೆ. ಸರ್ಕಾರ ತನ್ನ ಇಚ್ಛೆಗೆ ಬೇಕಾದಂತೆ ವರದಿ ಮಾಡಿಸಿರುವುದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಿಂದ ಬಹಿರಂಗವಾಗಿದೆ' ಎಂದರು.

'ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ದೂರು ಕೊಡುತ್ತೇನೆ. ಆಗಸ್ಟ್ 25ರಂದು ರಾಜನಾಥ್ ಸಿಂಗ್ ಭೇಟಿ ಮಾಡಲಾಗುವುದು' ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka BJP president BS Yeddyurappa demand for CBI enquiry on DYSP MK Ganapati suicide case.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ