ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯ ಒಕ್ಕಲಿಗರ ಸಂಘಕ್ಕೆ ನೂತನ ಆಡಳಿತಾಧಿಕಾರಿ ನೇಮಕ

|
Google Oneindia Kannada News

ಬೆಂಗಳೂರು, ಮಾರ್ಚ್ 02 : ರಾಜ್ಯ ಒಕ್ಕಲಿಗರ ಸಂಘದ ನೂತನ ಆಡಳಿತಾಧಿಕಾರಿಯಾಗಿ ಎಂ. ಕೆ. ಶಂಕರಲಿಂಗೇಗೌಡರನ್ನು ನೇಮಕ ಮಾಡಲಾಗಿದೆ. ಸಂಘಕ್ಕೆ ಚುನಾವಣೆ ನಡೆಸಿ ಆಡಳಿತ ಮಂಡಳಿಗೆ ಅಧಿಕಾರ ಹಸ್ತಾಂತರ ಮಾಡುವಂತೆ ಅವರಿಗೆ ಸೂಚನೆ ನೀಡಲಾಗಿದೆ.

ಕರ್ನಾಟಕ ಸರ್ಕಾರ ಫೆಬ್ರವರಿ 21ರಿಂದಲೇ ಜಾರಿಗೆ ಬರುವಂತೆ ನಿವೃತ್ತ ಐಎಎಸ್ ಅಧಿಕಾರಿ ಎಂ. ಕೆ. ಶಂಕರಲಿಂಗೇಗೌಡರನ್ನು ರಾಜ್ಯ ಒಕ್ಕಲಿಗರ ಸಂಘದ ಆಡಳಿತಾಧಿಕಾರಿಯಾಗಿ ನೇಮಿಸಿದೆ. ಮುಂದಿನ ಆರು ತಿಂಗಳ ಕಾಲ ಅವರ ಆಡಳಿತಾಧಿಕಾರಿಯಾಗಿರಲಿದ್ದಾರೆ.

ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಲು ಹೈಕೋರ್ಟ್ ಆದೇಶಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

ಸಂಘದ ಆಡಳಿತಾಧಿಕಾರಿಯಾಗಿದ್ದ ಎಚ್. ಎಸ್. ಅಶೋಕಾನಂದ ಅವರ ಅವಧಿ ಫೆಬ್ರವರಿ 20ಕ್ಕೆ ಅಂತ್ಯಗೊಂಡಿತ್ತು. ಸಂಘದಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಿ 6 ತಿಂಗಳಿನಲ್ಲಿ ಚುನಾವಣೆ ನಡೆಸಿ, ಅಧಿಕಾರವನ್ನು ಆಡಳಿತ ಮಂಡಳಿಗೆ ಹಸ್ತಾಂತರ ಮಾಡುವಂತೆ ನೂತನ ಆಡಳಿತಾಧಿಕಾರಿಗಳಿಗೆ ಸೂಚನೆ ಕೊಡಲಾಗಿದೆ.

ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡ ಪದಚ್ಯುತಿಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡ ಪದಚ್ಯುತಿ

MK Shankaralinge

ಎಚ್. ಎಸ್. ಅಶೋಕಾನಂದ 2018ರಿಂದ ಆಡಳಿತಾಧಿಕಾರಿಯಾಗಿದ್ದರು. ರಾಜ್ಯ ಸರ್ಕಾರ ಅವರ ಅವಧಿಯನ್ನು ವಿಸ್ತರಣೆ ಮಾಡಿತ್ತು. ಆದರೆ, ಸಂಘದ ಆಜೀವ ಸದಸ್ಯರಾದ ಎಚ್. ಜಿ. ಮಹೇಶ್ ಸರ್ಕಾರಕ್ಕೆ ಪತ್ರವೊಂದನ್ನು ಬರೆದಿದ್ದರು.

ಒಕ್ಕಲಿಗ-ದಲಿತ ಜಾತಿ ಸಮೀಕರಣ : ದೇವೇಗೌಡರ ಚಾಣಾಕ್ಷ ನಡೆ!ಒಕ್ಕಲಿಗ-ದಲಿತ ಜಾತಿ ಸಮೀಕರಣ : ದೇವೇಗೌಡರ ಚಾಣಾಕ್ಷ ನಡೆ!

ಆಡಳಿತಾಧಿಕಾರಿ ಒಂದೂವರೆ ವರ್ಷಗಳು ಕಳೆದರೂ ಚುನಾವಣೆ ನಡೆಸಿಲ್ಲ. ಸಂಘಕ್ಕೆ ಸರಿಯಾಗಿ ಬರುತ್ತಿಲ್ಲ. ಸರ್ಕಾರದ ಇಲಾಖೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡಿದ ಅಧಿಕಾರಿಯನ್ನು ನೇಮಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದರು.

ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ರಂಗರಾಜು ಎಂಬುವವರು ಸಂಘದ ಆಡಳಿತ ಕಚೇರಿಗೆ ಆಡಳಿತಾಧಿಕಾರಿ ಸರಿಯಾಗಿ ಬರುತ್ತಿಲ್ಲ. ಆಡಳಿತಾಧಿಕಾರಿಯನ್ನು ಬದಲಾವಣೆ ಮಾಡಿ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದರು.

English summary
Karnataka government appointed retired IAS officers M.K. Shankaralinge Gowda as administrator for the Vokkaligara Sangha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X