ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಿಂದ ಯತ್ನಾಳ್‌ ಸ್ಪರ್ಧೆ?; ಬಿಜೆಪಿ ಹೈಕಮಾಂಡ್ ಲೆಕ್ಕಾಚಾರವೇನು?

ಬೆಂಗಳೂರು,ಡಿಸೆಂಬರ್‌ 19: 2023 ರ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡು ಆರು ತಿಂಗಳ ಬಳಿಕ ಬಿಜೆಪಿ ಹೈಕಮಾಂಡ್‌ ವಿಜಯೇಂದ್ರ ಅವರನ್ನ ಆಯ್ಕೆ ಮಾಡಿರುವುದು ಬಿಜೆಪಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಸಿ ತುಪ್ಪದಂತಾಗಿದ್ದಾರೆ.

ಹೌದು, ಕರ್ನಾಟಕ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಸ್ಥಾನದ ಮೇಲೆ ಕಣ್ಣೀಟ್ಟಿದ ಯತ್ನಾಳ್‌ ಗೆ ಈ ಎರಡು ಸ್ಥಾನಗಳು ಕೈ ತಪ್ಪಿದ ಬಳಿಕ ಸ್ವಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ದ ಬಹಿರಂಗವಾಗಿ ಟೀಕೆ ಮಾಡುವ ಮೂಲಕ ಪಕ್ಷಕ್ಕೆ ಮುಜುಗರ ತಂದಿದ್ದಾರೆ. ಯತ್ನಾಳ್‌ ಅವರ ಸ್ವಪಕ್ಷ ನಾಯಕರಿಗೆ ನೇರವಾಗಿ ಕಿಡಿಕಾರಿದ್ದು, ಆಡಳಿತರೂಢ ಕಾಂಗ್ರೆಸ್‌ ಅಸ್ತ್ರವಾಗಿದೆ.

MLA Basanagouda Patil Yatnal Likely To Get Ticket In Lok Sabha Elections 2024

ರಾಜ್ಯದಲ್ಲಿ ಸರಿಯಾದ ಸ್ಥಾನ ಮಾನ ಸಿಗದ ಕಾರಣ ಬಂಡಾಯ ಎದ್ದಿರುವ ಬಸವನಗೌಡ ಪಾಟೀಲ್‌ ಯತ್ನಾಳ್ ಅವರನ್ನ ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್‌ ಚಿಂತನೆ ನಡೆಸಿದೆ ಎನ್ನಲಾಗಿದೆ. ಈಗಾಗಲೇ ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಯಾಗಿದ್ದು, ಯತ್ನಾಳ್‌ ಅವರನ್ನ ಸೈಲೆಂಟ್‌ ಮಾಡಲು ಬಿಜೆಪಿ ಹೈಕಮಾಂಡ್‌ ರಾಷ್ಟ್ರ ರಾಜಕಾರಣಕ್ಕೆ ಕರೆತರಲು ಮುಂದಾಗಿದೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಸವನಗೌಡ ಪಾಟೀಲ್‌ ಯತ್ನಾಳ್ ಅವರಿಗೆ ಟಿಕೆಟ್ ನೀಡುವ ಮೂಲಕ ಅವರ ಅಸಮಾಧಾನವನ್ನ ಶಮನಗೊಳಿಸಲು ಬಿಜೆಪಿ ಹೈಕಮಾಂಡ್ ಯೋಜಿಸಿದೆ ಎನ್ನುವ ಮಾತುಗಳು ಕೂಡ ರಾಜಕೀಯ ವಲಯದಲ್ಲಿ ಕೇಳಿಬಂದಿವೆ. ಈಗಾಗಲೇ 2023 ರ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆದ್ದಿರುವ ಕಾಂಗ್ರೆಸ್‌, ಮುಂದಿನ ಲೋಕಸಭಾ ಚುನಾವಣೆಯನ್ನ ಗೆಲ್ಲುವ ನಿಟ್ಟಿನಲ್ಲಿ ಭರ್ಜರಿ ಸಿದ್ದತೆ ನಡೆಸಿದ್ದು, ಇತ್ತ ಕಾಂಗ್ರೆಸ್‌ ಗೆ ಠಕ್ಕರ್‌ ಕೊಡಲು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮೂಲಕ ಗೆಲ್ಲುವಿನ ಲೆಕ್ಕಾಚಾರವನ್ನ ಹಾಕಿಕೊಂಡಿದೆ.

ಇತ್ತ ಬಿಜೆಪಿ ಹೈಕಮಾಂಡ್‌ ಒಂದೇ ಕಲ್ಲಿನಿಂದ ಎರಡು ಹಕ್ಕಿಗಳನ್ನ ಹೊಡೆಯುವ ನಿಟ್ಟಿನಲ್ಲಿ ಪ್ಲಾನ್‌ ನಡೆಸಿದೆ. ಯತ್ನಾಳ್‌ ಅವರ ಅಸಮಾಧಾನವನ್ನ ಶಮನಗೊಳಿಸಲು ಲೋಕಸಭಾ ಚುನಾವಣೆಗೆ ಕಣಕ್ಕಿಸುವ ತಂತ್ರಗಾರಿಕೆಯನ್ನ ನಡೆಸಿದ್ದು, ಅಭ್ಯರ್ಥಿಗಳ ಕೊರತೆ ಇರುವ ಕ್ಷೇತ್ರದಲ್ಲಿ ಹಿಂದು ಹುಲಿ ಯತ್ನಾಳ್‌ ಅವರನ್ನ ಕಣಕ್ಕಿಳಿಸಲು ಮಾಸ್ಟರ್‌ ಪ್ಲಾನ್‌ ಅನ್ನು ಬಿಜೆಪಿ ಹೈಕಮಾಂಡ್‌ ಹಾಕಿಕೊಂಡಿದೆ.

MLA Basanagouda Patil Yatnal Likely To Get Ticket In Lok Sabha Elections 2024

ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಈ ಬಾರೀ ಕಾಂಗ್ರೆಸ್‌ ನಿಂದ ಸತೀಶ್‌ ಜಾರಕಿಹೊಳಿ ಅವರನ್ನ ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ. ಹೀಗಾಗಿ ಬಿಜೆಪಿಯಿಂದ ಮಂಗಳ ಅಂಗಡಿ ಅವರನ್ನ ಕಣಕ್ಕಿಳಿಸಿದರೇ ಕ್ಷೇತ್ರವನ್ನ ಕಳೆದುಕೊಳ್ಳಬಹುದು ಎಂಬ ಆತಂಕದಿಂದಾಗಿ ಈ ಬಾರೀ ಬೆಳಗಾವಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನ ಕಣಕ್ಕಿಳಿಸಲು ಬಿಜೆಪಿ ಮೆಗಾ ಪ್ಲಾನ್‌ ಹಾಕಿಕೊಂಡಿದೆ ಎನ್ನಲಾಗಿದೆ.

ಇನ್ನೂ ಬೆಳಗಾವಿ ಲೋಕಸಭಾ ಕ್ಷೇತ್ರ ಅಥವಾ ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್‌ ಚಿಂತನೆ ನಡೆಸಿದೆ. ಬಾಗಲಕೋಟೆ ಕ್ಷೇತ್ರದ ಹಾಲಿ ಸಂಸದ ಬಿಜೆಪಿಯ ಗದ್ದಿಗೌಡರ್ ಪರ್ವತಗೌಡ ಚಂದನಗೌಡ ಅವರಿಗೆ ಈ ಬಾರೀ ಟಿಕೆಟ್‌ ನೀಡುವುದು ಅನುಮಾನ ಎಂದು ಹೇಳಲಾಗಿದ್ದು, ಈ ಕ್ಷೇತ್ರದಿಂದಲೂ ಟಿಕೆಟ್‌ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಒಟ್ನಲಿ ರಾಜ್ಯ ಬಿಜೆಪಿಯಲ್ಲಿ ಸೃಷ್ಟಿಯಾಗಿರುವ ಭಿನ್ನಮತವನ್ನ ಶಮನಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಮಾಸ್ಟರ್‌ ಪ್ಲಾನ್‌ ಹಾಕಿಕೊಂಡಿದೆ. ಒಂದು ಕಡೆ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರ ಅಸಮಾಧಾನವನ್ನ ಶಮನಗೊಳಿಸಿ, ಲೋಕಸಭಾ ಕ್ಷೇತ್ರವನ್ನ ಗೆದ್ದುಕೊಂಡು ಬರುವಂತಹ ಟಾಸ್ಟ್‌ ಅನ್ನ ಹೈಕಮಾಂಡ್‌ ಮಾಡಲು ಮುಂದಾಗಿದೆ. ಹೀಗಾಗಿ ಹಾಲಿ ಸಂಸದರ ಜೊತೆಗೆ ಬಿಜೆಪಿ ಹೈಕಮಾಂಡ್‌ ದೆಹಲಿಗೆ ಬರುವಂತೆ ಬುಲಾವ್‌ ನೀಡಿದ್ದು, ಲೋಕಸಭಾ ಚುನಾವಣೆ ವಿಚಾರವಾಗಿ ಚರ್ಚೆಯಾಗಿದೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+