45 ರೂ ಮಾಸ್ಕ್ ನ 485 ರೂಪಾಯಿ ಬಿಲ್ ಹಾಕಿ ಲೂಟಿ ಮಾಡಿದ ಯಡಿಯೂರಪ್ಪ ಸರ್ಕಾರ: ಅಂಕಿ ಅಂಶಗಳನ್ನ ಮುಂದಿಟ್ಟು ಯತ್ನಾಳ್
ಬೆಂಗಳೂರು,ಡಿಸೆಂಬರ್ 27: ಲಿಂಗಾಯತ ನಾಯಕ ಬಿ ಎಸ್ ಯಡಿಯೂರಪ್ಪ ಅವರು ಈ ಹಿಂದೆ ಮುಖ್ಯಮಂತ್ರಿಯಾದ ಸಂದರ್ಭದಲ್ಲೂ ಸಹ ಬಿಎಸ್ವೈ ವಿರುದ್ಧ ಸರಣಿ ವಾಗ್ದಾಳಿ ನಡೆಸಿದ್ದ ಬಸವನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ.
ಬಿ ಎಸ್ ಯಡಿಯೂರಪ್ಪ ಅವರು ಈ ಹಿಂದೆ ಕೊರೋನಾ ಅವಧಿಯಲ್ಲಿ 45 ರೂಪಾಯಿ ಮಾಸ್ಕ್ ನ 485 ರೂಪಾಯಿ ಬಿಲ್ ಹಾಕಿ ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನನ್ನನ್ನು ಪಕ್ಷದಿಂದ ಉಚ್ಚಾಟಿಸಿದ್ರೆ 40 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ದಾಖಲೆ ರಿಲೀಸ್ ಮಾಡುತ್ತೇನೆ ಎಂದು ಯತ್ನಾಳ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಸತ್ಯ ಹೇಳಿದರೆ ಎಲ್ಲರಿಗೂ ಭಯವಾಗುತ್ತದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ 40 ಸಾವಿರ ಕೋಟಿ ರೂಪಾಯಿಯ ಅವ್ಯವಹಾರ ನಡೆದಿದೆ. 45 ರೂಪಾಯಿ ಮಾಸ್ಕ್ ಗೆ 485 ರೂಪಾಯಿ ಬಿಲ್ ಹಾಕಿದ್ದಾರೆ. ಬೆಡ್‌ಗಳಿಗೆ ಒಂದು ದಿನಕ್ಕೆ 10 ಸಾವಿರ ರೂಪಾಯಿ ಬಾಡಿಗೆ ನೀಡಿದ್ದಾರೆ. ಖರೀದಿ ಮಾಡಿದ್ರೆ ಒಂದು ದಿನದ ಬಿಲ್ ನಲ್ಲಿ ಎರಡು ಬೆಡ್ ಬರ್ತಿದ್ದವು. ಮಾಸ್ಕ್, ಬೆಡ್‌ಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ನಮ್ಮ ಸರ್ಕಾರ ಇದ್ರೆ ಏನು ಆಯ್ತು? ಕಳ್ಳರು ಕಳ್ಳರೇ ಅಲ್ವಾ? ನನಗೆ ಆಸ್ಪತ್ರೆಯಲ್ಲಿ 5 ಲಕ್ಷ ರೂಪಾಯಿ ಬಿಲ್ ಹಾಕಿದರು. ಇನ್ನು ಬಡವರು ಏನು ಮಾಡಬೇಕು. ಕೊರೋನಾ ವೇಳೆ ಕೋಟಿ ಕೋಟಿ ಲೂಟಿ ಆಗಿದೆ ಎಂದು ತಮ್ಮದೇ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ನಾನು ಪ್ರಧಾನಿ ಮೋದಿ ಅವರಿಗಾಗಿ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ನನಗೆ ನೋಟಿಸ್ ಕೊಟ್ಟು ಪಕ್ಷದಿಂದ ಉಚ್ಚಾಟಿಸಿ ನೋಡಲಿ. ಆಗ ಇವರೆಲ್ಲರ ಬಣ್ಣ ಬಯಲು ಮಾಡುತ್ತೇನೆ ಎಂದು ಯತ್ನಾಳ್ ಸವಾಲು ಹಾಕಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications