ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು; ರಾಜೀನಾಮೆಗೆ ಮುಂದಾದ ಶಾಸಕರು: ಸಿದ್ದರಾಮಯ್ಯ ಹೇಳಿದ್ದೇನು?
ಬೆಂಗಳೂರು, ನವೆಂಬರ್ 29: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ವಂಚಿತರು ಹಾಗೂ ಸಚಿವರ, ಶಾಸಕರ ನಡುವಿನ ಅಸಮಾಧಾನದ ಕಿಚ್ಚು ಸ್ಪೋಟಗೊಂಡಿದ್ದು, ಶಾಸಕರು ರಾಜೀನಾಮೆಗೆ ಮುಂದಾಗಿರುವುದು ಕಾಂಗ್ರೆಸ್ ನಾಯಕರಿಗೆ ದೊಡ್ಡ ತಲೆನೋವಾಗಿದೆ.
ಹೌದು, ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕ ಅಸಮಾಧಾನ ಮತ್ತೆ ಭುಗಿಲೆದ್ದಿದೆ. ಈ ಹಿಂದೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆ ಬಸವರಾಜ ರಾಯರೆಡ್ಡಿ, ಬಿ ಕೆ ಹರಿಪ್ರಸಾದ್ ಸೇರಿದಂತೆ ಹಲವು ನಾಯಕರು ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ನಾಯಕರ ವಿರುದ್ದ ಅಸಮಾಧಾನಕ್ಕೆ ಹೊರಹಾಕಿದ್ದು, ರಾಜೀನಾಮೆಗೆ ಮುಂದಾಗುತ್ತಾರಾ ಎಂಬ ಮಾತುಗಳು ಕೇಳಿ ಬಂದಿತ್ತು. ಈ ಹಿಂದೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಆಳಂದ ಕಾಂಗ್ರೆಸ್ ಶಾಸಕ ಮತ್ತೆ ಸ್ವಪಕ್ಷ ಮತ್ತು ಸರ್ಕಾರ ಆಡಳಿತ ವಿರುದ್ಧ ಸಿಡಿದೆದ್ದಿದ್ದಾರೆ.

ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನಾನು ರಾಜೀನಾಮೆ ನೀಡುತ್ತೇನೆ ಎಂದು ಆಳಂದ ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್ ಹೇಳಿದ್ದು, ಲೋಕಸಭಾ ಚುನಾವಣಾ ಹೊತ್ತಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗೆ ದೊಡ್ಡ ಸವಾಲಾಗಿ ಪರಿಣಾಮಿಸಿದೆ. ಆಳಂದ ಕಾಂಗ್ರೆಸ್ಚ ಶಾಸಕ ಬಿ.ಆರ್. ಪಾಟೀಲ್ ಅವರು ಬಹಿರಂಗವಾಗಿಯೇ ಸಚಿವ ಐಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೇ ಈ ಸಂಬಂಧ ನೇರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ.
ಬಿಆರ್ ಪಾಟೀಲರ ಆಕ್ರೋಶಕ್ಕೆ ಕಾರಣವೇನು?
ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಿಂದ ಕಾಮಗಾರಿ ನಡೆಸಿದ್ದು, ಅದರ ಕುರಿತು ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ವಿರುದ್ಧ ಆಳಂದ ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್ ಆಕ್ರೋಶ ಹೊರ ಹಾಕಿದ್ದಾರೆ. ಕೆಆರ್‌ಐಡಿಎಲ್ ಕಾಮಗಾರಿಗಳನ್ನು ಲಂಚ ಪಡೆದು ನೀಡಿದ್ದೇನೆಂಬ ಆರೋಪ ಬಂದಿದೆ. ಇಂತಹ ಆರೋಪಗಳನ್ನು ಹೊತ್ತು ನಾನು ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ಕ್ಕೆ ಹಾಜರಾಗುವುದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನೂ ಆರೋಪಗಳನ್ನು ಹೊತ್ತು ಸದನಕ್ಕೆ ಬಂದರೆ ಆರೋಪ ಒಪ್ಪಿಕೊಂಡಂತಾಗುತ್ತದೆ. ಹೀಗಾಗಿ ನನ್ನ ವಿರುದ್ಧದ ಆರೋಪಗಳ ಸಂಬಂಧ ತನಿಖೆಯನ್ನು ನಡೆಸಿ, ಸತ್ಯಾಸತ್ಯತೆ ಹೊರ ಬರಲು ತನಿಖೆಗೆ ಆದೇಶ ನೀಡಿ. ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಪತ್ರದ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಕಳೆದ ವಿಧಾನಸಭೆಯ ವಿಷಯ ಪ್ರಸ್ತಾಪಿಸಿ ಪತ್ರ ಬರೆದಿರುವ ಆಳಂದ ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್, 2013ರಲ್ಲಿ ಕಾಮಗಾರಿಗಳನ್ನು ನಾನು ಕೆಆರ್‌ಐಡಿಎಲ್ ಸಂಸ್ಥೆಗೆ ನೀಡಿದ್ದೆ. ಕಾರಣಾಂತರಗಳಿಂದ 2013ರಲ್ಲಿ ನೀಡಿದ್ದ ಕಾಮಗಾರಿಗಳು ಪೂರ್ಣವಾಗಿಲ್ಲ. ಕಳೆದ ಅಧಿವೇಶನದಲ್ಲಿ ಪ್ರಸ್ತಾಪಿಸಿದಾಗ KRIDL ನಿಂದ ನಾನು ಲಂಚ ಪಡೆದು ಭೂಸೇನೆಗೆ ಕಾಮಗಾರಿ ಕೊಟ್ಟಿದ್ದೇನೆಂದು ನನ್ನನ್ನೇ ಅನುಮಾನದಿಂದ ನೋಡಿದರು. ಪ್ರಿಯಾಂಕ್ ಖರ್ಗೆ ಅನುಪಸ್ಥಿತಿಯಲ್ಲಿ ನನ್ನ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಅನುಮಾನ ಬರುವಂತೆ ಮಾತನಾಡಿದರು. ಅದಾದ ಮೇಲೂ ಕೂಡ ಪ್ರಿಯಾಂಕ ಖರ್ಗೆ ಕಾಮಗಾರಿಗಳ ಕುರಿತು ಸಭೆಯನ್ನು ನಡೆಸಲಿಲ್ಲ ಎಂದು ಅಸಮಾಧಾನಗೊಂಡಿದ್ದಾರೆ.
ಶಾಸಕ ಬಿ.ಆರ್. ಪಾಟೀಲ್ ರಿಂದ ಸಿಎಂ ಗೆ ಪತ್ರ: ಸಿದ್ದರಾಮಯ್ಯ ಹೇಳಿದ್ದೇನು?
ಕಳೆದ ಅಧಿವೇಶನದಲ್ಲಿ ಕೆ.ಆರ್.ಡಿ.ಐ.ಎಲ್ ನಿಂದ ಭೂ ಸೇನೆಗೆ ಕಾಮಗಾರಿ ನೀಡುವ ವಿಚಾರದಲ್ಲಿ ಸಚಿವರಿಂದ ಅವಮಾನವಾಗಿದೆ, ತನಿಖಾ ಸಂಸ್ಥೆಗೆ ಪ್ರಕರಣ ವಹಿಸದಿದ್ದರೆ ರಾಜೀನಾಮೆ ಕೊಡುವುದಾಗಿ ಮುಖ್ಯಮಂತ್ರಿಗಳಿಗೆ ಪತ್ರ ಶಾಸಕ ಬಿ ಆರ್ ಪಾಟೀಲ್ ಅವರು ಮುಖ್ಯಮಂತ್ರಿ ಗೆ ಪತ್ರ ಬರೆದಿದ್ದು, ಶಾಸಕ ಬಿ.ಆರ್. ಪಾಟೀಲ್ ಅವರು ಬರೆದಿರುವ ಪತ್ರ ನನ್ನ ಕೈಸೇರಿಲ್ಲ. ಬಂದ ಮೇಲೆ ನೋಡೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.












Click it and Unblock the Notifications