ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಶಾಸಕ ಸಿಬಿ ಸುರೇಶ್ ಬಾಬು ನೇಮಕ

ಬೆಂಗಳೂರು,ಜುಲೈ 15: ವಿಧಾನ ಮಂಡಲದ ಅಧಿವೇಶನ ಇಂದಿನಿಂದ (ಜುಲೈ 15) ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಬೇಕಿತ್ತು. ಹೀಗಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಹೆಚ್‌ ಡಿ ದೇವೇಗೌಡ್ರು ಹಾಗೂ ಹೆಚ್‌ ಡಿ ಕುಮಾರಸ್ವಾಮಿ ಪಕ್ಷದ ನಾಯಕರ ಜೊತೆಗೆ ಚರ್ಚೆ ನಡೆಸಿ ಶಾಸಕ ಸಿಬಿ ಸುರೇಶ್‌ ಬಾಬು ಅವರನ್ನ ಜೆಡಿಎಸ್‌ ಶಾಸಕಾಂಗ ಪಕ್ಷ ನಾಯಕರನ್ನಾಗಿ ನೇಮಕ ಮಾಡಲಾಗಿದೆ.

ಈ ಹಿಂದೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕನ ಜವಾಬ್ದಾರಿ ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಅವರ ಮೇಲಿದ್ದು, ದೇವೇಗೌಡರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಂಡು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಚಿಕ್ಕನಾಯಕನಹಳ್ಳಿ ಶಾಸಕ ಸಿಬಿ ಸುರೇಶ್ ಬಾಬು ನೇಮಕ ಮಾಡಲಾಗಿದೆ.

MLA CB Suresh Babu appointed as leader of JDS Legislative Party

ಕರ್ನಾಟಕ ವಿಧಾನ ಮಂಡಲದ ಮಳೆಗಾಲದ ಅಧಿವೇಶನ ಸೋಮವಾರದಿಂದ (ಜುಲೈ 15) ಆರಂಭವಾಗಿದ್ದು, ಜುಲೈ 15 ರಿಂದ ಜುಲೈ 26ರವರೆಗೆ ನಡೆಯಲಿದೆ. ಚನ್ನಪಟ್ಟಣದ ಶಾಸಕರಾಗಿದ್ದ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿದ್ದ ಎಚ್.ಡಿ.ಕುಮಾರಸ್ವಾಮಿಯವರು ಲೋಕಸಭಾ ಸದಸ್ಯರಾದ ಹಿನ್ನಲೆಯಲ್ಲಿ, ಅವರ ಸ್ಥಾನಕ್ಕೆ ನಾಯಕನ ಆಯ್ಕೆಯಾಗಬೇಕಿದೆ. ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನನ್ನ ಹೆಗಲ ಮೇಲಿದೆ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಜೊತೆ ಚರ್ಚಿಸಿ ಅಂತಿಮಗೊಳಿಸುವುದಾಗಿ ಕುಮಾರಸ್ವಾಮಿ ಹೇಳಿದ್ದರು. ಇದೀಗ ಶಾಸಕ ಸಿಬಿ ಸುರೇಶ್‌ ಬಾಬು ಅವರನ್ನ ಜೆಡಿಎಸ್‌ ಶಾಸಕಾಂಗ ಪಕ್ಷ ನಾಯಕರನ್ನಾಗಿ ನೇಮಕ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+