ಕರ್ನಾಟಕ ಸರ್ಕಾರಕ್ಕೆ ಬೆಂಬಲ ಘೋಷಿಸಿದ ಶಾಸಕ ಎಚ್.ನಾಗೇಶ್
ಬೆಂಗಳೂರು, ಫೆಬ್ರವರಿ 17 : ಅಚ್ಚರಿಯ ಬೆಳವಣಿಗೆಯಲ್ಲಿ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್.ನಾಗೇಶ್ ಕಾಂಗ್ರೆಸ್-ಜೆಡಿಎಸ್ ಸರ್ಕಾರಕ್ಕೆ ಬೆಂಬಲ ಘೋಷಣೆ ಮಾಡಿದ್ದಾರೆ. ಜನವರಿ 15ರಂದು ಬೆಂಬಲ ವಾಪಸ್ ಪಡೆಯುವುದಾಗಿ ಅವರು ಹೇಳಿದ್ದರು.
ಬುಧವಾರ ಸಂಜೆ ಶಾಸಕ ಎಚ್.ನಾಗೇಶ್ ಅವರು ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಎಚ್.ನಾಗೇಶ್ ಅವರು ಬಿಜೆಪಿ ಬೆಂಬಲಿಸಲಿದ್ದಾರೆ ಎಂಬ ಸುದ್ದಿಗಳಿಗೆ ಈ ಮೂಲಕ ತೆರೆ ಬಿದ್ದಿದೆ.
ಜನವರಿ 15ರಂದು ಮಾಧ್ಯಮಗಳ ಜೊತೆ ಮಾತನಾಡಿದ್ದ ಎಚ್.ನಾಗೇಶ್ ಅವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುತ್ತೇನೆ ಎಂದು ಹೇಳಿದ್ದರು. ಈ ಕುರಿತ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದರು.
2018ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಡಿ.ಕೆ.ಶಿವಕುಮಾರ್ ಅವರು ಎಚ್.ನಾಗೇಶ್ ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು. ಬಳಿಕ ಅವರು ಮೈತ್ರಿ ಸರ್ಕಾರ ರಚನೆಗೆ ಬೆಂಬಲ ನೀಡಿದ್ದರು....

ಸರ್ಕಾರಕ್ಕೆ ಬೆಂಬಲ ವಾಪಸ್
ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್.ನಾಗೇಶ್ ಅವರು ಜನವರಿ 15ರಂದು ಮಾಧ್ಯಮಗಳ ಜೊತೆ ಮಾತನಾಡಿ, 'ಉತ್ತಮ ಮತ್ತು ಸ್ಥಿರ ಸರ್ಕಾರ ನೀಡಲು ಮೈತ್ರಿ ಸರರ್ಕಾರಕ್ಕೆ ಬೆಂಬಲ ನೀಡಿದ್ದೆ. ಎರಡೂ ಪಕ್ಷಗಳ ನಡುವೆ ಸಮನ್ವಯತೆ ಇಲ್ಲ. ಆದ್ದರಿಂದ, ಬಿಜೆಪಿ ಜೊತೆ ಹೋಗಲು ನಿರ್ಧರಿಸಿದ್ದೇನೆ' ಎಂದು ಹೇಳಿದ್ದರು.

ಬೆಂಬಲ ಘೋಷಣೆ ಪತ್ರ
ಎಚ್.ನಾಗೇಶ್ ಮೈತ್ರಿ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುವುದಾಗಿ ಹೇಳಿದ್ದರು. ಈ ಕುರಿತ ಪತ್ರವನ್ನು ಸಹ ಸಿದ್ಧಪಡಿಸಿದ್ದರು. ಆದರೆ, ಅದನ್ನು ರಾಜ್ಯಪಾಲರಿಗೆ ನೀಡಿರಲಿಲ್ಲ. ಬುಧವಾರ ಅವರು ಯೂ ಟರ್ನ್ ತೆಗೆದುಕೊಂಡಿದ್ದು, ಸರ್ಕಾರ ಬೆಂಬಿಸುವುದಾಗಿ ಹೇಳಿದ್ದಾರೆ.

ಡಿ.ಕೆ.ಶಿವಕುಮಾರ್ ಸಂಧಾನ
ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಎಚ್.ನಾಗೇಶ್ ಅವರ ಮನವೊಲಿಸಿರುವ ಸಾಧ್ಯತೆ ಇದೆ. ಆದ್ದರಿಂದ, ಅವರು ಬುಧವಾರ ಮೈತ್ರಿ ಸರ್ಕಾರವನ್ನು ಬೆಂಬಲಿಸುತ್ತೇನೆ ಎಂದು ಹೇಳಿದ್ದಾರೆ.
ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬೆಂಬಲ ಪತ್ರವನ್ನು ನೀಡಿದ್ದಾರೆ.

ಡಿ.ಕೆ.ಶಿವಕುಮಾರ್ ಬೆಂಬಲಿಗರು
ಎಚ್.ನಾಗೇಶ್ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮುಳಬಾಗಿಲು ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದರು. 2018ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದಾಗ ಡಿ.ಕೆ.ಶಿವಕುಮಾರ್ ಅವರು ಎಚ್.ನಾಗೇಶ್ ಅವರನ್ನು ಕರೆದುಕೊಂಡು ಹೋಗಿದ್ದರು.

ಆರ್.ಶಂಕರ್ ಸಹ ಹೇಳಿದ್ದರು
ರಾಣೆಬೆನ್ನೂರು ಕ್ಷೇತ್ರದ ಕೆಪಿಜೆಪಿ ಶಾಸಕ ಆರ್.ಶಂಕರ್ ಅವರು ಸಹ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುವುದಾಗಿ ಹೇಳಿದ್ದರು. ಈ ಕುರಿತು ಪತ್ರವನ್ನು ಬಿಡುಗಡೆ ಮಾಡಿದ್ದರು. ಆದರೆ, ಅವರು ಈಗ ಮೌನಕ್ಕೆ ಶರಣಾಗಿದ್ದಾರೆ












Click it and Unblock the Notifications