ದೇವೇಗೌಡ, ಎಚ್ಡಿಕೆಗೆ ಇಕ್ಬಾಲ್ ಅನ್ಸಾರಿ ಬಹಿರಂಗ ಸವಾಲು!

Posted By:
Subscribe to Oneindia Kannada

ಕೊಪ್ಪಳ, ಫೆಬ್ರವರಿ 5 : ಜಮೀರ್ ಅಹಮದ್ ಖಾನ್ ಬಳಿಕ ಗಂಗಾವತಿ ಕ್ಷೇತ್ರದ ಜೆಡಿಎಸ್ ಶಾಸಕ ಇಕ್ಬಾಲ್ ಅನ್ಸಾರಿ ಅವರು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. 'ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ತಮ್ಮ ಬೆಂಬಲಿಗರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವುದಾಗಿ' ಘೋಷಿಸಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರ ವಿರುದ್ಧ ಆರೋಪಗಳನ್ನು ಮಾಡಿರುವ ಇಕ್ಬಾಲ್ ಅನ್ಸಾರಿ ಅವರು, 'ದೇವೇಗೌಡರು ತಮ್ಮ ವಿರುದ್ಧ ಯಾವುದೇ ಕ್ರಮಗಳನ್ನು ಬೇಕಾದರೂ ಕೈಗೊಳ್ಳಬಹುದು' ಎಂದು ಬಹಿರಂಗ ಸವಾಲು ಹಾಕಿದ್ದಾರೆ. ['ಜೆಡಿಎಸ್ ದೇವೇಗೌಡ ಕುಟುಂಬದ ಸ್ವಂತ ಬಸ್ ಇದ್ದಂತೆ']

'ಎಚ್.ಡಿ.ಕುಮಾರಸ್ವಾಮಿ ಅವರು ಅಲ್ಪಸಂಖ್ಯಾತ ನಾಯಕರನ್ನು ಮುಗಿಸಲು ಹುನ್ನಾರ ನಡೆಸಿದ್ದಾರೆ' ಎಂದು ಆರೋಪಿಸಿರುವ ಅನ್ಸಾರಿ ಅವರು, 'ಜೆಡಿಎಸ್ ಪಕ್ಷದೊಳಗಿನ ಭಿನ್ನಮತಕ್ಕೆ ಕುಮಾರಸ್ವಾಮಿ ಅವರೇ ನೇರವಾಗಿ ಹೊಣೆ' ಎಂದು ದೂರಿದ್ದಾರೆ. [ಜಮೀರ್ ಉಲ್ಟಾ ಹೊಡೆಯಲು ಕಾರಣ ಹೀಗೂ ಇರಬಹುದೇ?]

ಇಕ್ಬಾಲ್ ಅನ್ಸಾರಿ ಅವರ ಆರೋಪಗಳಿಗೆ ತಿರುಗೇಟು ನೀಡಿರುವ ಎಚ್.ಡಿ.ಕುಮಾರಸ್ವಾಮಿ ಅವರು, '4 ಜನರಿಂದ ಪಕ್ಷ ಉಳಿದಿಲ್ಲ. ಲಕ್ಷಾಂತರ ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ. ಅಸಮಾಧಾನಗೊಂಡವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸ್ವತಂತ್ರವಾಗಿ ಗೆದ್ದು ತೋರಿಸಲಿ' ಎಂದು ಸವಾಲು ಹಾಕಿದ್ದಾರೆ. ಅನ್ಸಾರಿ ಅವರು ಹೇಳಿದ್ದೇನು? ಚಿತ್ರಗಳಲ್ಲಿ ನೋಡಿ...

ನಾಯಕರ ವಿರುದ್ಧ ಸಿಡಿದೆದ್ದ ಅನ್ಸಾರಿ

ನಾಯಕರ ವಿರುದ್ಧ ಸಿಡಿದೆದ್ದ ಅನ್ಸಾರಿ

ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರ ಬಳಿಕ ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಅವರು ಪಕ್ಷದ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ. ಗುರುವಾರ ಕೊಪ್ಪಳದಲ್ಲಿ ಮಾತನಾಡಿದ ಅನ್ಸಾರಿ ಅವರು, ಪಕ್ಷದ ನಾಯಕರು ತಮ್ಮ ವಿರುದ್ಧ ಯಾವುದೇ ಕ್ರಮಗಳನ್ನು ಬೇಕಾದರೂ ಕೈಗೊಳ್ಳಲಿ ಎಂದು ಸವಾಲು ಹಾಕಿದ್ದಾರೆ.

ಬೆಂಬಲಿಗರು ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಾರೆ

ಬೆಂಬಲಿಗರು ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಾರೆ

'ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ನನ್ನ ಬೆಂಬಲಿಗರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಾರೆ. ಪಕ್ಷದ ಬಿಫಾರಂ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ನಾನು ಮಾತುಕತೆ ನಡೆಸಿದ್ದೇನೆ. ಬಿಫಾರಂ ದೊರೆಯದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಾರೆ' ಎಂದು ಅನ್ಸಾರಿ ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದೇನೆ

ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದೇನೆ

'ಲೋಕಸಭೆ, ವಿಧಾನಪರಿಷತ್ ಚುನಾವಣೆಯಲ್ಲಿ ನಾನು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದೇನೆ. ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿಯೂ ನೀಡುತ್ತೇನೆ. ಎಚ್.ಡಿ.ದೇವೇಗೌಡರು ನನ್ನ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳುತ್ತಿದ್ದಾರೆ. ಯಾವ ಕ್ರಮಗಳನ್ನು ಬೇಕಾದರೂ ಅವರು ಕೈಗೊಳ್ಳಲಿ' ಎಂದು ಅನ್ಸಾರಿ ಸವಾಲು ಹಾಕಿದರು.

'ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ'

'ನನಗೆ ಕ್ಷೇತ್ರದ ಅಭಿವೃದ್ಧಿ ಮುಖ್ಯ'

'ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದರೆ ಅವರು ಕ್ಷೇತ್ರದ ಅಭಿವೃದ್ಧಿಗೆ ಬೆಂಬಲ ನೀಡುತ್ತಾರೆ. ನನಗೆ ಮತ ಹಾಕಿರುವ ಜನರು ಕುಡಿಯುವ ನೀರು, ರಸ್ತೆ ಮುಂತಾದ ಸೌಲಭ್ಯಗಳನ್ನು ಕೇಳುತ್ತಾರೆ. ಅವುಗಳನ್ನು ನೀಡಲು ಅನುದಾನ ಬೇಕಾಗಿದೆ. ವಿರೋಧ ಪಕ್ಷದಲ್ಲಿ ಕುಳಿತುಕೊಂಡು ಐದು ವರ್ಷ ನಾನೇನು ಮಾಡಲಿ?' ಎಂದು ಅನ್ಸಾರಿ ಅವರು ಪ್ರಶ್ನಿಸಿದ್ದಾರೆ.

'ಅಲ್ಪಸಂಖ್ಯಾತರನ್ನು ಮುಗಿಸಲು ಹುನ್ನಾರ'

'ಅಲ್ಪಸಂಖ್ಯಾತರನ್ನು ಮುಗಿಸಲು ಹುನ್ನಾರ'

'ಜೆಡಿಎಸ್ ಪಕ್ಷದಲ್ಲಿನ ಭಿನ್ನಮತಗಳಿಗೆ ಎಚ್.ಡಿ.ಕುಮಾರಸ್ವಾಮಿ ಅವರೇ ಕಾರಣ. ಅಲ್ಪಸಂಖ್ಯಾತ ನಾಯಕರನ್ನು ಮುಗಿಸಲು ಅವರು ಸಂಚು ರೂಪಿಸಿದ್ದಾರೆ. ನನ್ನ ಮತ್ತು ಅವರ ನಡುವೆ ಭಾರೀ ಅಂತರ ಉಂಟಾಗಿದೆ' ಎಂದು ಅನ್ಸಾರಿ ಅವರು ಆರೋಪ ಮಾಡಿದ್ದಾರೆ.

ತಿರುಗೇಟು ನೀಡಿದ ಕುಮಾರಸ್ವಾಮಿ

ತಿರುಗೇಟು ನೀಡಿದ ಕುಮಾರಸ್ವಾಮಿ

ಇಕ್ಬಾಲ್ ಅನ್ಸಾರಿ ಅವರ ಆರೋಪಗಳಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. 'ಜೆಡಿಎಸ್ ಪಕ್ಷ ನಾಲ್ಕು ಜನರಿಂದ ಉಳಿದಿಲ್ಲ. ಲಕ್ಷಾಂತರ ಕಾರ್ಯಕರ್ತರಿಂದ ಉಳಿದಿದೆ. ನಮ್ಮ ಬಗ್ಗೆ ಆರೋಪ ಮಾಡುವವರು ಶಾಸಕ ಸ್ಥಾನಕ್ಕೆ ಸ್ವಯಂ ಪ್ರೇರಣೆಯಿಂದ ರಾಜೀನಾಮೆ ಕೊಟ್ಟು, ಸ್ವತಂತ್ರವಾಗಿ ಚುನಾವಣೆ ಎದುರಿಸಿ ಗೆಲುವು ಸಾಧಿಸಲಿ' ಎಂದು ಕುಮಾರಸ್ವಾಮಿ ಅವರು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಅನ್ಸಾರಿ ಅಸಮಾಧಾನ ಇದೇ ಮೊದಲಲ್ಲ

ಅನ್ಸಾರಿ ಅಸಮಾಧಾನ ಇದೇ ಮೊದಲಲ್ಲ

ಇಕ್ಬಾಲ್ ಅನ್ಸಾರಿ ಅವರು ಪಕ್ಷದ ನಾಯಕರ ವಿರುದ್ಧ ಅಸಮಾಧಾನಗೊಂಡಿರುವುದು ಇದೇ ಮೊದಲಲ್ಲ. ಹಿಂದೆಯೂ ಅವರು ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. 'ಜೆಡಿಎಸ್‌ ಪಕ್ಷ ದೇವೇಗೌಡ ಮತ್ತು ಅವರ ಮಕ್ಕಳ ಸ್ವಂತ ಬಸ್‌ ಇದ್ದ ಹಾಗೆ. ತಾವೆಲ್ಲ ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಂತೆ. ಜೆಡಿಎಸ್‌ ಶಾಸಕರು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರೆ, ದೇವೇಗೌಡರು ಅವರನ್ನು ದೂರವಿಡುತ್ತಿದ್ದಾರೆ' ಎಂದು ದೂರಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Gangavathi JDS MLA Iqbal Ansari unhappy over the recent developments in party. Ansari said, his supporters will contest for Zilla and Taluk panchayat election as Congress candidates.
Please Wait while comments are loading...