ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷ, ಸದಸ್ಯರ ನೇಮಕ ಮಾಡಿ ರಾಜ್ಯ ಸರ್ಕಾರದ ಆದೇಶ!
ಬೆಂಗಳೂರು, ಜು. 19: ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಕ ಮಾಡಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಮಾಡಿದ್ದಾರೆ. ಎರಡು ದಿನಗಳ ಹಿಂದಷ್ಟೇ ಅಂದರೆ ಕಳೆದ ಶನಿವಾರ ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಸರ್ಕಾರ ಆದೇಶ ಮಾಡಿತ್ತು.
ಒಕ್ಕಲಿಗ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಅವರನ್ನು ಸರ್ಕಾರ ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಮಾಡಿದೆ. ಜೊತೆಗೆ ತಮಕೂರು ಗ್ರಾಮಾಂತರ ಮಾಜಿ ಶಾಸಕ ಬಿ. ಸುರೇಶ್ ಗೌಡ ಹಾಗೂ ಬೆಂಗಳೂರಿನ ಸುರಭಿ ರಘು ಅವರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಆದೇಶವು ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಾಣ ಇಲಾಖೆ ಅಧೀನ ಕಾರ್ಯದರ್ಶಿ ವಿ. ಅಕ್ಕಮಹದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಕ್ಕಲಿಗ ಸಮುದಾಯಗಳ ಅಭಿವೃದ್ಧಿಗೆ ಹಾಗೂ ನಿಗಮ ಸ್ಥಾಪಿಸಲು 5 ನೂರು ಕೋಟಿ ರೂಪಾಯಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಕ್ಕಲಿಗ ಸಮುದಾಯಗಳಾದ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ 3 'ಎ' ನಲ್ಲಿ ಕ್ರ.ಸಂ-1ರ(ಚಿ) ಯಿಂದ (ಣ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ವ ಒಕ್ಕಲಿಗೆ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ(GOUDA)/ಗೌಡ(GOWDA), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಡರ್, ನಾಮಧಾರಿ ಗೌಡ, ಉಪ್ಪಿನ ಕೊಳಗ, ಉತ್ತಮ ಕೊಳಗ ಸಮುದಾಯಗಳ ಅಭಿವೃದ್ಧಿಗಾಗಿ 'ಒಕ್ಕಲಿಗ ಅಭಿವೃದ್ಧಿ ನಿಗಮ' ಕೆಲಸ ಮಾಡಲಿದೆ.

Recommended Video
ಒಕ್ಕಲಿಗ, ವಕ್ಕಲಿಗ, ಸರ್ವ ಒಕ್ಕಲಿಗೆ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ(GOUDA)/ಗೌಡ(GOWDA), ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಡರ್, ನಾಮಧಾರಿ ಗೌಡ, ಉಪ್ಪಿನ ಕೊಳಗ ಜಾತಿಗಳಿಗೆ 3ಎ ನಲ್ಲಿ ಮೀಸಲಾತಿಯನ್ನು ಕಲ್ಪಿಸಲಾಗಿದೆ.












Click it and Unblock the Notifications